ಮೈಸೂರು: ರಾಮ ಮಂದಿರ ಗುದ್ದಲಿ ಪೂಜೆಗೆ ಆಗಮಿಸಿದ ಪ್ರತಾಪ್ ಸಿಂಹಗೆ ಘೇರಾವ್, ವಾಪಸ್ ತೆರಳಿದ ಸಂಸದ
ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಇಂದು ಗುದ್ದಲಿ ಪೂಜೆ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ ಆಗಮಿಸಿದ್ದರು. ಈ ವೇಳೆ ಕೆಲ ಸ್ಥಳೀಯರು ಸಂಸದರನ್ನು ಘೇರಾವ್ ಹಾಕಿ ಮಹಿಷಾ ದಸರಕ್ಕೆ ವಿರೋಧ ನೆಪ ಹೇಳಿಕೊಂಡು ಅಪಮಾನ ಮಾಡಿ ದಲಿತ ವಿರೋಧಿ ಎಂದು ಕರೆದು ಕಾರ್ಯಕ್ರಮಕ್ಕೆ ಬರದಂತೆ ಅಡ್ಡಿಪಡಿಸಿದ್ದಾರೆ.
ಮೈಸೂರು, ಜ.22: ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಇಂದು ಗುದ್ದಲಿ ಪೂಜೆ ನಡೆಯುತ್ತಿದೆ. ಈ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ (Prathap Simha) ಅವರಿಗೆ ಕೆಲ ಸ್ಥಳೀಯರು ಘೇರಾವ್ ಹಾಕಿ ದಲಿತ ವಿರೋಧಿ ಎಂದು ಕರೆದು ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ ಘಟನೆ ಮೈಸೂರು ತಾಲೂಕು ಹಾರೋಹಳ್ಳಿಯಲ್ಲಿ ನಡೆದಿದೆ.
ಆಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ಮೂರ್ತಿಯ ಕೃಷ್ಣ ಶಿಲೆ ಕಲ್ಲು ಹಾರೋಹಳ್ಳಿ ಬಳಿಯ ಗಯಜ್ಜೇಗೌಡನಪುರದ ರಾಮದಾಸ್ ಅವರ ಜಮೀನಿನಲ್ಲಿ ಸಿಕ್ಕಿತ್ತು. ಈ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಈ ಹಿಂದೆ ತಿಳಿಸಿದ್ದರು. ಹೀಗಾಗಿ ಇಂದು ಭೂಮಿಪೂಜೆ ಮತ್ತು ರಾಮನ ಪೂಜೆ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ ಆಗಮಿಸಿದ್ದರು. ಈ ವೇಳೆ ಕೆಲ ಸ್ಥಳೀಯರು ಸಂಸದರನ್ನು ಘೇರಾವ್ ಹಾಕಿ ಮಹಿಷಾ ದಸರಕ್ಕೆ ವಿರೋಧ ನೆಪ ಹೇಳಿಕೊಂಡು ಅಪಮಾನ ಮಾಡಿ ದಲಿತ ವಿರೋಧಿ ಎಂದು ಕರೆದು ಕಾರ್ಯಕ್ರಮಕ್ಕೆ ಬರದಂತೆ ಅಡ್ಡಿಪಡಿಸಿದ್ದಾರೆ.
ಇದನ್ನೂ ಓದಿ: ಕೊಪ್ಪಳದಲ್ಲಿ ಹಿಂದೂ-ಮುಸ್ಲಿಂ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ
ಇದರಿಂದ ಬೇಸರಕೊಂಡ ಸಂಸದ ಪ್ರತಾಪ್ ಸಿಂಹ ಕಾರ್ಯಕ್ರಮದಲ್ಲಿ ಭಾಗಿಯಾಗದೆ ಹೊರ ನಡೆದರು. ಜಾತ್ಯಾತೀತವಾಗಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಜಾತಿ ತಂದು ಗಲಾಟೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ತಾ.ಪಂ. ಮಾಜಿ ಸದಸ್ಯ ಹಾರೋಹಳ್ಳಿ ಸುರೇಶ್, ದಸಂಸ ಮುಖಂಡ ನಟರಾಜ್, ಗ್ರಾಮಸ್ಥರಾದ ಚಲುವರಾಜ್, ಸೋಮಶೇಖರ್, ಬೀರಪ್ಪ, ಧನಗಳ್ಳಿ ಸ್ವಾಮಿ, ರಾಜೇಶ್ ರಾಜೇಂದ್ರ, ಕಿರಣ್, ಸಿ.ಡಿ.ಚಲುವರಾಜು, ಸುನೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ