ಮೈಸೂರು: ಮನೆಗೆ ನುಗ್ಗಿ ಮಗನ ಮುಂದೆಯೇ ತಂದೆಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಅಗರಬತ್ತಿ ವ್ಯಾಪಾತಿ ಸಂಪತ್ ಕುಮಾರ್ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ರಾಡ್ನಿಂದ ಸಂಪತ್ ಕುಮಾರ್ ಮೇಲೆ ಭೀಕರವಾಗಿ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಶಿಕ್ಷಕಿಯಾಗಿರುವ ಸಂಪತ್ ಕುಮಾರ್ ಪತ್ನಿ ಗಾಯತ್ರಿ ಮನೆಯಲ್ಲಿ ಇಲ್ಲದಿದ್ದಾಗ ಮಗ ಮುಂದೆಯೇ ಹತ್ಯೆ ನಡೆಸಲಾಗಿದೆ. ಘಟನೆ ಸಂಬಂಧ ಗಾಯತ್ರಿ ವಿವಿ ಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ.
ಬೈಕ್ ಸವಾರ ದುರ್ಮರಣ
ತುಮಕೂರು: ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಬಳಿ ನಡೆದಿದೆ. ಶಿಡ್ಲಕಟ್ಟೆ ಗ್ರಾಮದ ನಿವಾಸಿ ರಂಗಸ್ವಾಮಿ(23) ಸಾವನ್ನಪ್ಪಿದ ಯುವಕ. ಎಂದಿನಂತೆ ಕೆಲಸ ಮುಗಿಸಿಕೊಂಡು ಬೈಕ್ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದ ರಂಗಸ್ವಾಮಿ, ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮವಾಗಿ ರಂಗಸ್ವಾಮಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪಿಗಳು ಅರೆಸ್ಟ್
ಮೈಸೂರು: ವಿವಿಧ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅದ್ನಾನ್, ತಬ್ರೇಜ್, ಷರೀದ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 4.62 ಗ್ರಾಂ ಎಂಡಿಎಂಎ ಡ್ರಗ್ಸ್, 3 ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ.
ಬಂಧತ ಆರೋಪಿ ಅದ್ನಾನ್ ಖಾಸಗಿ ಕಾಲೇಜೊಂದರ ಅಂತಿಮ ವರ್ಷದ ಬಿಬಿಎಂ ವಿದ್ಯಾರ್ಥಿಯಾಗಿದ್ದಾನೆ. ಬೆಂಗಳೂರಿನ ಎಜಾಜ್ ಎಂಬಾತನಿಂದ ಎಂಡಿಎಂಎ ಎಂಬ ಡ್ರಗ್ಸ್ ಅನ್ನು ಪಡೆಯುತ್ತಿದ್ದ ಆರೋಪಿಗಳು, ಆನ್‌ಲೈನ್ ಮೂಲಕ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದು, ಮೂವರಿಂದ 1.04 ಗ್ರಾಂ, 1 ಗ್ರಾಂ, 2.58 ಗ್ರಾಂ ಎಂಡಿಎಂಎ ಪ್ಯಾಕೇಟ್ ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಪೂರೈಕೆಗಾಗಿ ಕಾಲೇಜು ವಿದ್ಯಾರ್ಥಿಗಳನ್ನು ಸಂಪರ್ಕಿಸುತ್ತಿದ್ದ ಮೊಬೈಕ್ ಕೂಡ ಪೊಲೀಸರ ಕೈವಶವಾಗಿದೆ. ಸದ್ಯ ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ.
Published On - 8:35 am, Tue, 9 August 22