Vande Bharat Express: ಮೈಸೂರು ಚೆನ್ನೈ ಮಧ್ಯೆ ಇಂದಿನಿಂದ ಮತ್ತೊಂದು ವಂದೇ ಭಾರತ್ ಎಕ್ಸ್​ಪ್ರೆಸ್

ಮಾರ್ಚ್ 14 ರಿಂದ ಏಪ್ರಿಲ್ 4 ರ ನಡುವಣ ಅವಧಿಯಲ್ಲಿ ಬೆಂಗಳೂರಿನಿಂದ ಸಂಚರಿಸುತ್ತಿದ್ದ, ಮಾರ್ಚ್​ 12ರಂದು ಪ್ರಧಾನಿ ಮೋದಿ ಚಾಲನೆ ನೀಡಿದ್ದ ಮೈಸೂರು ಚೆನ್ನೈ ನಡವಣ ಎರಡನೇ ವಂದೇ ಭಾರತ್ ರೈಲು ಇಂದಿನಿಂದ ಪೂರ್ಣ ಪ್ರಮಾಣದ ಸಂಚಾರ ನಡೆಸಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಮೈಸೂರಿನಿಂದ ಬೆಳಿಗ್ಗೆ 6 ಗಂಟೆಗೆ ಹೊರಟು ಮತ್ತು ಮಧ್ಯಾಹ್ನ 12.20 ಕ್ಕೆ ಎಂಜಿಆರ್ ಚೆನ್ನೈ ತಲುಪಲಿದೆ.

Vande Bharat Express: ಮೈಸೂರು ಚೆನ್ನೈ ಮಧ್ಯೆ ಇಂದಿನಿಂದ ಮತ್ತೊಂದು ವಂದೇ ಭಾರತ್ ಎಕ್ಸ್​ಪ್ರೆಸ್
ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು (ಸಂಗ್ರಹ ಚಿತ್ರ)
Follow us
|

Updated on: Apr 05, 2024 | 6:58 AM

ಬೆಂಗಳೂರು, ಏಪ್ರಿಲ್ 5: ಬೆಂಗಳೂರಿನ ಮೂಲಕ ಮೈಸೂರು ಮತ್ತು ಚೆನ್ನೈಗೆ ಸಂಪರ್ಕ ಕಲ್ಪಿಸುವ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲು ಶುಕ್ರವಾರ ಸಂಚಾರ ಆರಂಭಿಸಿದೆ. ಮೈಸೂರಿನಲ್ಲಿ ಪ್ರೀಮಿಯಂ ರೈಲನ್ನು ನಿರ್ವಹಿಸಲು ಅಗತ್ಯ ಸೌಲಭ್ಯಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ ಎಂದು ನೈಋತ್ಯ ರೈಲ್ವೆ (SWR) ಗುರವಾರವೇ ತಿಳಿಸಿತ್ತು. ಈ ರೈಲಿಗೆ ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಆನ್​ಲೈನ್ ಮೂಲಕ ಚಾಲನೆ ನೀಡಿದ್ದರು. ನಂತರ ರೈಲು ಭಾಗಶಃ ಸಂಚಾರ ಆರಂಭಿಸಿತ್ತು.

ವಂದೇ ಭಾರತ್ ರೈಲುಗಳನ್ನು ನಿರ್ವಹಿಸಲು ಮೈಸೂರಿನಲ್ಲಿ ಸೌಲಭ್ಯದ ಕೊರತೆಯಿಂದಾಗಿ ಮಾರ್ಚ್ 14 ರಿಂದ ಏಪ್ರಿಲ್ 4 ರ ನಡುವಣ ಅವಧಿಯಲ್ಲಿ ರೈಲು ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್​ಎಂವಿಟಿ) ಬೆಂಗಳೂರು ಬೈಯಪ್ಪನಹಳ್ಳಿ ಮತ್ತು ಚೆನ್ನೈ ಸೆಂಟ್ರಲ್ ನಡುವೆ ಸಂಚರಿಸುತ್ತಿತ್ತು. ಈ ರೈಲು ಬುಧವಾರ ಹೊರತುಪಡಿಸಿ ಪ್ರತಿ ದಿನ ಸಂಚರಿಸುತ್ತದೆ.

ಏಪ್ರಿಲ್ 5 ಮತ್ತು ಜುಲೈ 29 ರ ನಡುವೆ, ಬುಧವಾರದಂದು ಈ ರೈಲು ಸಂಚರಿಸುವುದಿಲ್ಲ. ಜುಲೈ 30 ರಿಂದ, ಇದು ಗುರುವಾರದಂದು ಕಾರ್ಯನಿರ್ವಹಿಸುವುದಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಇದು ಮೈಸೂರು ಮತ್ತು ಚೆನ್ನೈ ನಡುವಿನ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ. ಮೊದಲ (ರೈಲು ಸಂಖ್ಯೆ 20607/20608) ರೈಲು 2022 ರ ನವೆಂಬರ್​ ತಿಂಗಳಿನಿಂದ ಸಂಚರಿಸುತ್ತಿದೆ. ಇದು ಚೆನ್ನೈ ಸೆಂಟ್ರಲ್‌ನಿಂದ ಬೆಳಿಗ್ಗೆ 5.50 ಕ್ಕೆ ಹೊರಟು ಮಧ್ಯಾಹ್ನ 12.20 ಕ್ಕೆ ಮೈಸೂರು ತಲುಪುತ್ತದೆ. ಮೈಸೂರಿನಿಂದ ಮಧ್ಯಾಹ್ನ 1.05 ಕ್ಕೆ ಹೊರಟು ರಾತ್ರಿ 7.20 ಕ್ಕೆ ಚೆನ್ನೈ ಸೆಂಟ್ರಲ್ ತಲುಪುತ್ತದೆ.

ಇದನ್ನೂ ಓದಿ: ಮೈಸೂರು ಚೆನ್ನೈ ಮಧ್ಯೆ ಮತ್ತೊಂದು ವಂದೇ ಭಾರತ್ ಎಕ್ಸ್​ಪ್ರೆಸ್, ವೇಳಾಪಟ್ಟಿ ಇಲ್ಲಿದೆ

ರೈಲ್ವೇ ಸಚಿವಾಲಯದ ಅಧಿಸೂಚನೆಯ ಪ್ರಕಾರ, ರೈಲು ಸಂಖ್ಯೆ 20663 ಮೈಸೂರು-ಎಂಜಿಆರ್ ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ಮೈಸೂರಿನಿಂದ ಬೆಳಿಗ್ಗೆ 6 ಗಂಟೆಗೆ ಹೊರಟು ಮತ್ತು ಮಧ್ಯಾಹ್ನ 12.20 ಕ್ಕೆ ಎಂಜಿಆರ್ ಚೆನ್ನೈ ತಲುಪಲಿದೆ. ಚೆನ್ನೈ ಸೆಂಟ್ರಲ್‌ನಿಂದ ಸಂಜೆ 5 ಗಂಟೆಗೆ ಹೊರಟು ರಾತ್ರಿ 11.20 ಕ್ಕೆ ಮೈಸೂರು ತಲುಪುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!