ಮೈಸೂರಿನಲ್ಲೂ ಬ್ಲ್ಯಾಕ್ ಫಂಗಸ್ ಕಾಟ, ಸೋಂಕಿಗೆ ಮೈಸೂರು ಮಹಾನಗರ ಪಾಲಿಕೆಯ ಗುತ್ತಿಗೆ ನೌಕರರ ಸಾವು
ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆ ನೌಕರರಾದ 28 ವರ್ಷದ ವಿನೋದ್ ಮತ್ತು 38 ವರ್ಷದ ರವಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ರವಿ ಕೊವಿಡ್ ಮೃತ ದೇಹ ಸಾಗಿಸುವ ವಾಹನದ ಚಾಲಕನಾಗಿದ್ದ. 16 ದಿನದ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಕೊರೊನಾದಿಂದ ಗುಣಮುಖರಾಗಿ ಚೇತರಿಸಿಕೊಳ್ಳುತ್ತಿದ್ದಂತೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ....
ಮೈಸೂರು: ಜಿಲ್ಲೆಯಲ್ಲೂ ಬ್ಲ್ಯಾಕ್ ಫಂಗಸ್ ಕಾಲಿಟ್ಟಿದೆ. ಇಬ್ಬರು ಕೊವಿಡ್ ವಾರಿಯರ್‌ಗಳು ಮೃತಪಟ್ಟಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ಗುತ್ತಿಗೆ ನೌಕರರು ಕೊರೊನಾಗೆ ಬಲಿಯಾಗಿದ್ದಾರೆ. ಕೊವಿಡ್ ಶವ ಸಾಗಿಸುವ ವಾಹನದ ಚಾಲಕ ರವಿ(38)ಗೆ 16 ದಿನದ ಹಿಂದೆ ಕೊರೊನಾ ದೃಢಪಟ್ಟಿತ್ತು. ಕೊವಿಡ್‌ನಿಂದ ಗುಣಮುಖರಾದ ಬಳಿಕ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು ಚಿಕಿತ್ಸೆ ಪಡೆದರೂ ರವಿ ಬದುಕಲಿಲ್ಲ.
ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆ ನೌಕರರಾದ 28 ವರ್ಷದ ವಿನೋದ್ ಮತ್ತು 38 ವರ್ಷದ ರವಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ರವಿ ಕೊವಿಡ್ ಮೃತ ದೇಹ ಸಾಗಿಸುವ ವಾಹನದ ಚಾಲಕನಾಗಿದ್ದ. 16 ದಿನದ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಕೊರೊನಾದಿಂದ ಗುಣಮುಖರಾಗಿ ಚೇತರಿಸಿಕೊಳ್ಳುತ್ತಿದ್ದಂತೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಬಳಿಕ ಬ್ಲ್ಯಾಕ್ ಫಂಗಸ್ ಹಿನ್ನೆಲೆ ರವಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿ ಮೃತಪಟ್ಟಿದ್ದಾರೆ.
ಇನ್ನು ವಿನೋದ್ ಫಾಗಿಂಗ್ ವಾಹನದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೂರು ದಿನದ ಹಿಂದೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ; ರಾಜ್ಯದ ಈ ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ