ಹೊಸ ಜಿಲ್ಲೆ ಮಾಡ್ತೇನೆ ಎಂದ ವಿಶ್ವನಾಥ್​ರಿಂದ ನೀತಿಸಂಹಿತೆ ಉಲ್ಲಂಘನೆ: ಕಾಂಗ್ರೆಸ್

ಮೈಸೂರು: ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಹುಣಸೂರನ್ನು ಜಿಲ್ಲೆ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಇದು ನೀತಿಸಂಹಿತೆಯ ಉಲ್ಲಂಘನೆಯಾಗಿದೆ. ಈ ವಿಚಾರವಾಗಿ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರು ಎಸಿ ಡಾ.ವೆಂಕಟರಾಜುಗೆ ದೂರು ನೀಡಿದ್ದಾರೆ. ವಿಜಯನಗರದಲ್ಲಿ ಸಾವಿರಾರು ಸೀರೆ ಪತ್ತೆ ವಿಚಾರ ಸಂಬಂಧ ದಾಖಲೆಗಳ ಸಮೇತ ಕಾಂಗ್ರೆಸ್ ನಿಯೋಗ ದೂರು ನೀಡಿದೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೂರು ಸಲ್ಲಿಕೆಯಾಗಿದೆ. ಬಿಜೆಪಿಯಿಂದ ಹುಣಸೂರು ಉಪ ಚುನಾವಣೆಗಾಗಿ ಹಂಚಲು ತಂದಿದ್ದ […]

ಹೊಸ ಜಿಲ್ಲೆ ಮಾಡ್ತೇನೆ ಎಂದ ವಿಶ್ವನಾಥ್​ರಿಂದ ನೀತಿಸಂಹಿತೆ ಉಲ್ಲಂಘನೆ: ಕಾಂಗ್ರೆಸ್
ಸಾಧು ಶ್ರೀನಾಥ್​

Updated on: Nov 16, 2019 | 5:35 PM

ಮೈಸೂರು: ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಹುಣಸೂರನ್ನು ಜಿಲ್ಲೆ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಇದು ನೀತಿಸಂಹಿತೆಯ ಉಲ್ಲಂಘನೆಯಾಗಿದೆ. ಈ ವಿಚಾರವಾಗಿ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರು ಎಸಿ ಡಾ.ವೆಂಕಟರಾಜುಗೆ ದೂರು ನೀಡಿದ್ದಾರೆ.

ವಿಜಯನಗರದಲ್ಲಿ ಸಾವಿರಾರು ಸೀರೆ ಪತ್ತೆ ವಿಚಾರ ಸಂಬಂಧ ದಾಖಲೆಗಳ ಸಮೇತ ಕಾಂಗ್ರೆಸ್ ನಿಯೋಗ ದೂರು ನೀಡಿದೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೂರು ಸಲ್ಲಿಕೆಯಾಗಿದೆ. ಬಿಜೆಪಿಯಿಂದ ಹುಣಸೂರು ಉಪ ಚುನಾವಣೆಗಾಗಿ ಹಂಚಲು ತಂದಿದ್ದ 30,000 ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸೀರೆ ಚೀಲಗಳ ಮೇಲೆ ಯೋಗೇಶ್ವರ್ ಹಾಗೂ ಬಿಜೆಪಿ ನಾಯಕರ ಫೋಟೊಗಳಿವೆ. ಆದರೆ ವಿಜಯನಗರದ ಗಂಗಣ್ಣ ಎಂಬುವವರ ಮೇಲೆ ಎಫ್ ಐಆರ್ ದಾಖಲಾಗಿದೆ. ಅಧಿಕಾರಿಗಳು ಸಹ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಚುನಾವಣಾ ಆಯೋಗ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸುವ ಬಗ್ಗೆ ಅನುಮಾನವಿದೆ ಎಂದು ಕಾಂಗ್ರೆಸ್ ಮುಖಂಡರು ಅತಂಕ ವ್ಯಕ್ತಪಡಿಸಿದ್ದಾರೆ.

Published On - 5:30 pm, Sat, 16 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us