ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ: ಸಚಿವ ಎಸ್​ ಟಿ ಸೋಮಶೇಖರ್

Shilpa Nag: ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ವಿಚಾರವಾಗಿ, ಪಾಲಿಕೆ ಪ್ರಭಾರ ಮೇಯರ್ ಅನ್ವರ್ ಬೇಗ್ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಆಯುಕ್ತರು ರಾಜೀನಾಮೆ ನೀಡಬಾರದು‌. ಪಾಲಿಕೆಯ 65 ಸದಸ್ಯರು ಶಿಲ್ಪಾನಾಗ್​ರ ಜತೆಗೆ ಇದ್ದೇವೆ ಎಂದು ತಿಳಿಸಿದರು.

ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ: ಸಚಿವ ಎಸ್​ ಟಿ ಸೋಮಶೇಖರ್
ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್
Follow us
TV9 Web
| Updated By: guruganesh bhat

Updated on:Jun 03, 2021 | 8:32 PM

ಮೈಸೂರು: ಮಹಾನಗರ ಪಾಲಿಕೆಯ ಆಯುಕ್ತೆ ಶಿಲ್ಪಾ ನಾಗ್ ಅತ್ಯಂತ ದಕ್ಷತೆ, ಪ್ರಾಮಾಣಿಕತೆ ಮತ್ತು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ರಾಜಿನಾಮೆಯನ್ನು ಸರ್ಕಾರ ಯಾವ ಕಾರಣಕ್ಕೂ ಅಂಗೀಕಾರ ಮಾಡುವುದಿಲ್ಲ. ಈ ವಿಚಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಮಾತನಾಡುತ್ತೇನೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪತ್ರಿಕಾ ಪ್ರಕಟಣೆ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಶಿಲ್ಪಾ ನಾಗ್ ಅವರು ಸೇವೆಯಲ್ಲಿ ಮುಂದುವರಿಯುವಂತೆ ಮನವೊಲಿಸಲಾಗುವುದು. ಅವರೊಂದಿಗೆ ದೂರವಾಣಿ ಮೂಲಕ ಮಾತನಾಡುತ್ತೇನೆ. ಶುಕ್ರವಾರ ನಾನು ಮೈಸೂರು ಪ್ರವಾಸ ಕೈಗೊಂಡಿದ್ದು, ಆ ವೇಳೆ ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ವಿಚಾರವಾಗಿ, ಪಾಲಿಕೆ ಪ್ರಭಾರ ಮೇಯರ್ ಅನ್ವರ್ ಬೇಗ್ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಆಯುಕ್ತರು ರಾಜೀನಾಮೆ ನೀಡಬಾರದು‌. ಪಾಲಿಕೆಯ 65 ಸದಸ್ಯರು ಶಿಲ್ಪಾ ನಾಗ್​ರ ಜತೆಗೆ ಇದ್ದೇವೆ. ಜಿಲ್ಲಾಧಿಕಾರಿ ಇಷ್ಟು ಕಿರುಕುಳ ನೀಡಿದ್ದಾರೆ ಅಂತಾ ನಮಗೂ ಗೊತ್ತಿರಲಿಲ್ಲ. ಮೈಸೂರು ಪಾಲಿಕೆಗಷ್ಟೇ ಅಲ್ಲ, ದೇಶಕ್ಕೆ ಈ ರೀತಿಯ ಅಧಿಕಾರಿ ಬೇಕು‌ ಎಂದು ತಿಳಿಸಿದರು.

ಸರ್ಕಾರಿ‌ ಕಾರು ಬಿಟ್ಟು ತೆರಳಿರುವ ಶಿಲ್ಪಾ ನಾಗ್ ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ಕೊಡುತ್ತೇನೆ ಎಂದು ಸುದ್ದಿಗೋಷ್ಠಿ ನಡೆಸಿದ ಬಳಿಕ‌ ಸ್ನೇಹಿತರ ಕಾರಿ‌ನಲ್ಲಿ ತೆರಳಿದರು. ಆನಂತರ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರ ಕಾರಿನ ಚಾಲಕ‌, ನೀವು ಮನೆಗೆ ಹೋಗಿ ಎಂದು ನಮ್ಮ ಬಳಿ ಹೇಳಿ ತೆರಳಿದ್ದಾರೆ. ಅವರು ಕಳೆದ ಮೂರ್ನಾಲ್ಕು ದಿನದಿಂದ ಊಟವನ್ನು ಸರಿಯಾಗಿ ಮಾಡಿಲ್ಲ. ಕಚೇರಿಗೆ ಊಟ ತೆಗೆದುಕೊಂಡು ಹೋದರೂ ಊಟ ಮಾಡುತ್ತಿರಲಿಲ್ಲ. ಬೇಸರದಿಂದ ಇದಂತೆ ಇದ್ದರು. ಅವರು ತುಂಬ ಶ್ರಮದಿಂದ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಯಾವ ಕಾರಣಕ್ಕೆ ಬೇಸರ ಇತ್ತು ಎಂಬುದನ್ನು ನಮಗೆ ತಿಳಿಸಿರಲಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಸಿನಿಮಾ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್​; ಸಿಎಂ ಯಡಿಯೂರಪ್ಪಗೆ ಧನ್ಯವಾದ ಹೇಳಿದ ಸುನೀಲ್ ಪುರಾಣಿಕ್

ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು, ಕನ್ನಡಿಗರಿಗಾದ ನೋವಿಗೇನು ಪರಿಹಾರ?: ಮಾಜಿ ಸಿಎಂ ಕುಮಾರಸ್ವಾಮಿ

(Mysuru corporation commissioner Shilpa Nag resignation will not be accepted says Karnataka Minister ST Somashekhar)

Published On - 7:13 pm, Thu, 3 June 21