Mysuru Dasara 2021: ಜಗದ್ವಿಖ್ಯಾತ ದಸರಾಗೆ ಸಿದ್ಧತೆ, ಎರಡು ಆನೆಗಳನ್ನ ಹೆಚ್ಚುವರಿಯಾಗಿ ಕರೆಸಿಕೊಳ್ಳಲು ನಿರ್ಧಾರ

ಸದ್ಯ ವಿವಿಧ ಕ್ಯಾಂಪ್ ಗಳಲ್ಲಿರುವ 14 ಆನೆಗಳನ್ನ ಪಟ್ಟಿಗೆ ಸೇರಿಸಲಾಗಿದೆ. ಸರಳ ದಸರಾ ಮಾಡಿದರೆ 7 ಆನೆಗಳನ್ನ ಕರೆಸಿಕೊಳ್ಳಲು ಚಿಂತನೆ ಮಾಡಲಾಗಿದೆ.

Mysuru Dasara 2021: ಜಗದ್ವಿಖ್ಯಾತ ದಸರಾಗೆ ಸಿದ್ಧತೆ, ಎರಡು ಆನೆಗಳನ್ನ ಹೆಚ್ಚುವರಿಯಾಗಿ ಕರೆಸಿಕೊಳ್ಳಲು ನಿರ್ಧಾರ
ಜಗದ್ವಿಖ್ಯಾತ ದಸರಾಗೆ ಸಿದ್ಧತೆ, ಎರಡು ಆನೆಗಳನ್ನ ಹೆಚ್ಚುವರಿಯಾಗಿ ಕರೆಸಿಕೊಳ್ಳಲು ನಿರ್ಧಾರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 24, 2021 | 8:57 AM

ಮೈಸೂರು: ಕಳೆದ ವರ್ಷದಂತೆ ಈ ಬಾರಿಯೂ ಕೊರೊನಾ ಮಹಾಮಾರಿ ನಾಡನ್ನು ಕಾಡುತ್ತಿದೆ. ಈ ಮಧ್ಯೆ, ಜಗದ್ವಿಖ್ಯಾತ ಮೈಸೂರು ದಸರಾಗೆ ಸಿದ್ಧತೆ ಆರಂಭವಾಗಿದೆ. ಎರಡು ಆನೆಗಳನ್ನ ಹೆಚ್ಚುವರಿಯಾಗಿ ಕರೆಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಮೈಸೂರು ದಸರಾ ಜಂಬೂ ಸವಾರಿಗೆ ಅರಣ್ಯಾಧಿಕಾರಿಗಳು ಈ ಬಾರಿ ಒಟ್ಟು 14 ಆನೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹೈಪವರ್ ಕಮಿಟಿ ಸಭೆಗೂ ಮುನ್ನ, ಡಿಸಿಎಫ್ ಕರಿಕಾಳ‌ನ್ ನೇತೃತ್ವದಲ್ಲಿ ಆನೆಗಳ ಆಯ್ಕೆ ಮಾಡಿಕೊಳ್ಳಲಾಗಿದೆ. ಬೆಂಗಳೂರಿನ‌ ಮುಖ್ಯ ಅರಣ್ಯ ಕಚೇರಿಗೆ ಆನೆಗಳ ಪಟ್ಟಿ ರವಾನೆ ಮಾಡಲಾಗಿದ್ದು, ಸರಳ ದಸರಾ ಮಾಡಿದರೆ 7 ಆನೆ ಕರೆಸಿಕೊಳ್ಳಲು ಚಿಂತನೆ ನಡೆಸಲಾಗಿದೆ.

ಸದ್ಯ ವಿವಿಧ ಕ್ಯಾಂಪ್ ಗಳಲ್ಲಿರುವ 14 ಆನೆಗಳನ್ನ ಪಟ್ಟಿಗೆ ಸೇರಿಸಲಾಗಿದೆ. ಸರಳ ದಸರಾ ಮಾಡಿದರೆ 7 ಆನೆಗಳನ್ನ ಕರೆಸಿಕೊಳ್ಳಲು ಚಿಂತನೆ ಮಾಡಲಾಗಿದೆ. ಆನೆ ಕಾಡು, ದುಬಾರೆ, ಮತ್ತಿಗೋಡು,ಬಂಡೀಪುರ ಆನೆ ಶಿಬಿರದಿಂದ ಆನೆಗಳ ಆಯ್ಕೆ ನೆಡೆಸಲಾಗಿದೆ. ಸದ್ಯ ವಿಕ್ರಮ್, ವಿಜಯಾ, ಅಭಿಮನ್ಯು, ಗೋಪಾಲ ಸ್ವಾಮಿ, ಭೀಮಾ, ಮಹೇಂದ್ರ, ಧನಂಜಯ, ಪ್ರಶಾಂತ್, ಗೋಪಿ, ಹರ್ಷ, ಕಾವೇರಿ, ಲಕ್ಷ್ಮಣ, ಚೈತ್ರಾ, ಮಹಾರಾಷ್ಟ್ರ ಭೀಮಾ ಆನೆಗಳು ದಸರಾ ಜಂಬೂ ಸವಾರಿಗೆ ಆಯ್ಕೆಗೊಂಡಿವೆ.

ಸರಳ ದಸರಾವಾದರೆ 14 ಆನೆಗಳಲ್ಲಿ 7 ಆನೆಗಳು ನಾಡಿಗೆ ಕರೆಸಿಕೊಳ್ಳುವ ಚಿಂತನೆಯಿದೆ. ಕಳೆದ ವರ್ಷ 5 ಆನೆ ಕರೆಸಿಕೊಳ್ಳಲಾಗಿತ್ತು. ಈ ಬಾರಿ ಆನೆಗಳ ಆರೋಗ್ಯ ಹಾಗೂ ಮುಂಜಾಗ್ರತೆ ದೃಷ್ಟಿಯಿಂದ ಎರಡು ಆನೆಗಳನ್ನ ಹೆಚ್ಚುವರಿಯಾಗಿ ಕರೆಸಿಕೊಳ್ಳಲು ನಿರ್ಧಾರ ಮಾಡಲಾಗಿದೆ.

ಮೈಸೂರು ದಸರಾ ಆಚರಣೆ, ಕೊವಿಡ್ 3ನೇ ಅಲೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯ ವಿವರ ಇಲ್ಲಿದೆ

(mysuru dasara 2021 2 more elephants ready for jamboo savari)

Published On - 8:55 am, Tue, 24 August 21

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ