AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಮಹೋತ್ಸವದ ಕುರಿತು ಇಂದು ಮಹತ್ವದ ಸಭೆ

ನಾಡಹಬ್ಬ ಮೈಸೂರು ದಸರಾ 2023 ಕುರಿತು ಇಂದು (ಜುಲೈ 31) ಮಹತ್ವದ ನಡೆಯಲಿದ್ದು, ಸಭೆಯಲ್ಲಿ ಈ ಬಾರಿ ದಸರಾ ಹೇಗೆಲ್ಲ ಆಚರಿಸಬೇಕು? ಯಾರನ್ನು ಉದ್ಘಾಟನೆಗೆ ಆಹ್ವಾನಿಸಬೇಕೆಂಬ ಚರ್ಚೆಗಳು ನಡೆಯಲಿವೆ.

ಮೈಸೂರು ದಸರಾ ಮಹೋತ್ಸವದ ಕುರಿತು ಇಂದು ಮಹತ್ವದ ಸಭೆ
ಮೈಸೂರು ದಸರಾ ಸಂಗ್ರಹ ಚಿತ್ರ
ರಾಮ್​, ಮೈಸೂರು
| Edited By: |

Updated on:Aug 04, 2023 | 10:45 AM

Share

ಬೆಂಗಳೂರು/ಮೈಸೂರು, (ಜುಲೈ 31): ವಿಶ್ವ ವಿಖ್ಯಾತ ಮೈಸೂರು ದಸರಾ 2023 (Mysuru Dasara 2023) ಕುರಿತು ಇಂದು (ಜುಲೈ 31) ಹೈ ಪವರ್ ಕಮಿಟಿ ಸಭೆ ನಡೆಯಲಿದೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮೈಸೂರು ಮಂಡ್ಯ ಚಾಮರಾಜನಗರ ಭಾಗದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಈ ಬಾರಿಯೂ ಸಹ ಅದ್ದೂರಿಯಾಗಿ ದಸರಾ ಆಚರಣೆಗೆ ಚಿಂತನೆಗಳು ನಡೆದಿದ್ದು, ಇಂದಿನ ಸಭೆಯಲ್ಲಿ ಅಂತಿಮ ನಿರ್ಧಾರವಾಗಲಿದೆ.

ಇದನ್ನೂ ಓದಿ: Mysuru Dasara 2023: ದಸರಾ; ಆಗಸ್ಟ್ ಅಂತ್ಯದಲ್ಲಿ ಮೈಸೂರಿಗೆ ಗಜಪಯಣ

ಸಿದ್ದರಾಮಯ್ಯ ಎರಡನೇ ಭಾರಿ ಮುಖ್ಯಮಂತ್ರಿಯಾದ ಬಳಿಕ ಮೊದಲ ದಸರಾ ಆಗಿದ್ದು, ಇದರೊಂದಿಗೆ ಸಿದ್ದರಾಮಯ್ಯ ಸಿಎಂ ಆಗಿ 6ನೇ ಬಾರಿಗೆ ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಈ ಬಾರಿ ಮೈಸೂರು ದಸರಾವನ್ನು ಉದ್ಘಾಟನೆಗೆ ಯಾರನ್ನು ಆಹ್ವಾನಿಸುತ್ತಾರೆ ಎನ್ನುವ ಕುತೂಹಲ ಮೂಡಿಸಿದೆ.

ಹಿಂದಿನ ವರ್ಷದಂತೆ ಅಭಿಮನ್ಯುವೇ ಚಿನ್ನದ ಅಂಬಾರಿ ಹೊತ್ತು ಸಾಗುವ ನಿರೀಕ್ಷೆ ಇದೆ. ಅರ್ಜುನ ಈ ಬಾರಿಯ ದಸರಾ ಮೆರವಣಿಗೆ ಅವಕಾಶ ವಂಚಿತನಾಗುವ ಸಾಧ್ಯತೆ ಇದೆ. ಗೋಪಾಲಸ್ವಾಮಿ, ಗಜೇಂದ್ರ ಕೂಡ ಕೂಡ ಈ ಬಾರಿಯ ದಸರಾದಲ್ಲಿ ಪಾಲ್ಗೊಳ್ಳುವುದು ಅನುಮಾನ ಎನ್ನಲಾಗಿದೆ.

ಈ ಬಾರಿಯ ದಸರಾ ಅಕ್ಟೋಬರ್ 15ರಿಂದ ಆರಂಭವಾಗಲಿದ್ದು, ಅಕ್ಟೋಬರ್‌ 23ರಂದು ಆಯುಧ ಪೂಜೆ ಮತ್ತು ಅಕ್ಟೋಬರ್‌ 24ರಂದು ವಿಜಯದಶಮಿದಂದ ಜಂಬೂ ಸವಾರಿ ನಡೆಯಲಿದೆ. ಇದಕ್ಕಾಗಿ ಎಲ್ಲಾ ಸಕಲ ಸಿದ್ಧತೆಗಳು ಆರಂಭವಾಗಿವೆ. ಇನ್ನು ದಸರಾ ಆನೆಗಳ ಆರೋಗ್ಯದ ಮೇಲೆ ವಿಶೇಷ ಕಾಳಜಿವಹಿಸುವ ಉದ್ದೇಶದಿಂದ ಅರಣ್ಯ ಇಲಾಖೆ ಈ ಬಾರಿ ಹೆಣ್ಣಾನೆಗಳಿಗೆ ‘ಪ್ರೆಗ್ನೆನ್ಸಿ ಟೆಸ್ಟ್’ ಸಹ ನಡೆಸಿದೆ.

ಅಕ್ಟೋಬರ್ 24ರಂದು ವಿಜಯ ದಶಮಿಯಂದು ನಡೆಯಲಿರುವ ಜಂಬು ಸವಾರಿಯಲ್ಲಿ ಪಾಲ್ಗೊಳ್ಳಲು ಈಗಾಗಲೇ ಆನೆಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ಜಂಬೂ ಸವಾರಿಗಾಗಿ (Jamboo Savari) ಆನೆಗಳ ಮೊದಲ ತಂಡ ಆಗಸ್ಟ್​​ನಲ್ಲಿ ಮೈಸೂರಿಗೆ ಆಗಮಿಸಲಿವೆ ಎನ್ನಲಾಗಿದೆ. ಹಿಂದಿನ ವರ್ಷದಂತೆ ಅಭಿಮನ್ಯುವೇ ಚಿನ್ನದ ಅಂಬಾರಿ ಹೊತ್ತು ಸಾಗುವ ಸಾಧ್ಯತೆಗಳಿವೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:31 am, Mon, 31 July 23

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ