Mahisha Dasara: ಮಹಿಷ ದಸರಾದಿಂದ ಮೈಸೂರು ಹೆಸರೇ ಬದಲಾವಣೆ..!

ಮಹಿಷ ದಸರಾ ಆಚರಣಾ ಸಮಿತಿಯಿಂದ ಆಹ್ವಾನ‌ ಪತ್ರಿಕೆ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಮೈಸೂರು ಬದಲಿಗೆ ಮಹಿಷೂರು ಎಂದು ಮತ್ತು ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಎಂದು ಹೆಸರಿಸಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಆ ಮೂಲಕ ಮಹಿಷ ದಸರಾ ಹೆಸರಿನಲ್ಲಿ ಈಗಾಗಲೇ ಸಂಘರ್ಷ ಶುರುವಾಗಿದೆ.

Mahisha Dasara: ಮಹಿಷ ದಸರಾದಿಂದ ಮೈಸೂರು ಹೆಸರೇ ಬದಲಾವಣೆ..!
ಮಹಿಷ ದಸರಾದಿಂದ ಮೈಸೂರು ಹೆಸರೇ ಬದಲಾವಣೆ..!
Follow us
ದಿಲೀಪ್​, ಚೌಡಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 26, 2024 | 10:38 PM

ಮೈಸೂರು, ಸೆಪ್ಟೆಂಬರ್ 26: ವಿಶ್ವವಿಖ್ಯಾತ ದಸರಾ (Dasara) ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ತಾಲೀಮು ಚುರುಕುಗೊಳಿಸಲಾಗಿದೆ. ಈ ನಡುವೆ ಮಹಿಷ ದಸರಾ ಆಚರಣಾ ಸಮಿತಿಯಿಂದ ಮೈಸೂರು ಹೆಸರೇ ಬದಲಾವಣೆ ಮಾಡಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದೆ.

ಹೌದು. ಮಹಿಷ ದಸರಾ ಆಚರಣಾ ಸಮಿತಿಯಿಂದ ಆಹ್ವಾನ‌ ಪತ್ರಿಕೆ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಮೈಸೂರು ಬದಲಿಗೆ ಮಹಿಷೂರು ಎಂದು ಮತ್ತು ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಎಂದು ಹೆಸರಿಸಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ.

ಸೆಪ್ಟೆಂಬರ್​ 29ರಂದು ಮಹಿಷ ದಸರಾ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರನಿಗೆ ಪುಷ್ಪಾರ್ಚನೆ ನಡೆಯಲಿದ್ದು, ನಂತರ ಪುರಭವನದ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?

ಈಗಾಗಲೇ ಮಹಿಷ ದಸರಾ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಚಾಮುಂಡಿ ಬೆಟ್ಟ ಚಲೋ ಮಾಡುವುದಾಗಿ ಪ್ರತಾಪ್ ಸಿಂಹ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಹಿಷ ದಸರಾ ಹೆಸರಿನಲ್ಲಿ ಈಗಾಗಲೇ ಸಂಘರ್ಷ ಶುರುವಾಗಿದೆ.

ಪ್ರತಿ ವರ್ಷದಂತೆ ಈ ಬಾರಿ ಕೂಡ ಮಹಿಷ ದಸರಾ ವಿವಾದ ತಲೆ ಎತ್ತಿದೆ. ಈ ಬಾರಿಯು ಅದ್ದೂರಿಯಾಗಿ ಮಹಿಷ ದಸರಾವನ್ನು ಆಚರಣೆ ನಡೆಸಲು ದಲಿತ ಸಂಘಟನೆಗಳ ಒಕ್ಕೂಟ ಮುಂದಾಗಿವೆ. ಚಾಮರಾಜನಗರ ಜಿಲ್ಲೆಯಿಂದ ಸುಮಾರು 5 ಸಾವಿರ ಮಂದಿ ಈ ಕಾರ್ಯಕ್ರಮಕ್ಕೆ ತೆರಳಿದ್ದು ವಿಶೇಷ ಬಸ್ಸಿನ ವ್ಯವಸ್ಥೆಯನ್ನ ಮಾಡಲಾಗಿದೆ. ಇದರ ಜೊತೆಗೆ ರಾಜ್ಯಾದ್ಯಂತ ಸುಮಾರು 30 ಸಾವಿರ ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅಸಲಿಗೆ ಈ ಮಹಿಷ ದಸರಾ ಎಂದರೇನು? ಇದನ್ನಯಾಕೆ ಆಚರಣೆ ಮಾಡಲಾಗುತ್ತೆಂದು ನೋಡುವುದಾದರೆ, ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಆಳ್ವಿಕೆ ನಡೆಸುತ್ತಿದ್ದವರು ಮಹಿಷ ರಾಜರು. ಅವರು ರಾಕ್ಷಸಕುಲದವರಾದರೂ ದಕ್ಷಿಣ ಭಾರತದ ಮಹಿಷ ಮಂಡಲದಿಂದ ಹಿಡಿದು ವಿಂದ್ಯಾಪರ್ವತದ ವರೆಗೂ ಇವರ ಆಳ್ವಿಕೆಯಿತ್ತು.

ಇದನ್ನೂ ಓದಿ: ಮೈಸೂರು ಅರಮನೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ: ಯಾವಾಗ? ಇಲ್ಲಿದೆ ವಿವರ

ವೈದಿಕ ದಾಳಿಯನ್ನ ದಿಟ್ಟತನದಿಂದ ಎದುರಿಸಿ ಪ್ರಜೆಗಳ ಉದ್ದಾರಕ್ಕೆ ದುಡಿದವರು. ಹಾಗಾಗಿ ಇಂತ ಮಹಿಷ ಕುಲದವರ ಕೊಡುಗೆ ಮೈಸೂರಿಗೆ ಅಪಾರ ಪ್ರಮಾಣದಲ್ಲಿದ್ದು ವರ್ಷಕ್ಕೊಮ್ಮೆ ಮಹಿಷ ದಸರಾವನ್ನ ದಲಿತ ಸಂಘಟನೆಗಳ ಒಕ್ಕೂಟ ನೆವರೇರಿಸಿಕೊಂಡು ಬಂದಿದೆ. ಆದರೆ ಮಹಿಷ ದಸರಾ ಆಚರಣೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರೋಧ ವ್ಯಕ್ತ ಪಡಿಸಿದ್ದು ದಲಿತ ಸಂಘಟನೆಗಳ ಒಕ್ಕೂಟದ ಕೆಂಗಣ್ಣಿಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್
ಕಳೆದ ತಿಂಗಳು ಕೂಡ ಆಚರಿಸಲಾಗಿತ್ತು ಕಲಬುರಗಿ ಬಂದ್
ಕಳೆದ ತಿಂಗಳು ಕೂಡ ಆಚರಿಸಲಾಗಿತ್ತು ಕಲಬುರಗಿ ಬಂದ್
ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ
ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ