AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಮೈಸೂರು ದಸರಾ ಉದ್ಘಾಟನೆಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೂರು ಪಿಐಎಲ್​ಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ, ಅರ್ಜಿ ಸಲ್ಲಿಸಿದ್ದ ಬಿಜೆಪಿ ನಾಯಕ ಪ್ರತಾಪ್ ಸಿಂಹ ಹಾಗೂ ಇತರರಿಗೆ ಹಿನ್ನಡೆಯಾದಂತಾಗಿದೆ. ಯಾವುದೇ ಹಕ್ಕು ಉಲ್ಲಂಘನೆ ಆಗಿಲ್ಲದೇ ಇರುವುದರಿಂದ ಅರ್ಜಿ ವಜಾ ಮಾಡಲಾಗುತ್ತಿದೆ ಎಂದು ಕೋರ್ಟ್ ಹೇಳಿದೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಪ್ರತಾಪ್ ಸಿಂಹ, ಬಾನು ಮುಷ್ತಾಕ್ & ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on:Sep 15, 2025 | 12:14 PM

Share

ಮೈಸೂರು, ಸೆಪ್ಟೆಂಬರ್ 15: ದಸರಾ (Dasara) ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ (Banu Mushtaq) ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ (Pratap Simha) ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ, ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದಿದೆ.

ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನಿಸಿದ್ದು ಸರಿಯಲ್ಲ. ಅವರು ಹಿಂದೂ ವಿರೋಧಿ, ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಕೀಲ ಸುದರ್ಶನ್ ವಾದ ಮಂಡಿಸಿದರು. ಭುವನೇಶ್ವರಿ, ಕನ್ನಡ ಬಾವುಟದ ಬಗ್ಗೆ ಮುಷ್ತಾಕ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದ ವಕೀಲರು, ಬಾನು ಮುಷ್ತಾಕ್ ನೀಡಿದ ಹೇಳಿಕೆಯ ಇಂಗ್ಲಿಷ್ ಅನುವಾದ ಸಲ್ಲಿಕೆ ಮಾಡಿದರು.

ಪ್ರತಾಪ್ ಸಿಂಹ ವಕೀಲರ ವಾದಕ್ಕೆ ಕೋರ್ಟ್ ಹೇಳಿದ್ದೇನು?

ಪ್ರತಾಪ್ ಸಿಂಹ ಪರ ವಕೀಲರು ಮಂಡಿಸಿದ್ದ ವಾದಕ್ಕೆ ಪ್ರತಿಯಾಗಿ, ಈ ದೇಶದಲ್ಲಿ ತಮ್ಮ ಅಭಿಪ್ರಾಯವನ್ನು ಹೇಳುವುದು ತಪ್ಪಲ್ಲವಲ್ಲ. ನಿಮ್ಮ ಯಾವ ಹಕ್ಕು ಉಲ್ಲಂಘನೆಯಾಗಿದೆ ಹೇಳಿ ಸಿಜೆ ವಿಭು ಬಖ್ರು ಪ್ರಶ್ನೆ ಮಾಡಿದರು. ನಿಮ್ಮ ಅಭಿಪ್ರಾಯವನ್ನು ಕೂಡಾ ಸೂಕ್ತ ವೇದಿಕೆಯಲ್ಲಿ ಹೇಳಬಹುದು. ಆದರೆ ಸಂವಿಧಾನ ನೀಡಿರುವ ಯಾವ ಹಕ್ಕು ಉಲ್ಲಂಘನೆಯಾಗಿದೆ ಹೇಳಿ ಎಂದರು.

ಪೂಜಾರಿಯ ಪೂಜೆಯ ಹಕ್ಕನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು. ವ್ಯಕ್ತಿಯ ಆಸ್ತಿಯನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು. ಆದರೆ ಇಲ್ಲಿ ನಿಮ್ಮ ಯಾವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ಸಿಜೆ ಪ್ರಶ್ನಿಸಿದರು.

ಆಗ ಪ್ರತಾಪ್ ಸಿಂಹ ಪರ ವಕೀಲರು, ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಯ ಸಂಪ್ರದಾಯವಿದೆ. ಆದರೆ, ಬಾನು ಮುಷ್ತಾಕ್ ಅವರಿಂದ ಉದ್ಘಾಟನೆಗೆ ವಿರೋಧವಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಶಿಷ್ಟಾಚಾರ ಪಾಲಿಸುವುದು ಬೇರೆ ವಿಚಾರ. ಆದರೆ ನಿಮ್ಮ ಕಾನೂನಾತ್ಮಕ ಹಕ್ಕಿನ ಬಗ್ಗೆ ವಾದ ಮಂಡಿಸಿ ಎಂದಿದೆ. ಅಲ್ಲದೆ, ಧರ್ಮವನ್ನು ಪಾಲಿಸುವ ಹಕ್ಕನ್ನು ಸಂವಿಧಾನದಲ್ಲಿ ಗುರುತಿಸಲಾಗಿದೆ ಎಂದಿದೆ.

ಇದನ್ನೂ ಓದಿ: ಮೈಸೂರು ದಸರಾ: ಚಾಮುಂಡೇಶ್ವರಿ ದೇವಿ ಗರ್ಭಗುಡಿ ಪ್ರಭಾವಳಿ, ಬೆಳ್ಳಿ ಬಾಗಿಲು, ಪಲ್ಲಕ್ಕಿ ಶುಚಿ ಕಾರ್ಯ ಶುರು

ಪ್ರತಾಪ್ ಸಿಂಹ ಮಾತ್ರವಲ್ಲದೆ ಟಿ. ಗಿರೀಶ್ ಕುಮಾರ್, ಹೆಚ್.ಎಸ್.ಗೌರವ್ ಎಂಬವರೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅವುಗಳನ್ನೂ ಕೋರ್ಟ್ ವಜಾಗೊಳಿಸಿದೆ.

ಸರ್ಕಾರದ ಪರ ವಕೀಲರ ವಾದ ಏನಿತ್ತು?

ಸರ್ಕಾರದ ಪರ ವಾದ ಮಂಡಿಸಿದ ಎಜಿ ಶಶಿಕಿರಣ್ ಶೆಟ್ಟಿ, ಅರ್ಜಿದಾರರಿಗೆ ದಂಡ ವಿಧಿಸಬೇಕೆಂದು ಆಗ್ರಹಿಸಿದರು. ದಸರಾ ಉದ್ಘಾಟಿಸಿದ ನಿಸಾರ್ ಅಹಮದ್ ಜೊತೆಗೆ ಪ್ರತಾಪ್ ಸಿಂಹ ಇದ್ದರು. ಆಗ ವಿರೋಧಿಸದೇ, ಈಗ ಮುಸ್ಲಿಂ ಮಹಿಳೆ‌ ಎಂಬ ಕಾರಣಕ್ಕೆ ವಿರೋಧಿಸುತ್ತಿದ್ದಾರೆ ಎಂದರು. ತಾರತಮ್ಯ ಮಾಡುವಂತಿಲ್ಲವೆಂದು ಮುಜರಾಯಿ ಇಲಾಖೆ ಸುತ್ತೋಲೆಯಿದೆ. ದೇವಾಲಯಗಳಿಗೆ ಯಾರು ಬೇಕಾದರೂ ಬರಲು ಅವಕಾಶವಿದೆ ಎಂದು ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:44 am, Mon, 15 September 25

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ