ಮೈಸೂರು ದಸರಾ ಗೋಲ್ಡ್​ ಕಾರ್ಡ್ ವ್ಯವಸ್ಥೆ: ದರ ಎಷ್ಟು, ಖರೀದಿ ಹೇಗೆ? ಇದರ ಲಾಭವೇನು?

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗ ಆನ್​ಲೈನ್​ ಮೂಲಕ ದಸರಾ ಗೋಲ್ಡ್ ಕಾರ್ಡ್, ಟಿಕೆಟ್​ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. 5 ದಿನಗಳ ಕಾಲ ಅಂದರೆ ಸೆಪ್ಟೆಂಬರ್ 26 ರಿಂದ 30ರವರೆಗೂ ಆನ್​ಲೈನ್​ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್​ ದರ, ಅದರ ಲಾಭಗಳೇನು ಎಂದು ತಿಳಿಯಿರಿ.

ಮೈಸೂರು ದಸರಾ ಗೋಲ್ಡ್​ ಕಾರ್ಡ್ ವ್ಯವಸ್ಥೆ: ದರ ಎಷ್ಟು, ಖರೀದಿ ಹೇಗೆ? ಇದರ ಲಾಭವೇನು?
ಮೈಸೂರು ದಸರಾ ಗೋಲ್ಡ್​ ಕಾರ್ಡ್ ವ್ಯವಸ್ಥೆ: ದರ ಎಷ್ಟು, ಖರೀದಿ ಹೇಗೆ? ಇದರ ಲಾಭವೇನು?
Follow us
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Sep 23, 2024 | 7:36 PM

ಮೈಸೂರು, ಸೆಪ್ಟೆಂಬರ್ 23: ನಾಡ ಹಬ್ಬ ದಸರಾ (Dasara) ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ವಿಶ್ವ ವಿಖ್ಯಾತ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಗಜಪಡೆ ಸಿದ್ಧವಾಗಿವೆ. ಇತ್ತೀಚೆಗೆ ಅರಮನೆಗೆ ಸುಣ್ಣ-ಬಣ್ಣ ಬಳಯಲಾಗಿತ್ತು. ಇದೀಗ ಆನ್​ಲೈನ್​ ಮೂಲಕ ದಸರಾ ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲರಿಗೂ ಸಿಗಲಿ ಎಂಬ ಉದ್ದೇಶದಿಂದ 5 ದಿನಗಳ ಕಾಲ ಅಂದರೆ ಸೆಪ್ಟೆಂಬರ್ 26 ರಿಂದ 30 ರವರೆಗೂ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.

ದಸರಾ ಗೋಲ್ಡ್ ಕಾರ್ಡ್ ದರ, ಲಾಭವೇನು?

ಪ್ರತಿನಿತ್ಯ 1000 ದಿಂದ 1500 ಗೋಲ್ಡ್ ಕಾರ್ಡ್​ಗಳು ಮಾರಾಟ ಮಾಡಲಿದ್ದು, ಒಂದು ‘ದಸರಾ ಗೋಲ್ಡ್ ಕಾರ್ಡ್’ಗೆ 6500 ರೂ. ನಿಗದಿ ಪಡಿಸಲಾಗಿದೆ. ಒಂದು ದಸರಾ ಗೋಲ್ಡ್ ಕಾರ್ಡ್​ನಲ್ಲಿ ಒಬ್ಬರು ಜಂಬೂಸವಾರಿ ಮೆರವಣಿಗೆ, ಪಂಜಿ‌ನ ಕವಾಯತು, ಚಾಮುಂಡಿ ಬೆಟ್ಟ, ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ

ಅರಮನೆ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ ಟಿಕೆಟ್​ ದರ 3500 ರೂ., ಪಂಜಿನ ಕವಾಯತು ವೀಕ್ಷಣೆಗೆ ಟಿಕೆಟ್ ದರ 1000 ರೂ. ನಿಗದಿ ಮಾಡಲಾಗಿದೆ ಎಂದು ಮೈಸೂರು‌ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹಾದೇವಪ್ಪ ಮಾಹಿತಿ ನೀಡಿದ್ದಾರೆ.

ಈ ಬಾರಿ 21 ದಿನಗಳ ಕಾಲ ವಿದ್ಯುತ್ ದೀಪಾಲಂಕಾರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ ಈ ಬಾರಿ 21 ದಿನಗಳ ಕಾಲ ವಿದ್ಯುತ್ ದೀಪಾಲಂಕಾರ ಇರಲಿದ್ದು, ದಸರಾ ಬಳಿಕವೂ ನಗರದ ಸುತ್ತಮುತ್ತ 130 ಕಿಮೀ 10 ದಿನ ದೀಪಾಲಂಕಾರ ವಿಸ್ತರಣೆ ಮಾಡಲಾಗುತ್ತಿದೆ ಎಂದು ವಿದ್ಯುತ್ ದೀಪಾಲಂಕಾರ ಸಮಿತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗಿದೆ. ಜಂಬೂಸವಾರಿಗೆ ವಿದ್ಯುತ್ ರಥ ಸ್ಥಬ್ಧಚಿತ್ರ ಮೆರವಣಿಗೆ, ಅಕ್ಟೊಬರ್ 6, 7, 11, 12ರಂದು ಪಂಜಿನ ಕವಾಯತು ಮೈದಾನದಲ್ಲಿ ಡ್ರೋನ್ ಶೋ ನಡೆಯಲಿದೆ.

ಈ ಬಾರಿ ಎಂಟು ದಿನಗಳ ಕಾಲ ಯುವ ಸಂಭ್ರಮ ಆಯೋಜನೆ

ಮಾನಸಗಂಗೋತ್ರಿಯ ಬಯಲು ರಂಗಂಮದಿರದಲ್ಲಿ ಯುವ ಸಂಭ್ರಮ ಅನಾವರಣಗೊಳ್ಳಲಿದೆ. ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 1ರವರೆಗೆ ಯುವ ಸಂಭ್ರಮ ನಡೆಯಲಿದ್ದು, ಸೆಪ್ಟೆಂಬರ್ 24 ರಂದು ಸ್ಯಾಂಡಲ್‌ವುಡ್ ಖ್ಯಾತ ನಟ ಶ್ರೀಮುರುಳಿ ಮತ್ತು ನಟಿ ರುಕ್ಮಿಣಿ ವಸಂತ್​ ಯುವ ಸಂಭ್ರಮದ ಉದ್ಘಾಟನೆ ಮಾಡಲಿದ್ದಾರೆ.

ಇದನ್ನೂ ಓದಿ: ಮೈಸೂರು ಅರಮನೆ ಮುಂದೆ ಪಾರಿವಾಳಗಳಿಗೆ ಆಹಾರ ಹಾಕುವುದು ಬಂದ್: ಯದುವೀರ್​ ನೇತೃತ್ವದ ಸಭೆ ಯಶಸ್ವಿ​

ಯುವ ಸಂಭ್ರಮದಲ್ಲಿ ಭಾಗಿಯಾಗಲು 470 ಕಾಲೇಜುಗಳ ವಿದ್ಯಾರ್ಥಿಗಳು ಮುಂದೆ ಬಂದಿದ್ದಾರೆ. ಈ ಮೊದಲು ಏಳು ದಿನಗಳ ಕಾಲ ಯುವ ಸಂಭ್ರಮ ಆಯೋಜಿಸಲು ಚಿಂತಿಸಲಾಗಿತ್ತು. 7 ದಿನಗಳ ಕಾಲ ನಡೆದರೆ 350 ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಸಿಗಲಿದೆ. ಹಾಗಾಗಿ ಎಲ್ಲಾ ಕಾಲೇಜುಗಳಿಗೂ ಅವಕಾಶ ಸಿಗಲೆಂದು ಒಂದು ದಿನ‌ ವಿಸ್ತರಣೆ ಮಾಡಲಿದ್ದು, ಎಂಟು ದಿನ ಯುವ ಸಂಭ್ರಮ ಆಯೋಜಿಸಲಾಗಿದೆ ಎಂದು ಸಚಿವ ಡಾ ಎಚ್ ಸಿ ಮಹದೇವಪ್ಪ ಮಾಹಿತಿ ನಿಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್