Jamboo Savari 2021: ಮೈಸೂರು ಅರಮನೆಯಲ್ಲಿ ವಿಜಯದಶಮಿ ಸಂಭ್ರಮ; ಇಂದು ಸಂಜೆ ಐತಿಹಾಸಿಕ ದಸರಾ ಜಂಬೂಸವಾರಿ

Mysuru Dasara 2021: ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಕೊರೊನಾ ಹಿನ್ನೆಲೆ ಜಂಬೂಸವಾರಿ ಮೈಸೂರು ಅರಮನೆ ಆವರಣಕ್ಕೆ ಸೀಮಿತವಾಗಿರಲಿದೆ..

Jamboo Savari 2021: ಮೈಸೂರು ಅರಮನೆಯಲ್ಲಿ ವಿಜಯದಶಮಿ ಸಂಭ್ರಮ; ಇಂದು ಸಂಜೆ ಐತಿಹಾಸಿಕ ದಸರಾ ಜಂಬೂಸವಾರಿ
ಮೈಸೂರು ದಸರಾ ಜಂಬೂ ಸವಾರಿ (ಸಂಗ್ರಹ ಚಿತ್ರ)
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 15, 2021 | 7:26 AM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara)ಉತ್ಸವ ಇಂದು ಕೊನೆಯಾಗಲಿದೆ. ಮೈಸೂರು ಅರಮನೆಯಲ್ಲಿಂದು ವಿಜಯದಶಮಿ (Vijayadashami) ಹಬ್ಬದ ಸಂಭ್ರಮ ಮನೆ ಮಾಡಿದೆ. ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಇಂದು ಸಂಜೆ ಜಂಬೂ ಸವಾರಿ (Jambu Savarai 2021) ಮೆರವಣಿಗೆ ನಡೆಯಲಿದೆ. ಮೈಸೂರು ಅರಮನೆಯಲ್ಲಿ (Mysuru Palace) ಇಂದು ಮುಂಜಾನೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಆನೆ, ಕುದುರೆ, ಹಸುಗಳು ಕಲ್ಯಾಣ ಮಂಟಪಕ್ಕೆ ಆಗಮಿಸಿವೆ.

ಇಂದು ಬೆಳಗ್ಗೆ 6.13ರಿಂದ 6.32ರವರೆಗೆ ಪೂಜಾ ಕೈಂಕರ್ಯಗಳು ನಡೆದಿದ್ದು, 7.20ರಿಂದ ವಿಜಯದಶಮಿ‌ ಮೆರವಣಿಗೆ ಆರಂಭವಾಗಲಿದೆ. ಅರಮನೆಯ ಮುಖ್ಯದ್ವಾರದಿಂದ ಭುವನೇಶ್ವರಿ ದೇವಾಲಯದವರೆಗೂ ಮೆರವಣಿಗೆ ನಡೆಯಲಿದೆ. ಬೆಳ್ಳಿ ಪಲ್ಲಕ್ಕಿ, ಆನೆ, ಹಸು, ಕುದುರೆಯ ಮೆರವಣಿಗೆ ಸಾಗಲಿದೆ. ವಿಜಯದಶಮಿ‌ ಮೆರವಣಿಗೆಯಲ್ಲಿ ಸಾಗಲಿರುವ ಯುವರಾಜ ಯದುವೀರ್ ಒಡೆಯರ್ ದೇಗುಲದ ಆವರಣದಲ್ಲಿ ಬನ್ನಿಮರಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಒಂದು ಗಂಟೆ ಕಾಲ‌ ಪೂಜೆ ಸಲ್ಲಿಸಲಿರುವ ಯದುವೀರ್ ಪೂಜೆ ನಂತರ ಮೆರವಣಿಗೆ ಮೂಲಕ ಅರಮನೆಗೆ ವಾಪಸ್ ತೆರಳಲಿದ್ದಾರೆ. ಈ‌ ಮೂಲಕ ಮೈಸೂರು ಅರಮನೆ ದಸರಾ ಕಾರ್ಯಕ್ರಮಕ್ಕೆ ತೆರೆ ಬೀಳಲಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಈ ಬಾರಿಯೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ. ಆದರೆ ಈ ಬಾರಿ ಉತ್ಸವ ಮೂರ್ತಿ ಮೆರವಣಿಗೆ ಇರಲಿದೆ. ಚಾಮುಂಡಿ ಬೆಟ್ಟದಲ್ಲಿ ಉತ್ಸವ ಮೂರ್ತಿಗೆ ಇಂದು ಬೆಳಗ್ಗೆ 8 ಗಂಟೆಗೆ ಮೈಸೂರು ಉಸ್ತುವಾರಿ ಸಚಿವ ಎಸ್​.ಟಿ. ಸೋಮಶೇಖರ್ ಪೂಜೆ ಸಲ್ಲಿಸಲಿದ್ದಾರೆ. ಪೂಜೆ ಸಲ್ಲಿಕೆ ಬಳಿಕ ಅಲಂಕೃತ ವಾಹನದಲ್ಲಿ ಮೆರವಣಿಗೆ ಮೂಲಕ ಉತ್ಸವ ಮೂರ್ತಿಯನ್ನು ಮೈಸೂರು ಅರಮನೆಗೆ ಕರೆತರಲಾಗುವುದು.

ನಾದಸ್ವರ, ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ನಡೆಯಲಿದ್ದು, ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಚಂಡೆ, ಭಜನಾ ತಂಡ, ವೇದಘೋಷ, ನವದುರ್ಗೆಯರ ಮೆರವಣಿಗೆ ಇರಲಿದೆ. ಚಾಮುಂಡಿಬೆಟ್ಟದಿಂದ ತಾವರಕಟ್ಟೆ, ಇಟ್ಟಿಗೆಗೂಡು, ಹಾರ್ಡಿಂಜ್ ವೃತ್ತದ ಮೂಲಕ ಅರಮನೆಗೆ ಮೆರವಣಿಗೆ ಆಗಮಿಸಲಿದೆ. ಇದೇ ಮೊದಲ ಬಾರಿಗೆ ಚಾಮುಂಡೇಶ್ವರಿ ಮೂರ್ತಿ ಮೆರವಣಿಗೆ ನಡೆಸಲಾಗುತ್ತಿದೆ.

ಜಂಬೂಸವಾರಿಗೆ ಸಿಎಂ ಚಾಲನೆ: ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಕೊರೊನಾ ಹಿನ್ನೆಲೆ ಈ ಬಾರಿಯೂ ಸರಳವಾಗಿ ಜಂಬೂಸವಾರಿ ನಡೆಸಲಾಗುತ್ತದೆ. ಜಂಬೂಸವಾರಿ ಮೈಸೂರು ಅರಮನೆ ಆವರಣಕ್ಕೆ ಸೀಮಿತವಾಗಿರಲಿದೆ. ಜೋಡಿ ನಂದಿಧ್ವಜ ಸ್ತಂಭಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಬಸವರಾಜ ಬೊಮ್ಮಾಯಿ ಸಂಜೆ 4.36ರಿಂದ 4.46ರ ಶುಭ ಮೀನ ಲಗ್ನದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇಗುಲದ ಬಳಿ ಪೂಜೆ ಸಲ್ಲಿಸಲಿದ್ದಾರೆ. ಇದಾದ ನಂತರ ಜಂಬೂಸವಾರಿಗೆ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಇಂದು ಸಂಜೆ 5ರಿಂದ 5.30ರ ಶುಭ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಸಿಎಂ ಬಸವರಾಜ ಬೊಮ್ಮಾಯಿ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ ಯದುವೀರ ಕೃಷ್ಣದತ್ತ ಒಡೆಯರ್ ಚಿನ್ನದ ಅಂಬಾರಿಯಲ್ಲಿರುವ ದೇವಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಸಚಿವ ಸೋಮಶೇಖರ್, ಮೇಯರ್ ಸುನಂದಾ ಪಾಲನೇತ್ರ, ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ದಸರಾ ಬಳಿಕ ಕೊರೊನಾ ನಿಯಮ ಸಡಿಲಿಕೆ ಬಗ್ಗೆ ನಿರ್ಧಾರ; ಸಿಎಂ ಬಸವರಾಜ ಬೊಮ್ಮಾಯಿ

ಆಫ್ರಿಕಾದ ಜೀವನಶೈಲಿಗೆ ವೇದಿಕೆಯಾದ ದಸರಾ ಬೊಂಬೆಗಳು; ದಂಪತಿ ವಿಶೇಷ ಆಸಕ್ತಿಗೆ ಸಾಕ್ಷಿಯಾದ ದಸರಾ

Published On - 7:20 am, Fri, 15 October 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?