Mysuru: ರೋಹಿಣಿ ಸಿಂಧೂರಿ ಮತ್ತು ಶಿಲ್ಪಾ ನಾಗ್ ಇಬ್ಬರೂ ಮೈಸೂರಿನಿಂದ ವರ್ಗಾವಣೆ, ಹೊಸ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರ ನೇಮಕ

Rohini Sindhuri And Shilpa Nag: ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿಯವರ ಸ್ಥಾನಕ್ಕೆ ಡಾ.ಬಗಾದಿ ಗೌತಮ್‌ ಅವರನ್ನು ನೇಮಿಸಲಾಗಿದೆ. ಶಿಲ್ಪಾ ನಾಗ್​ರನ್ನು ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಇಲಾಖೆಗೆ ವರ್ಗಾಯಿಸಲಾಗಿದ್ದು, ಮೈಸೂರು ಪಾಲಿಕೆ ಆಯುಕ್ತರಾಗಿ ಲಕ್ಷ್ಮೀಕಾಂತ್​ ರೆಡ್ಡಿ ಅವರನ್ನು ನೇಮಿಸಲಾಗಿದೆ.

Mysuru: ರೋಹಿಣಿ ಸಿಂಧೂರಿ ಮತ್ತು ಶಿಲ್ಪಾ ನಾಗ್ ಇಬ್ಬರೂ ಮೈಸೂರಿನಿಂದ ವರ್ಗಾವಣೆ, ಹೊಸ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರ ನೇಮಕ
ರೋಹಿಣಿ ಸಿಂಧೂರಿ ಮತ್ತು ಶಿಲ್ಪಾ ನಾಗ್
Follow us
TV9 Web
| Updated By: ಆಯೇಷಾ ಬಾನು

Updated on:Jun 06, 2021 | 6:57 AM

ಮೈಸೂರು: ಇಬ್ಬರು ಐಎಎಸ್​ ಅಧಿಕಾರಿಗಳ ನಡುವಿನ ಕಿತ್ತಾಟವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಸರ್ಕಾರ ತ್ವರಿತ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಒಟ್ಟು 6 ಐಎಎಸ್​ ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್​ ಇಬ್ಬರನ್ನೂ ವರ್ಗಾಯಿಸಿ ಸರ್ಕಾರ ಆದೇಶ ಪ್ರಕಟಿಸಿದೆ. ಆ ಮೂಲಕ ಇಬ್ಬರ ನಡುವೆ ಏರ್ಪಟ್ಟಿದ್ದ ಬೀದಿ ಜಗಳಕ್ಕೆ ರಾಜ್ಯ ಸರ್ಕಾರ ಇತಿಶ್ರೀ ಹಾಡಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿಯವರ ಸ್ಥಾನಕ್ಕೆ ವಾಣಿಜ್ಯ ತೆರಿಗೆ (ಜಾರಿ) ಹೆಚ್ಚುವರಿ ಆಯುಕ್ತರಾಗಿದ್ದ ಡಾ.ಬಗಾದಿ ಗೌತಮ್‌ ಅವರನ್ನು ನೇಮಿಸಲಾಗಿದೆ. ಈವರೆಗೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರೋಹಿಣಿ ಸಿಂಧೂರಿ ಅವರನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾಯಿಸಲಾಗಿದೆ. ಶಿಲ್ಪಾ ನಾಗ್​ರನ್ನು ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಇಲಾಖೆಗೆ ವರ್ಗಾಯಿಸಲಾಗಿದ್ದು, ಮೈಸೂರು ಪಾಲಿಕೆ ಆಹಾರ ಮತ್ತು ನಾಗರೀಕ ಪೂರೈಕೆ ನಿಗಮದ ಎಂಡಿಯಾಗಿದ್ದ ಲಕ್ಷ್ಮೀಕಾಂತ್​ ರೆಡ್ಡಿ ಅವರನ್ನು ಆಯುಕ್ತರಾಗಿ ನೇಮಿಸಲಾಗಿದೆ.

ರೋಹಿಣಿ ಸಿಂಧೂರಿ ಮತ್ತು ಶಿಲ್ಪಾ ನಾಗ್ ನಡುವೆ ಕೆಲವು ದಿನಗಳಿಂದ ಶೀತಲ ಸಮರ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ವರ್ಗಾಯಿಸಿ ಆದೇಶಿಸಲಾಗಿದೆ. ಜೊತೆಗೆ ಬಿಬಿಎಂಪಿಯ ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸ್ಪೆಷಲ್ ಕಮೀಷನರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪಿ. ರಾಜೇಂದ್ರ ಚೋಳನ್ ಅವರಿಗೆ ಹೆಚ್ಚುವರಿಯಾಗಿ ಬೆಸ್ಕಾಂ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯ ಜವಬ್ದಾರಿಯನ್ನು ಸಹ ವಹಿಸಲಾಗಿದೆ.

Mysuru DC Transfer Order

ಆದೇಶದ ಪ್ರತಿ

ಡಾ.ಬಗಾದಿ ಗೌತಮ್‌

ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಆರೋಫವೇನು? ಇಂತಹ (ರೋಹಿಣಿ ಸಿಂಧೂರಿ) ದುರಂಹಕಾರಿ ಜಿಲ್ಲಾಧಿಕಾರಿ ಯಾರಿಗೂ ಸಿಗುವುದು ಬೇಡ ಎಂದು ಮೈಸೂರು ಮಹಾನಗರಪಾಲಿಕೆ ಆಯುಕ್ತೆ ಶಿಲ್ಪಾನಾಗ್ ನೇರವಾಗಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆರೋಪ ಮಾಡಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಒಬ್ಬ ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿಗೆ ತೊಂದರೆ ಕೊಡುವುದು ಸರಿಯಲ್ಲ. ಜಿಲ್ಲಾಧಿಕಾರಿ ನನ್ನ ಮೇಲಿನ ಕೋಪಕ್ಕೆ ಬೇರೆ ಅಧಿಕಾರಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ಒಬ್ಬ ಅಧಿಕಾರಿಯ ಅಹಂನಿಂದ ಪರ್ಸನಲ್‌ ಆಗಿ ಟಾರ್ಗೆಟ್ ಮಾಡಲಾಗಿದೆ ಎಂದು ದೂರಿದ್ದರು. ಎಲ್ಲರಿಗೂ ಒಂದು ಸಹನೆ ಇರುತ್ತದೆ. ಪ್ರತಿದಿನ ನಮ್ಮ ಅಧಿಕಾರಿಗಳನ್ನು ಸಭೆಗೆ ಕರೆದು ಅವಮಾನ‌ ಮಾಡಲಾಗುತ್ತಿದೆ ಎಂದು ರೋಹಿಣಿ ಸಿಂಧೂರಿ ವಿರುದ್ಧ ಆಯುಕ್ತೆ ಶಿಲ್ಪಾ ನಾಗ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ರೋಹಿಣಿ ಸಿಂಧೂರಿ ಸ್ಪಷ್ಟನೆ ನನ್ನ ವಿರುದ್ಧ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮಾಡಿರುವ ಕಿರುಕುಳದ ಆರೋಪಕ್ಕೆ ಯಾವುದೇ ಆಧಾರವಿಲ್ಲ. ಅವರು ಕೊವಿಡ್​ ಸಂಬಂಧ ನಡೆಯುತ್ತಿದ್ದ ಸಭೆಗಳಿಗೆ ಗೈರಾಗುತ್ತಿದ್ದರು ಎಂದು ರೋಹಿಣಿ ಸಿಂಧೂರಿ ಹೇಳಿದರು. ಕೊವಿಡ್ ಕೇರ್ ಸೆಂಟರ್ ಆರಂಭಿಸಿಲ್ಲವೆಂಬ ಆರೋಪಕ್ಕೂ ಯಾವುದೇ ಪುಷ್ಟಿಯಿಲ್ಲ. ಕೇವಲ 20 ದಿನಗಳಲ್ಲೇ 18 ಕೊವಿಡ್ ಕೇರ್ ಸೆಂಟರ್ ಆರಂಭಿಸಿದ್ದೇವೆ. ಮೈಸೂರಿನಲ್ಲೇ 3 ಕೊವಿಡ್ ಕೇರ್ ಸೆಂಟರ್ ಇದೆ ಎಂದು ತಮ್ಮ ವಿರುದ್ಧದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: Shilpa Nag Vs Rohini Sindhuri : ಶಿಲ್ಪಾನಾಗ್ ಆರೋಪಗಳಿಗೆ ಡಿಸಿ ರೋಹಿಣಿ ಸಿಂಧೂರಿ ಪ್ರತಿಕ್ರಿಯೇನು..?

ಮೈಸೂರು ಜಿಲ್ಲಾಧಿಕಾರಿ- ಮೇಯರ್ ಜಟಾಪಟಿ: ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟೀಕರಣ ನೀಡಿದ ಶಿಲ್ಪಾ ನಾಗ್

Published On - 12:37 am, Sun, 6 June 21