AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ ಪ್ರಕರಣ​: ವಿಚಾರಣೆಗೆ ಹಾಜರಾಗುವಂತೆ ಎ1 ಸಿದ್ದರಾಮಯ್ಯಗೆ ನೋಟಿಸ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ಸೈಟ್​ ಹಂಚಿಕೆಯಲ್ಲಿ ನಡೆದ ಹಗರಣ ಪ್ರಕರಣದಲ್ಲಿ ಮಹತ್ವ ದ ಬೆಳವಣಿಗೆ ನಡೆದಿದೆ. ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್ ನೀಡಿದೆ.

ಮುಡಾ ಹಗರಣ ಪ್ರಕರಣ​: ವಿಚಾರಣೆಗೆ ಹಾಜರಾಗುವಂತೆ ಎ1 ಸಿದ್ದರಾಮಯ್ಯಗೆ ನೋಟಿಸ್
ಮುಡಾ ಹಗರಣ
ರಾಮ್​, ಮೈಸೂರು
| Edited By: |

Updated on:Nov 04, 2024 | 6:10 PM

Share

ಮೈಸೂರು, (ನವೆಂಬರ್ 04): ಸದ್ಯ ವಕ್ಫ್​ ಹಾಗೂ ಉಪಚುನಾವಣೆ ಗಲಾಟೆ ಮಧ್ಯ ಅತ್ತ ಮುಡಾ ಹಗರಣದ ತನಿಖೆ ಚುರುಕುಗೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಂಯ್ಯನವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ನವೆಂಬರ್ .6ರಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸಿದ್ದರಾಮಯ್ಯಗೆ ಸೂಚನೆ ನೀಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಈ ರೀತಿಯ ವಿಚಾರಣೆ ಎದುರಿಸಬೇಕಾಗಿ ಬಂದಿದೆ.

ಈಗಾಗಲೇ ಲೋಕಾಯುಕ್ತ ಎಲ್ಲಾ ಆರೋಪಿಗಳ ವಿಚಾರಣೆ ಮುಗಿಸಿದ್ದು, ಸಿದ್ದರಾಮಯ್ಯನವರ ವಿಚಾರಣೆಯೊಂದೇ ಬಾಕಿ ಇತ್ತು. ಇದೀಗ ಎ1 ಆರೋಪಿಗೂ ಸಹ ಲೋಕಾಯುಕ್ತ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಸಿದ್ದರಾಮಯ್ಯ ಜೀವನದ ಮೊದಲ ವಿಚಾರಣೆ ಇದಾಗಿದೆ. ಅವರು ಸುಮಾರ 40 ವರ್ಷಗಳಿಂದ ರಾಜಕಾರಣದಲ್ಲಿದ್ದು, ಯಾವುದೇ ರೀತಿ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆ ಎದುರಿಸಿರಲಿಲ್ಲ. ಆದ್ರೆ, ಇದೀಗ ಸಿದ್ದರಾಮಯ್ಯನವರಿಗೆ ಮುಡಾ ಕಂಟಕ ಎದುರಾಗಿದ್ದು, ತಮ್ಮ 40 ವರ್ಷ ಸುದೀರ್ಘ ರಾಜಕಾರಣದಲ್ಲಿ ಇದೇ ಮೊದಲ ಬಾರಿಗೆ ಲೋಕಾಯುಕ್ತದ ಮುಂದೆ ವಿಚಾರಣೆಗೆ ಹಾಜರಾಗಬೇಕಾದ ಅನಿವಾರ್ಯತೆ ಎದುರಾಗಿದೆ.

ಇದನ್ನೂ ಓದಿ: ಸಿಎಂ ಪತ್ನಿ ವಿಚಾರಣೆ ನಡೆಸಿದ ಲೋಕಾಯುಕ್ತ: ಮಹತ್ವ ಪಡೆದುಕೊಂಡ ಪಾರ್ವತಿ ಹೇಳಿಕೆ

ಈಗಾಗಲೇ ಎ2 ಪಾರ್ವತಿ ಸಿದ್ದರಾಮಯ್ಯ, ಎ3 ಮಲ್ಲಿಕಾರ್ಜುನ ಹಾಗೂ ಎ4 ದೇವರಾಜು ಸೇರಿ ಹಲವರ ವಿಚಾರಣೆಯನ್ನು ಲೋಕಾಯುಕ್ತ ವಿಚಾರಣೆ ನಡೆಸಿದೆ.  ಇನ್ನು ಮುಡಾದ ಸೈಟ್​ ಬಗ್ಗೆಯೂ ಸಹ ಲೋಕಾಯುಕ್ತ ಮಹತ್ವದ ದಾಖಲೆಗಳನ್ನು ಕಲೆಹಾಕಿದೆ. ಅಲ್ಲದೇ ಸಿಎಂ ಕುಟುಂಬಕ್ಕೆ ಹಂಚಿಕೆಯಾಗಿದ್ದ ಸೈಟ್​ಗಳಿಗೂ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಿದ್ದರಾಮಯ್ಯನವರನ್ನು ವಿಚಾರಣೆಗೊಳಪಡಿಸುತ್ತಿಲ್ಲ. ಹಾಗೇ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕೆಂದು ದೂರುದಾರ ಸ್ನೇಹಮಣಿ ಕೃಷ್ಣ ಆಗ್ರಹಿಸುತ್ತಿದ್ದರು. ಅಲ್ಲದೇ ಲೋಕಾಯುಕ್ತ ಅಧಿಕಾರಿಗಳು ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದ್ದರು.

ಇದೀಗ ಕೊನೆಗೂ ಎ1 ಆರೋಪಿಯಾಗಿರುವ ಸಿದ್ದರಾಮಯ್ಯನವರ ವಿಚಾರಣೆಗ ಬರುವಂತೆ ನೋಟಿಸ್ ನೀಡಿದೆ. ಈ ಮೂಲಕ ಮುಡಾ ಹಗರಣ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಮತ್ತೊಂದೆಡೆ ಇಡಿ ಅಧಿಕಾರಿಗಳು ಸಹ ಈ ಪ್ರಕರಣದಲ್ಲಿ ಪ್ರವೇಶ ಮಾಡಿದ್ದು, ಈಗಾಗಲೇ ಮುಡಾದ ಮಾಜಿ ಆಯುಕ್ತರ ನಿವಾಸಗಳ ಮೇಲೆ ದಾಳಿ ಮಾಡಿದ್ದಾರೆ  ಅಲ್ಲದೇ ಸಿದ್ದರಾಂಯ್ಯನವರ ಆಪ್ತ ಪಾಪಣ್ಣ ನಿವಾಸದ ಮೇಲೂ ಸಹ ದಾಳಿ ಮಾಡಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:54 pm, Mon, 4 November 24

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ