Mysuru Mayor Election: ಇಂದು ಮೈಸೂರು ಮಹಾನಗರ ಪಾಲಿಕೆ ಮೇಯರ್​ ಚುನಾವಣೆ ನಡೆಯೋದಿಲ್ಲ; ಹೈಕೋರ್ಟ್​ನಿಂದ ತಡೆ

ಮೈಸೂರಿನಲ್ಲಿ ಕೊವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಅಡಿಯೂ ನಿರ್ಬಂಧವಿದೆ. ಆದರೆ, ಚುನಾವಣೆ ನಡೆಸಿದಾಗ ಪಾಲಿಕೆ ಸದಸ್ಯರು ಹಾಗೂ ಬೆಂಬಲಿಗರು ಸೇರುತ್ತಾರೆ. ಈ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಸೂಕ್ತವಲ್ಲ. ಹೀಗಾಗಿ ಚುನಾವಣೆಗೆ ತಡೆ ನೀಡಬೇಕು ಎಂದು ಮನವಿ ಮಾಡಲಾಗಿತ್ತು.

Mysuru Mayor Election: ಇಂದು ಮೈಸೂರು ಮಹಾನಗರ ಪಾಲಿಕೆ ಮೇಯರ್​ ಚುನಾವಣೆ ನಡೆಯೋದಿಲ್ಲ; ಹೈಕೋರ್ಟ್​ನಿಂದ ತಡೆ
ಮೈಸೂರು ಮಹಾನಗರ ಪಾಲಿಕೆ
Follow us
TV9 Web
| Updated By: Skanda

Updated on: Jun 11, 2021 | 7:00 AM

ಮೈಸೂರು: ಇಂದು ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್​ ಚುನಾವಣೆಗೆ ಉಚ್ಛ ನ್ಯಾಯಾಲಯ ತಡೆ ನೀಡಿದೆ. ಕೊವಿಡ್​ 19 ನಿಯಂತ್ರಣಾ ಮಾರ್ಗಸೂಚಿ ಜಾರಿಯಲ್ಲಿರುವ ಕಾರಣ ಚುನಾವಣೆ ನಡೆಸಬಾರದು ಎಂದು ಪಾಲಿಕೆಯ ಕಾಂಗ್ರೆಸ್​ ಸದಸ್ಯ ಪ್ರದೀಪ್ ಚಂದ್ರ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಪ್ರಕಟವಾಗಿದ್ದು, ಇಂದು ನಡೆಯಬೇಕಿದ್ದ ಚುನಾವಣೆಯನ್ನು ತಡೆಹಿಡಿಯಲಾಗಿದೆ.

ಮೈಸೂರಿನಲ್ಲಿ ಕೊವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಅಡಿಯೂ ನಿರ್ಬಂಧವಿದೆ. ಆದರೆ, ಚುನಾವಣೆ ನಡೆಸಿದಾಗ ಪಾಲಿಕೆ ಸದಸ್ಯರು ಹಾಗೂ ಬೆಂಬಲಿಗರು ಸೇರುತ್ತಾರೆ. ಈ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಸೂಕ್ತವಲ್ಲ. ಹೀಗಾಗಿ ಚುನಾವಣೆಗೆ ತಡೆ ನೀಡಬೇಕು ಎಂದು ಮನವಿ ಮಾಡಲಾಗಿತ್ತು. ಅರ್ಜಿದಾರರ ಪರ ಎಲ್.ಎಂ.ಚಿದಾನಂದಯ್ಯ ವಾದ ಮಂಡಿಸಿದ್ದು, ಜೂನ್​ 21ರವರೆಗೆ ಪಾಲಿಕೆ ಮೇಯರ್​ ಚುನಾವಣೆ ಸೂಕ್ತವಲ್ಲ. ಬಳಿಕ ಪರಿಸ್ಥಿತಿ ಪರಾಮರ್ಶಿಸಿ ಚುನಾವಣೆ ದಿನಾಂಕ ನಿಗದಿಪಡಿಸಿ ಎಂದು ಕೇಳಿಕೊಂಡಿದ್ದರು.

ರಾಜ್ಯದಲ್ಲಿ ಲಾಕ್​ಡೌನ್ ಸಡಿಲಿಸುವ ಬಗ್ಗೆ ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರೆಯಲಿದ್ದು, ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಲಾಕ್​ಡೌನ್​ ಮುಂದುವರೆಯಲಿರುವ 11 ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಉಳಿದೆಡೆಯೂ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಅಲ್ಲದೇ ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಂಚಾರಕ್ಕೆ ಅವಕಾಶವಿಲ್ಲ. ನಿರ್ಮಾಣ ಚಟುವಟಿಕೆ ಆರಂಭಿಸಲು ಅನುಮತಿ ನೀಡಲಾಗಿದೆ. ಸಿಮೆಂಟ್, ಸ್ಟೀಲ್ ಅಂಗಡಿ ತೆಗೆಯಲು ಅವಕಾಶವಿದೆ. ಎಲ್ಲ ಕಾರ್ಖಾನೆ ಶೇ 50 ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಲಾಗಿದ್ದು, ಗಾರ್ಮೆಂಟ್ಸ್​ ಉದ್ಯೋಗಿಗಳು ಶೇ 30 ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುವುದು. ಬಾರ್, ರೆಸ್ಟೋರೆಂಟ್​, ವೈನ್​ ಸ್ಟೋರ್, ಎಂಎಸ್​ಐಎಲ್​ಗಳಲ್ಲಿ ಮಧ್ಯಾಹ್ನ 2ರವರೆಗೆ ಪಾರ್ಸೆಲ್​ ಸೌಲಭ್ಯಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Weekend- Night Curfew: ಲಾಕ್​ಡೌನ್ ಇರಲಿ ಇಲ್ಲದಿರಲಿ..ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಇದ್ದೇ ಇದೆ 

ಮೈಸೂರು ವಿವಿಯಿಂದ ಕೊವಿಡ್ ರ‍್ಯಾಪಿಡ್‌ ಡಿಟೆಕ್ಷನ್ ಕಿಟ್ ವಿನ್ಯಾಸ; ಲಸಿಕೆ ಅಭಿವೃದ್ಧಿಪಡಿಸಲು ಅನುದಾನದ ಕೊರತೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್