Mysuru Mayor Election: ನಾಳೆ ನಡೆಯಬೇಕಿದ್ದ ಮೈಸೂರು ಪಾಲಿಕೆಯ ಮೇಯರ್ ಚುನಾವಣೆಗೆ ತಡೆ; ಜೂನ್ 21ರವರೆಗೆ ಚುನಾವಣೆ ಬೇಡ ಎಂದ ಹೈಕೋರ್ಟ್

ಕೊವಿಡ್-19 ಮಾರ್ಗಸೂಚಿ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ ಪಾಲಿಕೆ ಸದಸ್ಯ ಪ್ರದೀಪ್ ಚಂದ್ರ  ಅರ್ಜಿ ಸಲ್ಲಿಸಿದ್ದರು. ಜೂನ್ 21ರವರೆಗೆ ಪಾಲಿಕೆ ಮೇಯರ್​ ಚುನಾವಣೆ ಸೂಕ್ತವಲ್ಲ. ಬಳಿಕ ಪರಿಸ್ಥಿತಿ ಪರಾಮರ್ಶಿಸಿ ಚುನಾವಣೆ ದಿನಾಂಕ ನಿಗದಿಪಡಿಸಿ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ.

Mysuru Mayor Election: ನಾಳೆ ನಡೆಯಬೇಕಿದ್ದ ಮೈಸೂರು ಪಾಲಿಕೆಯ ಮೇಯರ್ ಚುನಾವಣೆಗೆ ತಡೆ; ಜೂನ್ 21ರವರೆಗೆ ಚುನಾವಣೆ ಬೇಡ ಎಂದ ಹೈಕೋರ್ಟ್
ಮೈಸೂರು ಪಾಲಿಕೆ
Follow us
TV9 Web
| Updated By: guruganesh bhat

Updated on:Jun 10, 2021 | 11:08 PM

ಬೆಂಗಳೂರು: ನಾಳೆ (ಜೂನ್ 11)  ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್​ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ತಡೆ ಒಡ್ಡಿದೆ. ಕೊವಿಡ್-19 ಮಾರ್ಗಸೂಚಿ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ ಪಾಲಿಕೆ ಸದಸ್ಯ ಪ್ರದೀಪ್ ಚಂದ್ರ  ಅರ್ಜಿ ಸಲ್ಲಿಸಿದ್ದರು. ಜೂನ್ 21ರವರೆಗೆ ಪಾಲಿಕೆ ಮೇಯರ್​ ಚುನಾವಣೆ ಸೂಕ್ತವಲ್ಲ. ಬಳಿಕ ಪರಿಸ್ಥಿತಿ ಪರಾಮರ್ಶಿಸಿ ಚುನಾವಣೆ ದಿನಾಂಕ ನಿಗದಿಪಡಿಸಿ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ.

ಮೈಸೂರಿನಲ್ಲಿ ಕೊವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪ ಕಾಯ್ದೆ ಅಡಿಯೂ ನಿರ್ಬಂಧವಿದೆ. ಚುನಾವಣೆ ನಡೆಸಿದರೆ ಪಾಲಿಕೆ ಸದಸ್ಯರು ಹಾಗೂ ಬೆಂಬಲಿಗರು ಒಂದೆಡೆ ಸೇರುತ್ತಾರೆ. ಹೀಗಾಗಿ ಚುನಾವಣೆಗೆ ತಡೆ ನೀಡುವಂತೆ ಅರ್ಜಿದಾರರ ಪರ ಎಲ್.ಎಂ.ಚಿದಾನಂದಯ್ಯ ಮನವಿ ಮಾಡಿದ್ದರು. ಈ ವಾದವನ್ನಾಲಿಸಿದ ಹೈಕೋರ್ಟ್​ ಜೂನ್ 21ರವರೆಗೆ ಪಾಲಿಕೆ ಮೇಯರ್​ ಚುನಾವಣೆ ಸೂಕ್ತವಲ್ಲ. ಬಳಿಕ ಪರಿಸ್ಥಿತಿ ಪರಾಮರ್ಶಿಸಿ ಚುನಾವಣೆ ದಿನಾಂಕ ನಿಗದಿಪಡಿಸಿ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ.

ವಿಶೇಷ ಚೇತನರಿಗೆ ಕೊವಿಡ್ ಲಸಿಕೆ ನೀಡಿ ಈವರೆಗೂ ಕರ್ನಾಟಕದ ಶೇ.35.53ರಷ್ಟು ವಿಶೇಷ ಚೇತನರಿಗೆ ಮಾತ್ರ ಕೊವಿಡ್ ಲಸಿಕೆ ವಿತರಣೆ ಮಾಡಲಾಗಿದೆ. ಉಳಿದವರಿಗೂ ಲಸಿಕೆ ವಿತರಣೆ ನಡೆಸಲು ತುರ್ತು ಕ್ರಮ ಕೈಗೊಳ್ಳುವಂತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ವೇಳೆ ಹೈಕೋರ್ಟ್​ಗೆ ಸ್ಲಂ​​ಗಳಲ್ಲಿ ಲಸಿಕೆ ವಿತರಣೆ ನಡೆಸಿರುವ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ ಪರ ವಕೀಲ ಶ್ರೀನಿಧಿ, ಈಗಾಗಲೇ ಸ್ಲಂಗಳಲ್ಲಿ ವಾಸಿಸುವ 10 ಲಕ್ಷ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. 3ನೇ ಒಂದರಷ್ಟು ಸ್ಲಮ್ ನಿವಾಸಿಗಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಕೆಲ ಕೊವಿಡ್ ಕೇರ್ ಸೆಂಟರ್​ಗಳನ್ನು ಮುಚ್ಚುವುದಾಗಿ ಬಿಬಿಎಂಪಿ ಆಯುಕ್ತರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಹೈಕೋರ್ಟ್, ಕೊವಿಡ್ ಹಾಗೂ ಟ್ರಯಾಸ್​​ ಸೆಂಟರ್ ಮುಚ್ಚಬೇಡಿ. ಮುಂದಿನ ಪರಿಸ್ಥಿತಿಗೆ ಸಿದ್ಧವಾಗಿರುವಂತೆ ಸಲಹೆ ನೀಡಿತು.

ಇದನ್ನೂ ಓದಿ: ಕಲಾವಿದ, ವಿಮರ್ಶಕನಾಗಿ ನನಗಿರುವ ಹಕ್ಕುಗಳಿಗೆ ಐಟಿ ನಿಯಮಗಳು ಧಕ್ಕೆ ತರುತ್ತವೆ: ಮದ್ರಾಸ್ ಹೈಕೋರ್ಟ್​ಗೆ ಸಂಗೀತ ಕಲಾವಿದ ಟಿ.ಎಂ.ಕೃಷ್ಣ ಅರ್ಜಿ

Work From Home: ತನ್ನ ಉದ್ಯೋಗಿಗಳಿಗೆ ಶಾಶ್ವತವಾಗಿ ವರ್ಕ್ ಫ್ರಂ ಹೋಂ ಅವಕಾಶ ನೀಡಿದ ಫೇಸ್​ಬುಕ್

(Mysuru mayor election which was scheduled for tomorrow was withheld by Karnataka High Court)

Published On - 5:52 pm, Thu, 10 June 21

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ