ಮುಡಾ ಹಗರಣ: ಗೋಲ್ಮಾಲ್ ಸಿಎಂ 4000 ಕೋಟಿ ಗುಳುಂ, ಆರ್ ಅಶೋಕ ವಾಗ್ದಾಳಿ

ವಾಲ್ಮೀಕಿ ನಿಗಮದ ಹಗರಣದ ನೆನಪು ಮಾಸುವ ಮುನ್ನವೇ ಸಿಎಂ ಸಿದ್ದರಾಮಯ್ಯ ತವರು ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಹುಕೋಟಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಈ ವಿಚಾರವಾಗಿ ಇದೀಗ ಪ್ರತಿಪಕ್ಷ ನಾಯಕ ಆರ್ ಅಶೋಕ ಸಿಎಂ ಸಿದ್ದರಾಮಯ್ಯನವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹಲವು ಪ್ರಶ್ನೆಗಳನ್ನೂ ಕೇಳಿದ್ದಾರೆ. ಅವುಗಳನ್ನು ಇಲ್ಲಿ ನೀಡಲಾಗಿದೆ.

ಮುಡಾ ಹಗರಣ: ಗೋಲ್ಮಾಲ್ ಸಿಎಂ 4000 ಕೋಟಿ ಗುಳುಂ, ಆರ್ ಅಶೋಕ ವಾಗ್ದಾಳಿ
ಸಿಎಂ ಸಿದ್ದರಾಮಯ್ಯ, ಆರ್ ಅಶೋಕ
Follow us
Ganapathi Sharma
|

Updated on: Jul 02, 2024 | 11:42 AM

ಬೆಂಗಳೂರು, ಜುಲೈ 2: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಗೋಲ್ಮಾಲ್ ಸಿಎಂ 4000 ಕೋಟಿ ಗುಳುಂ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ವ್ಯಂಗ್ಯವಾಡಿರುವ ಅಶೋಕ, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ 4,000 ಕೋಟಿ ರೂಪಾಯಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ‘ಕೈ’ಚಳಕ ಪ್ರದರ್ಶನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ ಎಂದು ಹಲವು ಪ್ರಶ್ನೆಗಳನ್ನೂ ಕೇಳಿದ್ದಾರೆ.

ಸಿದ್ದರಾಮಯ್ಯಗೆ ಆರ್ ಅಶೋಕ ಕೇಳಿರುವ ಪ್ರಶ್ನೆಗಳು

ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ? ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನು ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನ ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು? 50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು? ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸ್ಸು ಮಾಡಿದ್ದು ಯಾರು ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೈಸೂರು ಮುಡಾದಲ್ಲಿ ಹಗರಣ: ನಿವೇಶನಗಳ ಹಂಚಿಕೆ ರದ್ದು, ಅಧಿಕಾರಿಗಳ ತಲೆದಂಡ

ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು? ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಹಗರಣದ ಆರೋಪ ಕೇಳಿಬಂದ ಬೆನ್ನಲ್ಲೇ ಮುಡಾ ಆಯುಕ್ತ ದಿನೇಶ್ ಕುಮಾರ್, ಕಾರ್ಯದರ್ಶಿ ಮತ್ತು ಎಇಇ ವರ್ಗಾವಣೆ ಮಾಡಿ ಸಚಿವ ಭೈರತಿ ಸುರೇಶ್ ಸೋಮವಾರ ಮೌಖಿಕ ಆದೇಶ ಹೊರಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!