ಕಳ್ಳತನ ಆರೋಪ ಹೊರಿಸಿದ್ದಕ್ಕೆ ಸೆಲ್ಫಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ

ಕಳ್ಳತನ ಆರೋಪ ಹೊರಿಸಿದ್ದಾರೆ ಎಂದು ಮನನೊಂದು ಸೆಲ್ಫಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಟೌನ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಫ್ಯಾಕ್ಟರಿ ಆವರಣದಲ್ಲೇ ನೇಣಿಗೆ ಶರಣಾಗಿರುವ ನಂಜೇಶ್, ನಾನು ಮಾಡದ ತಪ್ಪಿಗೆ ನನ್ನನ್ನು ಹೊಣೆ ಮಾಡಿದ್ದಾರೆ. ಗೋವಿಂದರಾಜು ಮತ್ತು ಪೊಲೀಸರ ವಿರುದ್ಧ ಆರೋಪ ಮಾಡಿದ್ದಾರೆ. 

ಕಳ್ಳತನ ಆರೋಪ ಹೊರಿಸಿದ್ದಕ್ಕೆ ಸೆಲ್ಫಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ
ಕಳ್ಳತನ ಆರೋಪ ಹೊರಿಸಿದ್ದಕ್ಕೆ ಸೆಲ್ಫಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ
Follow us
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Jun 03, 2024 | 10:23 PM

ಮೈಸೂರು, ಜೂನ್​ 03: ಕಳ್ಳತನ ಆರೋಪ ಹೊರಿಸಿದ್ದಾರೆ ಎಂದು ಮನನೊಂದು ಸೆಲ್ಫಿ ವಿಡಿಯೋ (selfie video) ಮಾಡಿ ಸೆಕ್ಯೂರಿಟಿ ಗಾರ್ಡ್ (Security guard) ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ನಂಜನಗೂಡು ಟೌನ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಂಜೇಶ್ ಮೃತ ಸೆಕ್ಯೂರಿಟಿ ಗಾರ್ಡ್. ನಂಜನಗೂಡಿನ ಮಹದೇವ ನಗರದ ನಿವಾಸಿ ಆಗಿರುವ ನಂಜೇಶ್, ಕಲ್ಮಲ್ಲಿ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿರುವ ಸೆಕ್ಯೂರಿಟಿ ಗಾರ್ಡ್ ರೆಹಾನ್ಸ್ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

ಫ್ಯಾಕ್ಟರಿ ಆವರಣದಲ್ಲೇ ನೇಣಿಗೆ ಶರಣಾಗಿರುವ ನಂಜೇಶ್, ನಾನು ಮಾಡದ ತಪ್ಪಿಗೆ ನನ್ನನ್ನು ಹೊಣೆ ಮಾಡಿದ್ದಾರೆ. ಕೆಲಸ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ತನಗಾದ ಕಿರುಕುಳ ಬಗ್ಗೆ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದು, ಗೋವಿಂದರಾಜು ಮತ್ತು ಪೊಲೀಸರ ವಿರುದ್ಧ ಆರೋಪ ಮಾಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿ ಮಹಿಳೆಗೆ ಕಾರು ಡಿಕ್ಕಿ: ಸಾವು

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಶಿವಮೊಗ್ಗದ ಹನಸವಾಡಿ ಬಳಿ ನಡೆದಿದೆ. ಮಂಜುಳಮ್ಮ (45) ಮೃತ ದುರ್ದೈವಿ.

ಇದನ್ನೂ ಓದಿ: ಕಾವೇರಿ ನದಿಯಲ್ಲಿ ತೇಲಿ ಬಂದ ಮಹಿಳೆ-ಪುರುಷನ ಮೃತದೇಹ: ನೋಡಲು ಮುಗಿಬಿದ್ದ ಜನರು

ಮಹಿಳೆಗೆ ಡಿಕ್ಕಿ ಹೊಡೆದ ಕಾರು ನೇರವಾಗಿ ಹೋಟೆಲ್​ಗೆ ನುಗ್ಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಯಲ್ಲಿ ಮುಳುಗಿ ಕುರಿಗಾಯಿ ಯುವಕ ಸಾವು

ಧಾರವಾಡ: ಕೆರೆಯಲ್ಲಿ ಮುಳುಗಿ ಕುರಿಗಾಯಿ ಯುವಕ ಸಾವನ್ನಪ್ಪಿರುವಂತಹ ಘಟನೆ ನವಲಗುಂದ ತಾಲೂಕಿನ ಹಾಲಕುಸುಗಲ್ ಗ್ರಾಮದಲ್ಲಿ ನಡೆದಿದೆ. 22 ವರ್ಷದ ಮುನ್ನಾ ಮಕ್ತುಮ್ ಸಾಬ್ ಹೆಬಸೂರ ಮೃತ ಯುವಕ.

ಇದನ್ನೂ ಓದಿ: ತಾಯಿ ಸಮಾನ ಅತ್ತಿಗೆ ಜೊತೆಗಿನ ಲವ್ವಿಡವ್ವಿಗಾಗಿ ಸ್ವಂತ ಅಣ್ಣನನ್ನೇ ಕೊಂದ ಕಾಮುಕ ತಮ್ಮ

ನಿನ್ನೆ ಸಂಜೆ ಕೆರೆಯಲ್ಲಿ ನಾಪತ್ತೆಯಾದ ಯುವಕನ ಶವಕ್ಕಾಗಿ ಅಗ್ನಿ ಶಾಮಕ ದಳದಿಂದ ಶೋಧ ಮಾಡಲಾಗಿದೆ. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:16 pm, Mon, 3 June 24