AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Palace: ನಾಳೆಯಿಂದಲೇ ಮೈಸೂರು ಅರಮನೆ ಕಣ್ತುಂಬಿಕೊಳ್ಳಲು ಪ್ರವಾಸಿಗರಿಗೆ ಅವಕಾಶ

ಕೊವಿಡ್ ಹೆಚ್ಚಳದ ಕಾರಣದಿಂದ ಏಪ್ರಿಲ್ 24 ರಿಂದ ವಿಶ್ವ ವಿಖ್ಯಾತ ಮೈಸೂರು ಅರಮನೆಯ ಪ್ರವೇಶವನ್ನು ಪ್ರವಾಸಿಗರಿಗೆ ನಿರ್ಬಂಧಿಸಲಾಗಿತ್ತು. ಆದರೆ ಇದೀಗ ಮೈಸೂರಿನಲ್ಲಿ ಕೊವಿಡ್ ಸೋಂಕು ಇಳಿಮುಖವಾದ ಕಾರಣ ನಾಳೆಯಿಂದ ಮೈಸೂರು ಅರಮನೆಯ ವೀಕ್ಷಣೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಅವಕಾಶ ಮಾಡಿಕೊಡಲಾಗಿದೆ.

Mysuru Palace: ನಾಳೆಯಿಂದಲೇ ಮೈಸೂರು ಅರಮನೆ ಕಣ್ತುಂಬಿಕೊಳ್ಳಲು ಪ್ರವಾಸಿಗರಿಗೆ ಅವಕಾಶ
ಮೈಸೂರು ಅರಮನೆ
TV9 Web
| Updated By: guruganesh bhat|

Updated on:Jul 04, 2021 | 3:20 PM

Share

ಮೈಸೂರು: ನಾಳೆಯಿಂದ ಪ್ರವಾಸಿಗರು ಮೈಸೂರು ಅರಮನೆಯನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ. ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಮೈಸೂರು ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗಾಗಿ ಅವಕಾಶ ದೊರೆಯಲಿದೆ. ಆನ್‌ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶವಿದ್ದು, ಪ್ರವಾಸಿಗರು ಕೊವಿಡ್ ನಿಯಮ ಪಾಲಿಸಿ ಮೈಸೂರು ಅರಮನೆಯ ಸೊಬಗನ್ನು ಸವಿಯಬಹುದಾಗಿದೆ. ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಈ ಕುರಿತು ಮಾಹಿತಿ ನೀಡಿದ್ದಾರೆ.

ಕೊವಿಡ್ ಹೆಚ್ಚಳದ ಕಾರಣದಿಂದ ಏಪ್ರಿಲ್ 24 ರಿಂದ ವಿಶ್ವ ವಿಖ್ಯಾತ ಮೈಸೂರು ಅರಮನೆಯ ಪ್ರವೇಶವನ್ನು ಪ್ರವಾಸಿಗರಿಗೆ ನಿರ್ಬಂಧಿಸಲಾಗಿತ್ತು. ಆದರೆ ಇದೀಗ ಮೈಸೂರಿನಲ್ಲಿ ಕೊವಿಡ್ ಸೋಂಕು ಇಳಿಮುಖವಾದ ಕಾರಣ ನಾಳೆಯಿಂದ ಮೈಸೂರು ಅರಮನೆಯ ವೀಕ್ಷಣೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಅವಕಾಶ ಮಾಡಿಕೊಡಲಾಗಿದೆ.

ಅರಮನೆಯ ವೆಬ್‌ಸೈಟ್ www.mysorepalace.gov.in ನಲ್ಲಿ ಆನ್‌ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶವಿದ್ದು, ಅರಮನೆಯ ವರಾಹ ದ್ವಾರಗಳಲ್ಲಿರುವ ಟಿಕೆಟ್‌ ಕೌಂಟರ್‌ನಲ್ಲಿಯೂ ಸಹ ಟಿಕೆಟ್‌ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರಿಗೆ ಅರಮನೆಯ ಪ್ರವೇಶ ದ್ವಾರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದ್ದು, ಅರಮನೆಯ ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ರೂಪಿಸಲಾಗಿದೆ. ಟಿಕೆಟ್‌ ಕೌಂಟರ್‌ನಲ್ಲಿ ಪ್ರವಾಸಿಗರ ನಡುವೆ ಅಂತರ ಕಾಯ್ದುಕೊಳ್ಳಲು ಚೌಕಾಕಾರದ ಗುರುತು ಮಾಡಲಾಗಿದೆ. ಪ್ರವಾಸಿಗರು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ತಪ್ಪದೇ ಧರಿಸಬೇಕು. ಅರಮನೆಯ ಆವರಣದಲ್ಲಿ ಸೂಚನಾ ಫಲಕಗಳ ಮೂಲಕ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುವುದು ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಟಿ ಎಸ್ ಸುಬ್ರಹ್ಮಣ್ಯ ಮಾಹಿತಿ ನೀಡಿದ್ದಾರೆ.

ಮೃಗಾಲಯವೂ ವೀಕ್ಷಣೆಗೆ ಮುಕ್ತ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿ ಕೆರೆ ವೀಕ್ಷಣೆಗೆ ಅವಕಾಶ ಪ್ರವಾಸಿಗರಿಗೆ ಬೆಳಗ್ಗೆ 8.30ರಿಂದ ಗಂಟೆಯಿಂದ ಸಂಜೆ 5.30ರವರೆಗೆ ಅವಕಾಶ ಲಭ್ಯವಿದೆ.  ಮಂಗಳವಾರ ಎಂದಿನಂತೆ ರಜಾ ದಿನವಾಗಿದ್ದು ಇನ್ನಿತರ ದಿನಗಳಲ್ಲಿ ಪ್ರವಾಸಿಗರಿಗೆ ಅವಕಾಶವಿದೆ ಎಂದು ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 

ಕೊವಿಡ್​ನಿಂದ ಗುಣಮುಖರಾಗಿದ್ದೀರಾ? ಯಾವಾಗ ವರ್ಕೌಟ್​ ಪ್ರಾರಂಭಿಸಬೇಕೆಂಬ ಯೋಚನೆಯೇ? ಇಲ್ಲಿದೆ ಮಾಹಿತಿ

KRS Dam: ಕೆಆರ್​ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ ಎಂದರೆ ಸಂತೋಷ, ಆದರೆ ಸತ್ಯಾಸತ್ಯತೆ ಅರಿಯಲು ಅವಕಾಶ ನೀಡಬೇಕು: ಸಂಸದೆ ಸುಮಲತಾ ಅಂಬರೀಶ್

(Mysuru palace is open for travellers from July 5th tomorrow)

Published On - 3:10 pm, Sun, 4 July 21

ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್