ಮೈಸೂರು: ನಾಳೆಯಿಂದ ಪ್ರವಾಸಿಗರು ಮೈಸೂರು ಅರಮನೆಯನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ. ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಮೈಸೂರು ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗಾಗಿ ಅವಕಾಶ ದೊರೆಯಲಿದೆ. ಆನ್‌ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶವಿದ್ದು, ಪ್ರವಾಸಿಗರು ಕೊವಿಡ್ ನಿಯಮ ಪಾಲಿಸಿ ಮೈಸೂರು ಅರಮನೆಯ ಸೊಬಗನ್ನು ಸವಿಯಬಹುದಾಗಿದೆ. ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಈ ಕುರಿತು ಮಾಹಿತಿ ನೀಡಿದ್ದಾರೆ.
ಕೊವಿಡ್ ಹೆಚ್ಚಳದ ಕಾರಣದಿಂದ ಏಪ್ರಿಲ್ 24 ರಿಂದ ವಿಶ್ವ ವಿಖ್ಯಾತ ಮೈಸೂರು ಅರಮನೆಯ ಪ್ರವೇಶವನ್ನು ಪ್ರವಾಸಿಗರಿಗೆ ನಿರ್ಬಂಧಿಸಲಾಗಿತ್ತು. ಆದರೆ ಇದೀಗ ಮೈಸೂರಿನಲ್ಲಿ ಕೊವಿಡ್ ಸೋಂಕು ಇಳಿಮುಖವಾದ ಕಾರಣ ನಾಳೆಯಿಂದ ಮೈಸೂರು ಅರಮನೆಯ ವೀಕ್ಷಣೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಅವಕಾಶ ಮಾಡಿಕೊಡಲಾಗಿದೆ.
ಅರಮನೆಯ ವೆಬ್‌ಸೈಟ್ www.mysorepalace.gov.in ನಲ್ಲಿ ಆನ್‌ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶವಿದ್ದು, ಅರಮನೆಯ ವರಾಹ ದ್ವಾರಗಳಲ್ಲಿರುವ ಟಿಕೆಟ್ ಕೌಂಟರ್‌ನಲ್ಲಿಯೂ ಸಹ ಟಿಕೆಟ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರಿಗೆ ಅರಮನೆಯ ಪ್ರವೇಶ ದ್ವಾರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದ್ದು, ಅರಮನೆಯ ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ರೂಪಿಸಲಾಗಿದೆ. ಟಿಕೆಟ್ ಕೌಂಟರ್‌ನಲ್ಲಿ ಪ್ರವಾಸಿಗರ ನಡುವೆ ಅಂತರ ಕಾಯ್ದುಕೊಳ್ಳಲು ಚೌಕಾಕಾರದ ಗುರುತು ಮಾಡಲಾಗಿದೆ. ಪ್ರವಾಸಿಗರು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ತಪ್ಪದೇ ಧರಿಸಬೇಕು. ಅರಮನೆಯ ಆವರಣದಲ್ಲಿ ಸೂಚನಾ ಫಲಕಗಳ ಮೂಲಕ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುವುದು ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಟಿ ಎಸ್ ಸುಬ್ರಹ್ಮಣ್ಯ ಮಾಹಿತಿ ನೀಡಿದ್ದಾರೆ.
ಮೃಗಾಲಯವೂ ವೀಕ್ಷಣೆಗೆ ಮುಕ್ತ
ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿ ಕೆರೆ ವೀಕ್ಷಣೆಗೆ ಅವಕಾಶ ಪ್ರವಾಸಿಗರಿಗೆ ಬೆಳಗ್ಗೆ 8.30ರಿಂದ ಗಂಟೆಯಿಂದ ಸಂಜೆ 5.30ರವರೆಗೆ ಅವಕಾಶ ಲಭ್ಯವಿದೆ. ಮಂಗಳವಾರ ಎಂದಿನಂತೆ ರಜಾ ದಿನವಾಗಿದ್ದು ಇನ್ನಿತರ ದಿನಗಳಲ್ಲಿ ಪ್ರವಾಸಿಗರಿಗೆ ಅವಕಾಶವಿದೆ ಎಂದು ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:
ಕೊವಿಡ್ನಿಂದ ಗುಣಮುಖರಾಗಿದ್ದೀರಾ? ಯಾವಾಗ ವರ್ಕೌಟ್ ಪ್ರಾರಂಭಿಸಬೇಕೆಂಬ ಯೋಚನೆಯೇ? ಇಲ್ಲಿದೆ ಮಾಹಿತಿ
(Mysuru palace is open for travellers from July 5th tomorrow)
Published On - 3:10 pm, Sun, 4 July 21