ಕೊರೊನಾ ನಿಯಮಾವಳಿ ಪಾಲಿಸದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ದೂರು ದಾಖಲು

ಬೇಕರಿ, ಟೀ ಸ್ಟಾಲ್, ಪ್ರಾವಿಜನ್ ಸ್ಟೋರ್ ಮಾಲೀಕರ ಮೇಲೆ ಕೇಸ್ ಹಾಕಲಾಗಿದ್ದು, ವಿಪತ್ತುಗಳ ನಿರ್ವಹಣಾ ಕಾಯ್ದೆ 2005ರ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಅಂಗಡಿ ಬಳಿ ಜನರನ್ನು ಗುಂಪು ಸೇರಿಸಿಕೊಂಡು ಮಾಸ್ಕ್ ಧರಿಸದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಕಾರಣ ದೂರು ದಾಖಲಿಸಲಾಗಿದೆ.

ಕೊರೊನಾ ನಿಯಮಾವಳಿ ಪಾಲಿಸದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ದೂರು ದಾಖಲು
ಸಂಗ್ರಹ ಚಿತ್ರ
Follow us
Skanda
|

Updated on:Apr 09, 2021 | 9:32 AM

ಮೈಸೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಭೀತಿ ದಿನೇ ದಿನೇ ಹೆಚ್ಚಾಗುತ್ತಿರುವ ಕಾರಣ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಮೈಸೂರು ನಗರ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ನಗರದದಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳದ ಹಾಗೂ ಮಾಸ್ಕ್ ಧರಿಸದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗುತ್ತಿದ್ದು, ಈಗಾಗಲೇ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೇಕರಿ, ಟೀ ಸ್ಟಾಲ್, ಪ್ರಾವಿಜನ್ ಸ್ಟೋರ್ ಮಾಲೀಕರ ಮೇಲೆ ಕೇಸ್ ಹಾಕಲಾಗಿದ್ದು, ವಿಪತ್ತುಗಳ ನಿರ್ವಹಣಾ ಕಾಯ್ದೆ 2005ರ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಅಂಗಡಿ ಬಳಿ ಜನರನ್ನು ಗುಂಪು ಸೇರಿಸಿಕೊಂಡು ಮಾಸ್ಕ್ ಧರಿಸದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಕಾರಣ ದೂರು ದಾಖಲಿಸಲಾಗಿದ್ದು, ಕೊರೊನಾ ನಿಯಮ ಉಲ್ಲಂಘಿಸಿದ್ದಕ್ಕೆ ಪ್ರಕರಣ ದಾಖಲಿಸಲು ನ್ಯಾಯಾಲಯಕ್ಕೂ ಮನವಿ ಸಲ್ಲಿಸಲಾಗಿದೆ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕಿನ ಆತಂಕ ಹೆಚ್ಚಾಗಿದ್ದು, ನಗರದಲ್ಲಿಂದು 6,034 ಕೊವಿಡ್ ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಕೊರೊನಾ ನಿಯಮಾವಳಿಗಳನ್ನು ಜನರು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಸಲುವಾಗಿ ಬಿಬಿಎಂಪಿ ಮಾರ್ಷಲ್​ಗಳು ಮಾಸ್ಕ್ ಹಾಕದವರ ವಿರುದ್ಧ ದಂಡ ಪ್ರಯೋಗ ಆರಂಭಿಸಿದ್ದಾರೆ. ಕೆ.ಆರ್.ಮಾರುಕಟ್ಟೆಯಲ್ಲಿ ಮಾಸ್ಕ್ ಹಾಕದವರಿಗೆ ದಂಡ ವಿಧಿಸಲಾಗುತ್ತಿದ್ದು, ದಂಡಕ್ಕೆ ವ್ಯಾಪಾರಿಗಳು ತೀವ್ರ ಬೇಸರ ವ್ಯಕ್ತಪಡಿಸಿ ನಮಗೆ ವ್ಯಾಪಾರವೇ ಆಗ್ತಿಲ್ಲ, ದಂಡ ಎಲ್ಲಿಂದ ಕಟ್ಟೋದು. ಟೀ ಕುಡಿಯೋಕೆ ಹೋಗ್ತಿದ್ದೀವಿ, ಟಿಫನ್​ ತಿಂದು ಬರ್ತಿದ್ದೀವಿ ಎಂದರೂ ನಮ್ಮನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಎಂಟು ದಿನದಲ್ಲಿ 1500 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಪೈಕಿ 16 ಜನ ಸಾವಿಗೀಡಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ 1600 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರನ್ನು ನಿಯಂತ್ರಿಸಲು ಜಿಲ್ಲಾಡಳಿತ ಹರಸಾಹಸಪಡುತ್ತಿದೆ.

ಇದನ್ನೂ ಓದಿ: ಸಿಎಂಗಳಿಗೆ ಪಿಎಂ ಕೊಟ್ಟ 5 ಟಿಪ್ಸ್​: ಕೊರೊನಾ ಸೋಂಕು ತಡೆಗೆ ರಾಜ್ಯಗಳಿಗೆ ನರೇಂದ್ರ ಮೋದಿ ಕೊಟ್ಟ ಮುಖ್ಯ ಸಲಹೆಗಳಿವು 

CM BS Yediyurappa Speech LIVE: ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ವರೆಗೆ ಕೊರೊನಾ​ ಕರ್ಫ್ಯೂ

(Mysuru Police put case on people who breaks Covid 19 rules)

Published On - 8:27 am, Fri, 9 April 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ