AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾದಲ್ಲಿ ಸಚಿವರನ್ನ ತಡೆದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ದಸರಾದಲ್ಲಿ ಸಚಿವರನ್ನ ತಡೆದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ರಮೇಶ್ ಬಿ. ಜವಳಗೇರಾ
|

Updated on: Oct 23, 2026 | 7:29 PM

Share

ಸಚಿವರಾದ ಶಿವರಾಜ್ ತಂಗಡಗಿ, ಬಸವಂತಪ್ಪ ಹಾಗೂ ನರೇಂದ್ರ ಸ್ವಾಮಿ ಅವರನ್ನು ಮೈಸೂರು ಎಸ್ಪಿ ರಿಷ್ಯಂತ್ ತಡೆ ಹಿಡಿದಿದ್ದು, ಇದೀಗ ಭಾರೀ ಪರ ಪರೋಧದ ಚರ್ಚೆಗೆ ಗ್ರಾಸವಾಗಿದ್ದು, ಈ ಸಂಬಂಧ ಸಿಎಂ ತನಿಖೆಗೆ ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ಸ್ವತಃ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅವರು ಇಂದು (ಅಕ್ಟೋಬರ್ 23) ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಭೇಟಿಯಾಗಿ ದಸರಾ ನಂದಿ ಧ್ವಜ ಪೂಜೆ ವೇಳೆ ನಡೆದ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಬಳಿಕ ಸರ್ಕಾರದ ಮುಖ್ಯಕಾರ್ಯದರ್ಶಿ ಸಿಎಸ್ ಶಾಲಿನಿ ಅವರನ್ನು ಭೇಟಿ ಮಾಡಿದ್ದು, ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಆದ್ರೆ, ಮುಂದೆ ಏನಾಗಲಿಎ ಎನ್ನುವುದೇ ಕುತೂಹಲ ಮೂಡಿಸಿದೆ.

ಮೈಸೂರು, (ಅಕ್ಟೋಬರ್ 23): ಮೈಸೂರು ದಸರಾ ವೇಳೆ ಮುಖ್ಯಮಂತ್ರಿಗಳ ಹಿಂದೆ ತೆರಳುತ್ತಿದ್ದ ಮೂವರು  ಸಚಿವರನ್ನು ಎಸ್‌ಪಿ ರಿಷ್ಯಂತ್ ತಡೆದಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಜಂಬೂಸವಾರಿಯಂದು ಬೆಳಗ್ಗೆ ನಂದಿ ಧ್ವಜ ಪೂಜೆಗೆಂದು ಸಿಎಂ ಹಿಂದೆ ಹೋಗುತ್ತಿದ್ದ ಸಚಿವರಾದ ಶಿವರಾಜ್ ತಂಗಡಗಿ, ಬಸವಂತಪ್ಪ ಹಾಗೂ ನರೇಂದ್ರ ಸ್ವಾಮಿ ಅವರನ್ನು ಮೈಸೂರು ಎಸ್ಪಿ ರಿಷ್ಯಂತ್ ತಡೆ ಹಿಡಿದಿದ್ದು, ಇದೀಗ ಭಾರೀ ಪರ ಪರೋಧದ ಚರ್ಚೆಗೆ ಗ್ರಾಸವಾಗಿದ್ದು, ಈ ಸಂಬಂಧ ಸಿಎಂ ತನಿಖೆಗೆ ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ಸ್ವತಃ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅವರು ಇಂದು (ಅಕ್ಟೋಬರ್ 23) ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಭೇಟಿಯಾಗಿ ದಸರಾ ನಂದಿ ಧ್ವಜ ಪೂಜೆ ವೇಳೆ ನಡೆದ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಬಳಿಕ ಸರ್ಕಾರದ ಮುಖ್ಯಕಾರ್ಯದರ್ಶಿ ಸಿಎಸ್ ಶಾಲಿನಿ ಅವರನ್ನು ಭೇಟಿ ಮಾಡಿದ್ದು, ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಆದ್ರೆ, ಮುಂದೆ ಏನಾಗಲಿಎ ಎನ್ನುವುದೇ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More