ಎಲ್ಲ ಕಾರ್ಮೋಡಗಳು ಕರಗಿ ಶಾಂತಿ-ನೆಮ್ಮದಿ ನೆಲೆಸಲಿ: ಧರ್ಮಸ್ಥಳದ ಬಗ್ಗೆ ಸುತ್ತೂರು ಶ್ರೀ ಬಹಿರಂಗ ಪತ್ರ
ಧರ್ಮಸ್ಥಳದಲ್ಲಿ ಅತ್ಯಾಚಾರ, ಕೊಲೆಗಳು ನಡೆದಿದ್ದು, ಈ ಬಗ್ಗೆ ತನಿಖೆ ಮಾಡಬೇಕೆಂಬ ಮಾತುಗಳು ಕೇಳಿಬಂದಿವೆ. ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪ ಮಾಡಿದ್ದು, ಈ ಆರೋಪ ಹಿನ್ನೆಲೆ ಎಸ್ಐಟಿ ಅಧಿಕಾರಿಗಳು ಎಲ್ಲಾ ತನಿಖೆ ಮಾಡಿದರೂ ಯಾವುದೇ ಸೂಕ್ತ ಕುರುಹುಗಳು ದೊರೆತಿಲ್ಲ. ಹೀಗಾಗಿ ಇದೊಂದು ಬುರುಡೆ ಕಥೆ ಎಂದು ಸಾಬೀತಾಗಿದೆ. ಇನ್ನು ಈ ಸುಳ್ಳು ಆರೋಪ ಮಾಡಿ ಧರ್ಮಸ್ಥಳದ ಹೆಸರು ಹಾಳು ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ ವಿರೇಂದ್ರ ಹೆಗ್ಗಡೆ ಬಗ್ಗೆ ಸುತ್ತೂರು ಶ್ರೀಗಳು ಬಹಿರಂಗ ಪತ್ರವೊಂದು ಬರೆದ್ದು, ಅದು ಈ ಕೆಳಗಿನಂತಿದೆ.

ಮೈಸೂರು, (ಆಗಸ್ಟ್ 29): ಧರ್ಮಸ್ಥಳದ (Dharmasthala) ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಧರ್ಮಸ್ಥಳದ ಭಕ್ತರು, ಹಿಂದೂಪರ ಸಂಘಟನೆಗಳು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಮಾಡುತ್ತಿದ್ದು, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ನಡೆಯುತ್ತಿದೆ.ಇದರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ (suttur math Shivarathri Deshikendra Mahaswamiji) ಧರ್ಮಸ್ಥಳದ ಬಗ್ಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದು, ಎಲ್ಲ ಕಾರ್ಮೋಡಗಳು ಕರಗಿ ಶಾಂತಿ-ನೆಮ್ಮದಿ ನೆಲೆಸುವಂತಾಗಲಿ ಎಂದು ಹಾರೈಸಿದ್ದಾರೆ. ಅಲ್ಲದೇ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವಿರೇಂದ್ರ ಹೆಗ್ಗಡೆ (dr veerendra heggade) ಅವರ ಕಾರ್ಯ ವೈಖರಿಯನ್ನು ಹಾಡಿಗೊಳಿದ್ದಾರೆ. ಈ ಮೂಲಕ ಧರ್ಮಸ್ಥಳ ಹಾಗೂ ವಿರೇಂದ್ರ ಹೆಗ್ಗಡೆ ಪರವಾಗಿ ನಿಂತಿದ್ದಾರೆ.
ಸುತ್ತೂರು ಶ್ರೀಗಳ ಬಹಿರಂಗ ಪತ್ರದಲ್ಲೇನಿದೆ?
ಕಾರ್ಮೋಡ ಕರಗಲಿ ನಾಡಿನ ಪ್ರಸಿದ್ಧ ಶ್ರದ್ಧೆ ಹಾಗೂ ಭಕ್ತಿಯ ಧಾರ್ಮಿಕ ಕೇಂದ್ರಗಳಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರವೂ ಒಂದು. ಇಂದು ಕ್ಷೇತ್ರವನ್ನು ವಿವಾದಿತ ಕೇಂದ್ರವನ್ನಾಗಿಸಲು ಕೆಲವರು ಯತ್ನಿಸುತಿರುವುದು ವಿಷಾದನೀಯ. ನಂಬಿಕೆ ಎಂಬುದು ಬಹು ಸೂಕ್ಷ್ಮವಾದ ಸಂಗತಿ ಅದು ಕನ್ನಡಿಯಿದ್ದಂತೆ. ಒಮ್ಮೆ ಅದು ಒಡೆದು ಹೋದರೆ ಮತ್ತೆ ಸರಿಪಡಿಸಲಾಗುವುದಿಲ್ಲ.ಒಡೆದ ಕನ್ನಡಿಯ ಪ್ರತಿ ಚೂರಿನಲ್ಲೂ ಪ್ರತ್ಯೇಕ ಪ್ರತ್ಯೇಕ ಬಿಂಬಗಳು ಕಾಣುತಿರುತ್ತವೆ. ಹೀಗೆ ಕಂಡ ಕಂಡ ಬಿಂಬಗಳನ್ನೆಲ್ಲ ನಂಬಿ ವಿಭಿನ್ನವಾಗಿ ಅರ್ಥೈಸುತ್ತಾ ಹೋಗುವುದು ಸೂಕ್ತವಾದುದಲ್ಲ. ಒಂದು ಧಾರ್ಮಿಕ ಒಂದು ವಿವಾದವನ್ನು ಮುನ್ನೆಲೆಗೆ ತರುತಿರುವ ಪ್ರಯತ್ನಗಳು ಸೂಕ್ತವಾದುವಲ್ಲ. ಶ್ರೀ ಧರ್ಮಸ್ಥಳ ಕ್ಷೇತ್ರ ಕರ್ನಾಟಕ ಮಾತ್ರವಲ್ಲದೇ ಇಡೀ ಭಾರತದ ಜಗತ್ತಿನ ಅನೇಕ ಭಾಗಗಳ ಪರಂಪರಾಗತ ಸಹಬಾಳ್ವೆಗೆ ದ್ಯೋತಕ. ಅಲ್ಲಿ ಶಿವ ದೇವಾಲಯ ಮಾಧ್ವ ಸಂಪ್ರದಾಯದವರು. ಉಸ್ತುವಾರಿ ನೋಡಿಕೊಳ್ಳುತ್ತಿರುವವರು ಶ್ರಮಣ ಧರ್ಮದ ಜೈನ ಸಮುದಾಯದವರು. ಈ ಮೂರು ವಿಭಿನ್ನ ನಂಬಿಕೆಗಳು ಒಗ್ಗೂಡಿರುವ ಶ್ರೀಕ್ಷೇತ್ರದ ಮೂಲ ದೈವಕ್ಕೆ ಹೆಗ್ಗಡೆ ಕುಟುಂಬ ಶ್ರದ್ಧಾ-ಭಕ್ತಿಗಳಿಂದ ನಡೆದುಕೊಳ್ಳುತಿರುವುದು ಹಾಗೂ ಯಾವುದೇ ಚ್ಯುತಿಬಾರದಂತೆ ನಿರ್ವಹಿಸುತಿ ರುವುದು ಹೆಮ್ಮೆ ಪಡುವ ವಿಚಾರ.
ಇದನ್ನೂ ಓದಿ: ಅನನ್ಯಾ ಭಟ್ ನಾಪತ್ತೆ ದೂರು ಹಿಂಪಡೆಯುವೆ: ತಪ್ಪಾಯ್ತು ಬಿಟ್ಟುಬಿಡಿ ಸರ್, ಸುಜಾತಾ ಭಟ್ ಕಣ್ಣೀರಧಾರೆ
ಇದು ಭಾವೈಕ್ಯತೆಗೆ ನಿಜವಾದ ತೋರುಗನ್ನಡಿ. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು. ಗ್ರಾಮೀಣಾಭಿವೃದ್ಧಿ ಯೋಜನೆ”ಯ ಮೂಲಕ ಗ್ರಾಮೀಣ ಜನರ ಬದುಕನ್ನು ಸಮೃದ್ಧಗೊಳಿಸಲು ಹಮ್ಮಿಕೊಂಡಿರುವ ಕಾರ್ಯಗಳು ಅಪೂರ್ವವಾದುವು ಗ್ರಾಮಗಳಿಗೆ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತಿರುವರು.
ದೇವಾಲಯಗಳ ಪ್ರಾಚೀನ ವಸ್ತುಗಳು ಸ್ಮರಣಿಕೆಗಳು ಹಾಗೂ ಹಸ್ತಪ್ರತಿಗಳ ಸಂಗ್ರಹ ಮತ್ತು ಪ್ರದರ್ಶನ ವ್ಯವಸ್ಥೆ ಮಾಡಿರುವರು ಸ್ರೀಶಕ್ತಿ. ಸಂಘಗಳ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ ಭದ್ರತೆಯನ್ನು ಹೆಚ್ಚಿಸಿ ಕಲ್ಪಿಸುತ್ತಿರುವರು. 1972 ರಿಂದಲೂ ಸಾಮೂಹಿಕ ವಿವಾಹಗಳನ್ನು ನಡೆಸುವ ಮೂಲಕ ಶ್ರೀಸಾಮಾನ್ಯರು ಆಡಂಬರದ ಆಚರಣೆಗಳಿಂದ ಅನುಭವಿಸುತ್ತಿರುವವರಿಗೆ ಆರ್ಥಿಕ ತೊಂದರೆಯಿಂದ ಮುಕ್ತರನ್ನಾಗಿರಿಸಿರುವುದು ಅನುಕರಣೀಯ. ಇಂತಹ ಪವಿತ್ರ ಕ್ಷೇತ್ರದ ಆಗಿರಬಹುದು. ಆದರೆ ಇಂತಹ ಪ್ರಕರಣಗಳನ್ನು ಶ್ರೀ ಕ್ಷೇತ್ರದೊಂದಿಗೆ ತಳಕು ಹಾಕಲು ಪ್ರಯತ್ನಿಸುವುದು ದುಡುಕಿನ ನಿರ್ಧಾರವಾಗುತ್ತದೆ.
ಇದನ್ನೂ ಓದಿ: ನಿಮ್ಮ ಪ್ರೀತಿಯನ್ನು ಮಂಜುನಾಥಸ್ವಾಮಿಗೆ ಒಪ್ಪಿಸುತ್ತೇನೆ: ಧರ್ಮಸ್ಥಳ ಕೇಸ್ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಮಾತು
ಸತ್ಯ ಸದಾ ಮೌನಿ ಧಕ್ಕೆಯುಂಟಾಗಬಾರದು. ಇಂಥ ಘಟನೆಗಳಿಂದ ಶ್ರೀಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಅವರ ಕುಟುಂಬವರ್ಗದವರು ಶ್ರೀಕ್ಷೇತ್ರದ ಸೇವಾಕರ್ತರು, ಭಕ್ತಾದಿಗಳು ಹಾಗೂ ಅಭಿಮಾನಿಗಳು ವಿಚಲಿತರಾಗದೆ, ಧೈರ್ಯ ಹಾಗೂ ಸಮಾಧಾನಗಳಿಂದಿದ್ದು, ಶ್ರೀಕ್ಷೇತ್ರದ ಎಲ್ಲ ಧಾರ್ಮಿಕ ಚಟುವಟಿಕೆಗಳನ್ನು ಎಂದಿನಂತೆ ಮುಂದುವರಿಸಿಕೊಂಡು ಹೋಗುತ್ತಿರಬೇಕು. ಇಂಥ ಸೂಕ್ಷ್ಮ ಸಂದರ್ಭಗಳಲ್ಲಿ ಎಲ್ಲರೂ ಅವರೊಂದಿಗೆ ಒಟ್ಟಾಗಿದ್ದು, ಕ್ಷೇತ್ರದ ಸಂರಕ್ಷಣೆಗೆ ಸಹಕರಿಸಬೇಕಾದುದು ಅತ್ಯಗತ್ಯ. ಶ್ರೀ ಮಂಜುನಾಥ ಸ್ವಾಮಿಯ ಕೃಪೆಯಿಂದ ಆದಷ್ಟು ಜಾಗ್ರತೆ ಎಲ್ಲ ಕಾರ್ಮೋಡಗಳು ಕರಗಿ ಶಾಂತಿ-ನೆಮ್ಮದಿಗಳು ನೆಲೆಸುವಂತಾಗಲೆಂದು ಹಾರೈಸುತ್ತೇವೆ ಎಂದು ಬಹಿರಂಗ ಪತ್ರದಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



