ಅಂಗಾಂಗ ದಾನ, 5 ಜನರಿಗೆ ಬೆಳಕಾದ ಮೈಸೂರಿನ 17 ವರ್ಷದ ಬಾಲಕ
ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಮೆದುಳು ನಿಷ್ಕ್ರಯಗೊಂಡಿದ್ದ ಬಾಲಕನ ಅಂಗಾಂಗಳನ್ನು ಕುಟುಂಬಸ್ಥರು ದಾನ ಮಾಡುವ ಮೂಲಕ 5 ಜನರ ಬಾಳಿಗೆ ಬೆಳಕಾಗಿದ್ದಾರೆ.
ಮೈಸೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಮೆದುಳು ನಿಷ್ಕ್ರಯಗೊಂಡಿದ್ದ ಬಾಲಕನ ಅಂಗಾಂಗಳನ್ನು (Organ Donation) ಕುಟುಂಬಸ್ಥರು ದಾನ ಮಾಡುವ ಮೂಲಕ 5 ಜನರ ಬಾಳಿಗೆ ಬೆಳಕಾಗಿದ್ದಾರೆ. ಮೈಸೂರಿನ ರಾಜಕುಮಾರ್ ರಸ್ತೆಯಲ್ಲಿ 17 ವರ್ಷದ ಆಕಾಶ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸಿಟಿ ಸ್ಕ್ಯಾನ್ ಮಾಡಿದಾಗ ಮೆದುಳಿಗೆ ಗಂಭೀರವಾಗಿ ಪೆಟ್ಟು ಬಿದ್ದುರುವುದು ತಿಳಿಯುತ್ತದೆ. ನಂತರ ಅವರನ್ನು ಅಪೊಲೋ ಬಿಜಿಎಸ್ ಆಸ್ಪತ್ರಗೆ ಸ್ಥಳಾಂತರಿಸಲಾಗುತ್ತದೆ.
ಅಪೊಲೋ ಬಿಜಿಎಸ್ನಲ್ಲಿ ಚಿಕಿತ್ಸೆ ನೀಡುತ್ತಿರುವಾಗಲೇ, ಫೆ. 28 ರಾತ್ರಿ 11:30 ರ ಸುಮಾರಿಗೆ ಮೆದಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಹೇಳಿದ್ದಾರೆ. ಇನ್ನು ಆಕಾಶ ಅಪಘಾತಕ್ಕೂ ಮುನ್ನ ಆರೋಗ್ಯವಾಗಿದ್ದ ಹಿನ್ನೆಲೆ ಮತ್ತು ಮಾನವ ಅಂಗಾಗ ಕಸಿ ಕಾಯ್ದೆ ಅನುಸಾರ ಆಕಾಶ ಅವರನ್ನು ಎರಡು ಬಾರಿ ಪರಿಶೀಲಿಸಿದ ಬಳಿಕ ಆಕಾಶ ಅಂಗಾಂಗ ಪಡೆದುಕೊಳ್ಳಬಹುದು ಎಂದು ಸಾಬೀತಾಗಿದೆ. ಅಂಗಾಂಗ ದಾನದ ಬಗ್ಗೆ ಆಕಾಶ ಕುಟುಂಬಕ್ಕೆ ವೈದ್ಯರು ಮನವರಿಕೆ ಮಾಡಿದ ಬಳಿಕ ದಾನ ಮಾಡಲು ಒಪ್ಪಿಕೊಂಡಿದ್ದಾರೆ.
ಬುಧವಾರ (ಮಾರ್ಚ್.1) ರಂದು ನಸುಕಿನ ಜಾವ 3:45ಕ್ಕೆ ಆಕಾಶ ಅವರ ಲಿವರ್, ಕಿಡ್ನಿ, ಹೃದಯ ಕವಾಟಗಳು ಮತ್ತು ಕಾರ್ನಿಯಾಗಳನ್ನು ಆಕಾಶ್ ದಾನ ಮಾಡಿದ್ದಾರೆ. ಆಕಾಶ್ ಅವರ ಲಿವರ್ ಮತ್ತು ಎಡ ಮೂತ್ರಪಿಂಡವನ್ನು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆಯಲ್ಲಿ ಕಸಿ ಮಾಡಲಾಗಿದ್ದು, ಬಲ ಮೂತ್ರಪಿಂಡವನ್ನು ಮೈಸೂರಿನ ಕ್ಲಿಯರ್‌ಮೆಡಿ ರೇಡಿಯಂಟ್ ಆಸ್ಪತ್ರೆಯಲ್ಲಿ ಕಸಿ ಮಾಡಲಾಗಿದೆ. ಹೃದಯ ಕವಾಟಗಳನ್ನು ಬೆಂಗಳೂರಿನ ಎನ್‌ಎಚ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೈಸೂರಿನ ಕೆಆರ್ ಆಸ್ಪತ್ರೆಗೆ ಕಾರ್ನಿಯಾಗಳನ್ನು ದಾನ ಮಾಡಲಾಗಿದೆ ಎಂದು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆಗಳ ಉಪಾಧ್ಯಕ್ಷ ಮತ್ತು ಘಟಕದ ಮುಖ್ಯಸ್ಥ ಎನ್‌ಜಿ ಭರತೀಶ ರೆಡ್ಡಿ ಮಾಹಿತಿ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ