AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PU Results: ಮೈಸೂರಿನ 11 ವಿದ್ಯಾರ್ಥಿಗಳಿಂದ ದ್ವಿತೀಯ ಪಿಯು ಫಲಿತಾಂಶ ತಿರಸ್ಕಾರ; ಪೂರಕ ಪರೀಕ್ಷೆಗೆ ಮನವಿ

ಎಸ್ಎಸ್ಎಲ್​ಸಿ ಮತ್ತು ಪ್ರಥಮ ಪಿಯು ಅಂಕಗಳ ಆಧಾರದ ಮೇಲೆ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಿತ್ತು. ಈ 11 ವಿದ್ಯಾರ್ಥಿಗಳ ಜತೆ ಕಳೆದ ವರ್ಷದ 6 ವಿದ್ಯಾರ್ಥಿಗಳು ಸೇರಿದಂತೆ ಖಾಸಗಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಮೈಸೂರು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

2nd PU Results: ಮೈಸೂರಿನ 11 ವಿದ್ಯಾರ್ಥಿಗಳಿಂದ ದ್ವಿತೀಯ ಪಿಯು ಫಲಿತಾಂಶ ತಿರಸ್ಕಾರ; ಪೂರಕ ಪರೀಕ್ಷೆಗೆ ಮನವಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 03, 2021 | 5:29 PM

Share

ಮೈಸೂರು: ಇತ್ತೀಚಿಗೆ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಫಲಿತಾಂಶವನ್ನು (2nd PU Results) ಮೈಸೂರಿನ 11 ವಿದ್ಯಾರ್ಥಿಗಳು ತಿರಸ್ಕರಿಸಿದ್ದು, ಪೂರಕ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಕುರಿತು ಅಧಿಕೃತ ಡಿಡಿಪಿಯು ಶ್ರೀನಿವಾಸ್ ಮೂರ್ತಿ ಮಾಹಿತಿ ನೀಡಿದ್ದಾರೆ. ನಿರೀಕ್ಷೆಯಷ್ಟು ಅಂಕ ಬಂದಿಲ್ಲ, ಫಲಿತಾಂಶ ತೃಪ್ತಿದಾಯಕವಲ್ಲ ಎಂದು ಈ ಹಿಂದೆ ನೀಡಲಾಗಿದ್ದ ಫಲಿತಾಂಶವನ್ನು ತಿರಸ್ಕರಿಸಿರುವ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಲು ಅನುವು ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಆಗಸ್ಟ್ ಕೊನೆಯ ವಾರದಲ್ಲಿ ಪಿಯು‌ ಪೂರಕ ಪರೀಕ್ಷೆ ನಡೆಯಲಿದೆ.

ಎಸ್ಎಸ್ಎಲ್​ಸಿ ಮತ್ತು ಪ್ರಥಮ ಪಿಯು ಅಂಕಗಳ ಆಧಾರದ ಮೇಲೆ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಿತ್ತು. ಈ 11 ವಿದ್ಯಾರ್ಥಿಗಳ ಜತೆ ಕಳೆದ ವರ್ಷದ 6 ವಿದ್ಯಾರ್ಥಿಗಳು ಸೇರಿದಂತೆ ಖಾಸಗಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಮೈಸೂರು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ಪದವಿ ಕಾಲೇಜು ಪ್ರವೇಶಕ್ಕೆ ತಾತ್ಕಾಲಿಕ ತಡೆ ಬೆಂಗಳೂರು: ಪದವಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. 2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ (UG College Admission) ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ. ಈ ಮುನ್ನ ಆಗಸ್ಟ್ 4 ರಿಂದ ಪ್ರವೇಶ ಪ್ರಾರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಿಗೆ ನಿರ್ದೇಶನ ನೀಡಿತ್ತು. ಆದರೆ ಮುಂದಿನ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ಸದ್ಯದಲ್ಲೇ ಪ್ರಕಟ ಮಾಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ: 

ಕಾಲ್ಬೆರಳುಗಳಲ್ಲಿಯೇ ಪೆನ್ನು ಹಿಡಿದು ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿ; ಸ್ಪೂರ್ತಿ ತುಂಬುವ ಸುದ್ದಿ ಓದಲೇಬೇಕು

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ; ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?

(2nd PU Results 11 Students from Mysore rejected results and requested for supplemental examination)

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ