AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜಿಲ್ಲೆಯ ಶೇ.30ರಷ್ಟು ಅಂಗನವಾಡಿಗಳಿಗಿಲ್ಲ ಸ್ವಂತ ಕಟ್ಟಡ: ಮಕ್ಕಳ ಆಟ, ಪಾಠಕ್ಕೆ ಸಮಸ್ಯೆ

ಮೈಸೂರು ಜಿಲ್ಲೆಯ 2,905 ಅಂಗನವಾಡಿಗಳ ಪೈಕಿ ಶೇ.30ರಷ್ಟು ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ. ಬಾಡಿಗೆ ಹಾಗೂ ಸಮುದಾಯ ಭವನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜಾಗದ ಅಭಾವದಿಂದ ಮಕ್ಕಳ ಕಲಿಕೆಗೆ ತೊಂದರೆಯಾಗಿದೆ. ವಿಬಿ ಗ್ರಾಮ್​​ ಜಿ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಅನುದಾನ ಅಥವಾ ಸೌಲಭ್ಯಗಳ ಕೊರತೆಯಿಲ್ಲ. ಆದರೆ, ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಜಮೀನು ಲಭ್ಯವಿಲ್ಲದಿರುವುದು ಪ್ರಮುಖ ಹಿನ್ನಡೆಗೆ ಕಾರಣ ಎನ್ನಲಾಗಿದೆ.

ಮೈಸೂರು ಜಿಲ್ಲೆಯ ಶೇ.30ರಷ್ಟು ಅಂಗನವಾಡಿಗಳಿಗಿಲ್ಲ ಸ್ವಂತ ಕಟ್ಟಡ: ಮಕ್ಕಳ ಆಟ, ಪಾಠಕ್ಕೆ ಸಮಸ್ಯೆ
ಸಾಂದರ್ಭಿಕ ಚಿತ್ರImage Credit source: Getty Images
ಪ್ರಸನ್ನ ಹೆಗಡೆ
|

Updated on: Oct 05, 2026 | 10:33 AM

Share

ಮೈಸೂರು, ಅಕ್ಟೋಬರ್​​ 05: ಮೈಸೂರು ಜಿಲ್ಲೆಯಲ್ಲಿ ಸುಮಾರು ಶೇ.30ರಷ್ಟು ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿ ಒಟ್ಟು 2,905 ಅಂಗನವಾಡಿ ಕೇಂದ್ರಗಳಿದ್ದು, ಈ ಪೈಕಿ 2,224 ಕೇಂದ್ರಗಳಿಗೆ ಮಾತ್ರ ಸ್ವಂತ ಶಾಶ್ವತ ಕಟ್ಟಡಗಳಿವೆ. ಸುಮಾರು 1.3 ಲಕ್ಷ ಆರು ವರ್ಷದೊಳಗಿನ ಮಕ್ಕಳು ಈ ಅಂಗನವಾಡಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿದ್ದರೂ, ಶಾಶ್ವತ ಕಟ್ಟಡಗಳ ಕೊರತೆ ಪ್ರಮುಖ ಸಮಸ್ಯೆಯಾಗಿ ಮುಂದುವರಿದಿದೆ.

ಬಾಡಿಗೆ ಕಟ್ಟಡಗಳಲ್ಲಿ ಶೌಚಾಲಯ, ಸೂಕ್ತ ಆಟದ ಮೈದಾನದ ಸಮಸ್ಯೆ

ಅಂಗನವಾಡಿ ಕೇಂದ್ರಗಳನ್ನು ಅವಲಂಬಿಸಿರುವ 1.3 ಲಕ್ಷಕ್ಕೂ ಅಧಿಕ ಮಕ್ಕಳ ಪೈಕಿ 0ರಿಂದ 6 ತಿಂಗಳ ವಯಸ್ಸಿನ 10,734 ಶಿಶುಗಳು, 3 ವರ್ಷದೊಳಗಿನ 75,536 ಮಕ್ಕಳು ಹಾಗೂ 3ರಿಂದ 6 ವರ್ಷದೊಳಗಿನ 47,796 ಮಕ್ಕಳು ಇದ್ದಾರೆ. ಹೀಗಿದ್ದರೂ 2,905 ಅಂಗನವಾಡಿ ಕೇಂದ್ರಗಳನ್ನು ಹೊರತುಪಡಿಸಿ ಉಳಿದವು ಬಾಡಿಗೆ ಕಟ್ಟಡಗಳು, ಗ್ರಾಮ ಪಂಚಾಯಿತಿ ಕಟ್ಟಡಗಳು, ಸಮುದಾಯ ಭವನಗಳು ಹಾಗೂ ಕೆಲವೆಡೆ ಗ್ರಾಮಗಳಲ್ಲಿನ ಬಯಲು ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ, ಸೂಕ್ತ ಆಟದ ಮೈದಾನ ಹಾಗೂ ಅಡುಗೆಮನೆಯ ಕೊರತೆ ಇರುವುದರಿಂದ ಮಕ್ಕಳು ಕಿರಿದಾದ ಸ್ಥಳಗಳಲ್ಲಿ ಕಲಿಯುವಂತಾಗಿದೆ.

LIVE TV

ಇದನ್ನೂ ಓದಿ: ಮೈಸೂರು ದಸರಾ: ಖಾಸಗಿ ಫ್ಲೆಕ್ಸ್​​ಗಳಿಗೆ ಅವಕಾಶವಿಲ್ಲ, ಹೋಟೆಲ್​ನವರು ದರ ಹೆಚ್ಚಳ ಮಾಡುವಂತಿಲ್ಲ; ಸಿಎಂ ಸೂಚನೆ

ಸ್ವಂತ ಕಟ್ಟಡಗಳಿಲ್ಲದ ಕಾರಣ ರಾಜ್ಯ ಸರ್ಕಾರ ನಗರ ಪ್ರದೇಶಗಳಲ್ಲಿನ ಪ್ರತಿ ಅಂಗನವಾಡಿ ಕೇಂದ್ರಕ್ಕೆ ತಿಂಗಳಿಗೆ 5,000 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 1,000 ಬಾಡಿಗೆ ಪಾವತಿಸುತ್ತಿದೆ. ವಿಬಿ ಗ್ರಾಮ್​​ ಜಿ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಅನುದಾನ ಅಥವಾ ಸೌಲಭ್ಯಗಳ ಕೊರತೆಯಿಲ್ಲ. ಆದರೆ, ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಜಮೀನು ಲಭ್ಯವಿಲ್ಲದಿರುವುದು ಪ್ರಮುಖ ಹಿನ್ನಡೆಯಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳು ಹಲವು ಪ್ರಯತ್ನಗಳನ್ನು ನಡೆಸುತ್ತಿದ್ದರೂ, ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಸೂಕ್ತ ಜಮೀನು ಗುರುತಿಸುವುದು ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಭೂಮಿ ಮತ್ತು ನಿವೇಶನಗಳ ಬೆಲೆ ಏರಿಕೆಯಾಗುತ್ತಿರುವುದು ಶಾಶ್ವತ ಕಟ್ಟಡಗಳ ನಿರ್ಮಾಣದ ಕುರಿತು ಸರ್ಕಾರದ ಅಧಿಕಾರಿಗಳ ಆತಂಕವನ್ನು ಹೆಚ್ಚಿಸಿದೆ ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ