AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಷಾಢ ಮಾಸದ ಕೊನೆ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ವಿಶೇಷ, ಪೂಜೆ ಅಲಂಕಾರ: ಹರಿದು ಬಂದ ಭಕ್ತ ಸಾಗರ

ಆಷಾಢ ಮಾಸದ ಕೊನೆ ಶುಕ್ರವಾರದಂದು ಲಕ್ಷ್ಮಿ ಪೂಜೆಗೆ ತುಂಬಾನೇ ಮಹತ್ವವಿದೆ, ಈ ದಿನ ಲಕ್ಷ್ಮಿಯನ್ನು ಪೂಜಿಸಿದರೆ ಸಂಪತ್ತು ವೃದ್ಧಿಸುವುದು ಎಂದು ಹೇಳಲಾಗುವುದು. ಈ ಹಿನ್ನೆಲೆ ಇಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಡಗರ ಸಂಭ್ರಮ ಮೆನೆಮಾಡಿದೆ. ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.

ಆಷಾಢ ಮಾಸದ ಕೊನೆ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ವಿಶೇಷ, ಪೂಜೆ ಅಲಂಕಾರ: ಹರಿದು ಬಂದ ಭಕ್ತ ಸಾಗರ
ಚಾಮುಂಡಿಬೆಟ್ಟ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Jul 14, 2023 | 7:02 AM

Share

ಮೈಸೂರು: ಆಷಾಢ ಮಾಸದ (Ashad Masa) ಕೊನೆ ಶುಕ್ರವಾರದಂದು (Friday) ಲಕ್ಷ್ಮಿ (Laxmi) ಪೂಜೆಗೆ ತುಂಬಾನೇ ಮಹತ್ವವಿದೆ, ಈ ದಿನ ಲಕ್ಷ್ಮಿಯನ್ನು ಪೂಜಿಸಿದರೆ ಸಂಪತ್ತು ವೃದ್ಧಿಸುವುದು ಎಂದು ಹೇಳಲಾಗುವುದು. ಈ ಹಿನ್ನೆಲೆ ಇಂದು (ಜು.12) ಮೈಸೂರಿನ ಚಾಮುಂಡಿಬೆಟ್ಟದಲ್ಲಿ (Chamundi Hill) ಸಡಗರ ಸಂಭ್ರಮ ಮೆನೆಮಾಡಿದೆ. ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ (Chamundeshwari) ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.

ಮುಂಜಾನೆ 3 ಗಂಟೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಸೇವೆ ನಂತರ ಮಹಾಮಂಗಳಾರತಿ ನೆರವೇರಿತು. ದೇವಾಲಯದ ಆವರಣವನ್ನು ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ. ಬೆಳಿಗ್ಗೆ 5.30 ರಿಂದ ಭಕ್ತರಿಗೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಇನ್ನು ನಾಲ್ಕನೇ ವಾರವೂ ಪಾಸ್ ವ್ಯವಸ್ಥೆಗೆ ಬ್ರೇಕ್ ಹಾಕಲಾಗಿದ್ದು, 300 ರೂ. ಹಾಗೂ 50 ರೂ. ಟಿಕೆಟ್ ಪಡೆದ ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 65 ವರ್ಷ ಮೇಲ್ಪಟ್ಟವರಿಗೆ 50 ರೂ. ಟಿಕೆಟ್ ಸಾಲಿನಲ್ಲಿ ನೇರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಆಷಾಢ ಮಾಸದ ಮಹತ್ವ, ತಾಯಿ ಚಾಮುಂಡೇಶ್ವರಿಯ ಇತಿಹಾಸ ತಿಳಿಸಿದ ಅರ್ಚಕ

ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ನಿರ್ಬಂಧಿಸಿದ ಹಿನ್ನೆಲೆ ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಿದೆ. ಇನ್ನು ಭಕ್ತರು ಮೆಟ್ಟುಲುಗಳ ಮೂಲಕ ತಾಯಿ ದರ್ಶನಕ್ಕೆ ಆಗಮಿಸುತ್ತಿದ್ದು, ಬೆಳಗ್ಗೆ‌ 5.30 ರಿಂದ ರಾತ್ರಿ 9.30ರವರೆಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ದಾಸೋಹ ಪ್ರಸಾದ ವಿತರಿಸಲಾಗುತ್ತಿದೆ.

ನೀವು ಆಷಾಢ ಕೊನೆಯ ಶುಕ್ರವಾರದಂದು ಲಕ್ಷ್ಮಿಗೆ ತುಪ್ಪದ ದೀಪ ಹಚ್ಚಿ ಈ ಮಂತ್ರಗಳನ್ನು ಹೇಳಿದರೆ ಹಣಕಾಸಿನ ಸಮಸ್ಯೆ ದೂರಾಗಿ ಸಂಪತ್ತು ವೃದ್ಧಿಸುವುದು.

ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರ ಪೂಜಿತೇ| ಶಂಖಚಕ್ರ ಗದಾಹಸ್ತೇ ಮಹಾಲಕ್ಷ್ಮಿ ನಮೋಸ್ತುತೇ||

ಅರ್ಥ: ಹೇ ಮಹಾಮಾಯೇ ಸ್ವರೂಪಳೇ ಶ್ರೀ ಚಕ್ರವಾಸಿನಿ, ದೇವತೆಗಳಿಂದ ಪೂಜಿತಳಾಗಿರುವ ಶಂಖಚಕ್ರ ಗದೆಗಳನ್ನು ಧರಿಸಿದ ಶ್ರೀ ಮಹಾಲಕ್ಷ್ಮಿಯೇ ನಿನಗೆ ನಮಸ್ಕಾರಗಳು

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ