AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮತಿ ಇಲ್ಲದೆ ಆಫ್ರಿಕಾದಲ್ಲಿ ವ್ಯಾಪಾರ: ಮೈಸೂರಿನ 9 ಮಂದಿ ಬಂಧನ!

ಆಫ್ರಿಕಾ ದೇಶದಲ್ಲಿ ಸೂಕ್ತ ಕಾನೂನು ಅನುಮತಿ ಇಲ್ಲದೆ ಆಯುರ್ವೇದ ತೈಲ ವ್ಯಾಪಾರ ನಡೆಸುತ್ತಿದ್ದ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ 9 ಮಂದಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಜೈಲು ಪಾಲಾಗಿರುವ ತಮ್ಮವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಕರೆತರಲು ಸಂತ್ರಸ್ತ ಕುಟುಂಬಸ್ಥರು ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್ ಹಾಗೂ ಸಚಿವ ಡಾ. ಯತೀಂದ್ರ ಅವರ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಅನುಮತಿ ಇಲ್ಲದೆ ಆಫ್ರಿಕಾದಲ್ಲಿ ವ್ಯಾಪಾರ: ಮೈಸೂರಿನ 9 ಮಂದಿ ಬಂಧನ!
ಮೈಸೂರಿನ 9 ಮಂದಿ ಬಂಧನImage Credit source: gettyimages.com
ರಾಮ್​, ಮೈಸೂರು
| Edited By: |

Updated on: Aug 03, 2026 | 2:46 PM

Share

ಮುಖ್ಯಾಂಶಗಳು

  • ಆಫ್ರಿಕಾದಲ್ಲಿ ಅನುಮತಿ ಇಲ್ಲದೆ ವ್ಯಾಪಾರ ಮಾಡುತ್ತಿದ್ದ ಮೈಸೂರಿನ ಒಂಬತ್ತಿನ್ ಬಂಧನ.
  • ಆಯುರ್ವೇದ ತೈಲ ಮಾರಾಟಕ್ಕೆ ತೆರಳಿದ್ದ ಹುಣಸೂರು ಮೂಲದ ಒಂಬತ್ತು ವ್ಯಾಪಾರಿಗಳು.
  • ಸಂತ್ರಸ್ತ ಕುಟುಂಬಸ್ಥರಿಂದ ಶಾಸಕರು ಹಾಗೂ ಸರ್ಕಾರದ ಬಳಿ ರಕ್ಷಣೆಗೆ ಮನವಿ.

ಮೈಸೂರು, ಆಗಸ್ಟ್ 03: ಉತ್ತಮ ಜೀವನೋಪಾಯ ಕಂಡುಕೊಳ್ಳುವ ಭರವಸೆಯೊಂದಿಗೆ ವಿದೇಶಕ್ಕೆ ತೆರಳಿದ್ದ ಮೈಸೂರಿನ ಜನರಿಗೆ ಆಫ್ರಿಕಾದಲ್ಲಿ ಭಾರೀ ಆಘಾತ ಎದುರಾಗಿದೆ. ಸೂಕ್ತ ಕಾನೂನು ಅನುಮತಿ ಹಾಗೂ ನಿಯಮಾವಳಿಗಳನ್ನು ಪಾಲಿಸದೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ, ಮೈಸೂರು ಮೂಲದ ಒಂಬತ್ತು ಜನರನ್ನು ಆಫ್ರಿಕಾ ದೇಶದ ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಯುರ್ವೇದ ತೈಲ ಮಾರಾಟಕ್ಕೆ ತೆರಳಿದ್ದ ವ್ಯಾಪಾರಿಗಳು

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಪಕ್ಷಿರಾಜಪುರ ಗ್ರಾಮಕ್ಕೆ ಸೇರಿದ ಈ 9 ಮಂದಿ, ಸುಮಾರು ಎರಡು ತಿಂಗಳ ಹಿಂದೆ ಆಯುರ್ವೇದದ ವಿಶೇಷ ತೈಲ ಉತ್ಪನ್ನಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಆಫ್ರಿಕಾಗೆ ಪ್ರವಾಸ ಬೆಳೆಸಿದ್ದರು. ಆದರೆ, ಅಲ್ಲಿನ ಸ್ಥಳೀಯ ಸರ್ಕಾರ ಮತ್ತು ಅರಣ್ಯ/ವಾಣಿಜ್ಯ ಇಲಾಖೆಗಳಿಂದ ಅಧಿಕೃತ ಅನುಮತಿ ಪಡೆಯದೆ ವ್ಯಾಪಾರ ನಡೆಸುತ್ತಿದ್ದಾರೆ ಎನ್ನಲಾದ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ಕಾರ್ಯಾಚರಣೆ ನಡೆಸಿ ಇವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ನಿರೋಣಿ ಸೇರಿದಂತೆ ಪ್ರಭುದೇವ, ಗಿರೀಶ್, ಷಹಜಹಾನ್, ಶಾಂತಿ ಹಾಗೂ ಇತರ ನಾಲ್ವರು ಸೇರಿದ್ದಾರೆ.

ಜನಪ್ರತಿನಿಧಿಗಳ ಬಳಿ ಕುಟುಂಬಸ್ಥರ ರಕ್ಷಣೆಯ ಮೊರೆ

ವಿದೇಶದಲ್ಲಿ ಬಂಧನಕ್ಕೊಳಗಾಗಿರುವ ತಮ್ಮ ಕುಟುಂಬ ಸದಸ್ಯರನ್ನು ರಕ್ಷಿಸಿ, ಭಾರತಕ್ಕೆ ವಾಪಸ್ ಕರೆತರಲು ತಕ್ಷಣವೇ ಮಧ್ಯಪ್ರವೇಶಿಸಬೇಕೆಂದು ಸಂತ್ರಸ್ತ ಕುಟುಂಬಸ್ಥರು ಹುಣಸೂರು ಕ್ಷೇತ್ರದ ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ವಿಷಯದ ಗಂಭೀರತೆಯನ್ನು ಅರಿತ ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್ ಅವರು, ಕೂಡಲೇ ಸಚಿವ ಡಾ. ಯತೀಂದ್ರ ಅವರ ಗಮನಕ್ಕೆ ತಂದಿದ್ದಾರೆ.

ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ಆಫ್ರಿಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ (Indian Embassy) ಮೂಲಕ ಮಾತುಕತೆ ನಡೆಸಿ, ಬಂಧಿತರನ್ನು ಶೀಘ್ರವಾಗಿ ಬಿಡುಗಡೆಗೊಳಿಸಲು ಅಗತ್ಯ ರಾಜತಾಂತ್ರಿಕ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ