ಮೈಸೂರು, ಅ.21: ಕೆಲಸ ಮಾಡುವಾಗ ವಿದ್ಯುತ್ ಅವಘಡ ಸಂಭವಿಸಿದ್ದು, ಚೆಸ್ಕಾಂ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು(Mysore) ತಾಲೂಕಿನ ಯಡಹಳ್ಳಿ ಗ್ರಾಮದ ಬಳಿ ನಡೆದಿದೆ. ಸತೀಶ್ (52) ಮೃತ ಚೆಸ್ಕಾಂ ಸಿಬ್ಬಂದಿ. ಇವರು ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಕೆಸ್ತೂರು ಕೊಪ್ಪಲು ನಿವಾಸಿಯಾಗಿದ್ದು, 24 ವರ್ಷದಿಂದ ಚೆಸ್ಕಾಂ(Chescom) ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ವಿದ್ಯುತ್ ಅವಘಡ ಸಂಭವಿಸಿ ಮೃತಪಟ್ಟಿದ್ದಾರೆ. ಇನ್ನು ಮೇಲಾಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಸತೀಶ್ ಕುಟುಂಬದವರು ಆರೋಪಿಸಿದ್ದು, ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ: ಖದೀಮರು ಕಾರಿನ ಗ್ಲಾಸ್ ಒಡೆದು 13 ಲಕ್ಷ ರೂ ದೋಚಿದ ಘಟನೆ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸರ್ಜಾಪುರದ ಸೋಂಪುರದಲ್ಲಿ ನಡೆದಿದೆ. ಕಳ್ಳರ ಕೈಚಳಕದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಣಕನಹಳ್ಳಿಯ ಬಾಬು ಎಂಬುವವರಿಗೆ ಸೇರಿದ ಬಿಎಂಡಬ್ಲ್ಯೂ ಕಾರನ್ನು ಸಬ್ ರಿಜಿಸ್ಟರ್ ಕಚೇರಿ ಮುಂಭಾಗದಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಬೈಕ್ನಲ್ಲಿ ಬಂದಿದ್ದ ಇಬ್ಬರು ಖತರ್ನಾಕ್ ಕಳ್ಳರು, ಕಾರಿನ ಗ್ಲಾಸ್ ಒಡೆದು ಹದಿಮೂರು ಲಕ್ಷ ದೋಚಿದ್ದಾರೆ. ಈ ಕುರಿತು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಬೆಂಗಳೂರು: ಅಪಘಾತದಲ್ಲಿ ವ್ಯಕ್ತಿ ಸಾವು, ತನಿಖೆ ವೇಳೆ ಬಯಲಾಯ್ತು ಕೊಲೆ ವಿಚಾರ
ಮೈಸೂರು: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಘಟನೆ ಮೈಸೂರಿನ ಹಾರ್ಡಿಂಗ್ ಸರ್ಕಲ್ ವೃತ್ತದಲ್ಲಿ ನಡೆದಿದೆ. ಟ್ರಾಫಿಕ್ ಜಾಮ್ ಆಗುತ್ತೆ, ಬೇಗ ಹೋಗಿ ಎಂದಿದ್ದಕ್ಕೆ ಪೊಲೀಸ್ ಸಿಬ್ಬಂದಿ ವೈ.ರಾಜು ಹಾಗೂ ಅರುಣ್ ಕೌಶಿಕ್ ಮೇಲೆ ಹಲ್ಲೆ ಮಾಡಲಾಗಿದೆ. ದಸರಾ ವೀಕ್ಷಣೆಗೆ ಬಂದಿದ್ದ ಬೆಂಗಳೂರು ಮೂಲದ ಉಮೇಶ್ ಹರೀಶ್, ಧ್ರುವ, ಲತಾ ಮತ್ತು ಗಾನವಿ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಈ ಕುರಿತು ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ