Mysore News: ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಆತ್ಮಹತ್ಯೆ

ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಗೀತಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Mysore News: ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಆತ್ಮಹತ್ಯೆ
ಹೊಟ್ಟೆನೋವು ತಾಳಲಾರದೇ ಬಾಲಕಿ ಆತ್ಮಹತ್ಯೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Jun 13, 2023 | 9:26 AM

ಮೈಸೂರು: ನಂಜನಗೂಡು(Nanjangud) ತಾಲೂಕಿನ ಹುರ ಗ್ರಾಮದಲ್ಲಿ ಹೊಟ್ಟೆನೋವು (Stomach ache) ತಾಳಲಾರದೆ ಕೆರೆಗೆ ಹಾರಿ ಬಾಲಕಿ ಗೀತಾ ಎಂಬುವವರು ಆತ್ಮಹತ್ಯೆ(suicide)ಮಾಡಿಕೊಂಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ವಣಕನಪುರ ಗ್ರಾಮದವರಾದ ಬಾಲಕಿ ಗೀತಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ಆಗಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು, ತೀವ್ರ ನೋವು ತಾಳಲಾರದೇ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ನದಿಯಲ್ಲಿ ಅಪರಿಚಿತ ಶವ ಪತ್ತೆ

ಮೈಸೂರು: ಹುಣಸೂರು ತಾಲ್ಲೂಕಿನ ಕರಿ ಮಾರಮ್ಮ ದೇವಾಲಯದ ಬಳಿಯ ಲಕ್ಷ್ಮಣತೀರ್ಥ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಶವದ ಎಡಗೈಯಲ್ಲಿ ಸಾಯಿಕುಮಾರ್ ಹಾಗೂ ಬಲಗೈಯಲ್ಲಿ ಎಸ್​ಜಿ ಗೀತಾ ಎಂದು ಹಚ್ಚೆ ಗುರುತು ಇದೆ. ನೀಲಿ ಬಣ್ಣದ ಪ್ಯಾಂಟ್ ಹಾಗೂ ಕಪ್ಪು ಬಣ್ಣದ ಬಿಳಿಗೆರೆಯುಳ್ಳ ಶರ್ಟ್ ಧರಿಸಿರುವ ವ್ಯಕ್ತಿಯ ಮೃತ ದೇಹದ ಗುರುತು ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹೆಂಡತಿಯನ್ನು ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾದ ಗಂಡ, ಇತ್ತ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದ ಮಗ ಅನಾಥನಾದ! ನಡೆದಿದ್ದೇನು?

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಎಮ್ಮೆ ಸಾವು

ಗದಗ‌: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸಾಸರವಾಡ‌ ಗ್ರಾಮದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಎಮ್ಮೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಲ್ಲಯ್ಯ ಶಂಕ್ರಯ್ಯ ಮುದಗಲ್ಲಮಠ ಅನ್ನೋ ರೈತರಿಗೆ ಸೇರಿದ್ದ ಎಮ್ಮೆ ಇದಾಗಿದ್ದು, ಸಾಸರವಾಡ ಗ್ರಾಮದ‌ ನದಿದಡದಲ್ಲಿ ಮೇಯಿಸಲು ಹೋದಾಗ ಈ ರ್ದುಘಟನೆ ನಡೆದಿದ್ದು, 50 ರಿಂದ 60 ಸಾವಿರ ರೂಪಾಯಿ ನಷ್ಟವನ್ನ ರೈತ ಅನುಭವಿಸಿದ್ದಾನೆ. ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:25 am, Tue, 13 June 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್