ಮೈಸೂರಿನಲ್ಲಿ ಹಾಡಹಗಲೇ ಚಿನ್ನದ ವ್ಯಾಪಾರಿ ಮೇಲೆ ಚಾಕು ಇರಿತ

ಹಾಡಹಗಲೇ ಚಿನ್ನದ ವ್ಯಾಪಾರಿ ಮೇಲೆ ಚಾಕು ಇರಿದ ಘಟನೆ ಮೈಸೂರು ನಗರದ ಹೂಟಗಳ್ಳಿಯ ಕೆಎಚ್​ಬಿ ಕಾಲೋನಿಯಲ್ಲಿ ನಡೆದಿದೆ. ಈ ವೇಳೆ ವ್ಯಾಪಾರಿ ಬಾಬುರಾವ್ ಪತ್ನಿ ಕಮಲಬಾಯಿ(52) ಅವರಿಗೆ ಗಾಯವಾಗಿದೆ. ಈ ಕುರಿತು ವಿಜಯನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೈಸೂರಿನಲ್ಲಿ ಹಾಡಹಗಲೇ ಚಿನ್ನದ ವ್ಯಾಪಾರಿ ಮೇಲೆ ಚಾಕು ಇರಿತ
ಪ್ರಾತಿನಿಧಿಕ ಚಿತ್ರ
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 17, 2023 | 1:38 PM

ಮೈಸೂರು, ಆ.17: ನಗರದ ಹೂಟಗಳ್ಳಿಯ (Hutagalli) ಕೆಎಚ್​ಬಿ ಕಾಲೋನಿಯಲ್ಲಿ ದುಷ್ಕರ್ಮಿಗಳು ಹಾಡಹಗಲೇ ಚಿನ್ನದ ವ್ಯಾಪಾರಿ ಮೇಲೆ ಚಾಕು ಇರಿದ ಘಟನೆ ನಡೆದಿದೆ. ಈ ವೇಳೆ ಬಾಬುರಾವ್ ಪತ್ನಿ ಕಮಲಬಾಯಿ(52) ಅವರಿಗೆ ಗಾಯವಾಗಿದೆ. ಗೃಹಪ್ರವೇಶಕ್ಕೆ ಆಹ್ವಾನ ಪತ್ರ ನೀಡುವ ನೆಪದಲ್ಲಿ ಬಂದ ಅಪರಿಚಿತರಿಬ್ಬರು. ಚಿನ್ನದ ವ್ಯಾಪಾರಿ ಬಾಬುರಾವ್​ರನ್ನು ನಿಮ್ಮ ಪುತ್ರ ಹರೀಶ್ ಎಲ್ಲಿ ಎಂದು ಕೇಳಿದ್ದಾರೆ. ಬಾಬುರಾವ್ ಹರೀಶ್ ಮನೇಲಿ ಇಲ್ಲ ಎಂದಿದ್ದಾರೆ. ಈ ವೇಳೆ ಕುಪಿತಗೊಂಡ ಅಪರಿಚಿತರಿಬ್ಬರು ಬಾಬುರಾವ್ ಮತ್ತು ಪತ್ನಿ ಕಮಲಬಾಯಿಗೆ ಚಾಕುವಿನಿಂದ ಇರಿದು, ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿಜಯನಗರ ಠಾಣೆ ಪೋಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜೈಲಿನಲ್ಲಿ ಶಿಕ್ಷಣ ಪಡೆದು ಲೇಖಕನಾಗಿದ್ದ ವ್ಯಕ್ತಿ ಸಾವು

ಬೆಂಗಳೂರು ಗ್ರಾಮಾಂತರ: ಜೈಲಿನಲ್ಲಿ ಶಿಕ್ಷಣ ಪಡೆದು ಲೇಖಕನಾಗಿದ್ದ ವ್ಯಕ್ತಿ. ಇಂದು(ಆ.17) ರಸ್ತೆ ಬದಿಯ ಹಳ್ಳಕ್ಕೆ ಕಾರು ಉರುಳಿ ಬಿದ್ದು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಲಿಂಗನಹಳ್ಳಿ ಬಳಿ ನಡೆದಿದೆ. ಯಲ್ಲಪ್ಪ ಮೃತ ವ್ಯಕ್ತಿ. ಇತ ದೊಡ್ಡಬಳ್ಳಾಪುರ ನಗರ ನಿವಾಸಿಯಾಗಿದ್ದು, ಚಿಕ್ಕ ವಯಸ್ಸಿನಲ್ಲಿ ಅಪರಾಧ ಮಾಡಿ ಜೈಲು ಸೇರಿದ್ದ. ಬಳಿಕ ಜೈಲಿನಿಂದ ಬಿಡುಗಡೆಯಾದ ನಂತರ ಜೈಲು ಜೀವಗಳು ಎಂಬ ಪುಸ್ತಕ ಬರೆದಿದ್ದ. ಜೊತೆಗೆ ಸಮಾಜ ಸೇವೆಯಲ್ಲೂ ತೊಡಗಿದ್ದ. ಆದ್ರೆ, ಮುಂಜಾನೆ ಕಾರಿನಲ್ಲಿ ಬರುತ್ತಿದ್ದ ವೇಳೆ ಅಪಘಾತವಾಗಿ ಸಾವನ್ನಪ್ಪಿದ್ದಾನೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Mysore police: ಐಶಾರಾಮಿ ಕಾರು, ಶ್ರೀಮಂತರ ಮನೆಯೇ ಇವನ ಟಾರ್ಗೆಟ್: 56 ಕಳ್ಳತನ ಮಾಡಿದ್ದರೂ ಪೊಲೀಸರಿಗೆ ಮಾತ್ರ ಸಿಕ್ಕಿರಲಿಲ್ಲ- ಕೊನೆಗೂ ಅಂದರ್​

ಅಪರಿಚಿತ ವ್ಯಕ್ತಿಯಿಂದ ವೃದ್ದನ ಕೊಲೆ

ಕೋಲಾರ: ಅಪರಿಚಿತ ವ್ಯಕ್ತಿಯೋರ್ವ ವೃದ್ದನ ತಲೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಕೋಲಾರ ಜಿಲ್ಲೆಯ ಕೆಜಿಎಫ್​ನ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಮೇಜರ್(65) ಕೊಲೆಯಾದ ವೃದ್ದ. ಇತ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಏಕಾಎಕಿ ಬಂದು, ತಲೆಗೆ ಕಲ್ಲಿನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದಾನೆ. ಇನ್ನು ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:37 pm, Thu, 17 August 23

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು