ಮೈಸೂರು: ಮನೆಯಲ್ಲಿ ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವದಹನ! ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೈಸೂರು: ಮನೆಯಲ್ಲಿ ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವದಹನ! ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ
ಮನೆಗೆ ಬೆಂಕಿ ತಗುಲಿದೆ, ಮೃತ ವ್ಯಕ್ತಿ ಸೋಮಶೇಖರಪ್ಪ
Follow us
TV9 Web
| Updated By: sandhya thejappa

Updated on:Mar 13, 2022 | 12:28 PM

ಮೈಸೂರು: ಮನೆಯಲ್ಲಿ ಆಕಸ್ಮಿಕ ಬೆಂಕಿಗೆ (Fire) ವ್ಯಕ್ತಿ ಸಜೀವದಹನ ಆಗಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ಸೋಮಶೇಖರಪ್ಪ(53) ಎಂಬುವವರು ಮೃತಪಟ್ಟಿದ್ದು, ಶಾರ್ಟ್ ಸರ್ಕ್ಯೂಟ್​ನಿಂದ (Short Circuit) ಮನೆಯಲ್ಲಿ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿಯ ಕೆನ್ನಾಲಗೆಗೆ ಅಕ್ಕಪಕ್ಕದ 2 ಮನೆಗಳಿಗೆ ಹಾನಿಯಾಗಿದೆ. ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಸ್ತುಗಳೆಲ್ಲಾ ಸುಟ್ಟು ಭಸ್ಮ: ಕೋಲಾರ: ವಿದ್ಯುತ್ ಲೈನ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ತಗುಲಿ ವಸ್ತುಗಳೆಲ್ಲಾ ಸುಟ್ಟು ಭಸ್ಮವಾಗಿವೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ರಾಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮುನಿಯಪ್ಪ ಎಂಬುವರಿಗೆ ಸೇರಿದ ಮನೆ ಸುಟ್ಟು ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,. ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗಾಹುತಿ ಆಗಿವೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಈ ಘಟನೆ ನಡೆದಿದೆ ಅಂತ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ನಷ್ಟ ಅನುಭವಿಸಿದ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಆಗ್ರಹಹಿಸಿದ್ದಾರೆ.

ರಾಯಚೂರು: ಜಿಲ್ಲೆ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಬಳಿ ಮರಳು ಲಾರಿಗಳನ್ನು ಓವರ್ ಟೇಕ್ ಮಾಡಲು ಹೋಗಿ ಅಪಘಾತ ನಡೆದಿದೆ. ಜಾಲಹಳ್ಳಿ ಸುತ್ತ ಹೆಚ್ಚಾಗಿ ಮರಳು ಲಾರಿಗಳು ಓಡಾಡುತ್ತಿವೆ. ಗೂಡ್ಸ್ ವಾಹನ ಚಾಲಕ ಮರಳು ಲಾರಿಗಳನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ಗೂಡ್ಸ್ ವಾಹನ ಬಿದ್ದಿದೆ. ಗೂಡ್ಸ್ ವಾಹನ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಡೀಸೆಲ್ ಕಳ್ಳನ ಮೇಲೆ ಗುಂಡು ಹಾರಿಸಿದ ಪೊಲೀಸರು: ಡೀಸೆಲ್ ಕಳ್ಳನ ಮೇಲೆ ಬೆಂಗಳೂರಿನ ಜಿಗಣಿ ಠಾಣೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶ್ರೀನಿವಾಸ್ ಅಲಿಯಾಸ್ ರಾಜು ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಜಿಗಣಿಯ ಡಿಎಲ್‌ಎಫ್ ಬಳಿ ಘಟನೆ ನಡೆದಿದೆ. ಆರೋಪಿ ರಸ್ತೆಬದಿ ನಿಲ್ಲಿಸಿದ್ದ ವಾಹನಗಳಲ್ಲಿ ಡೀಸೆಲ್ ಕದಿಯುತಿದ್ದ. ಆರೋಪಿಗಳನ್ನ ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಈ ವೇಳೆ ಒಬ್ಬ ಆರೋಪಿಗೆ ಪೊಲೀಸರು ಗುಂಡು ಹಾರಿಸಿ, ಇಬ್ಬರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ

ಕೊರೊನಾದಿಂದ ನಿಂತುಹೋಗಿದ್ದ ಮೇಲುಕೋಟೆ ವೈರಮುಡಿ ಉತ್ಸವ ಈ ಬಾರಿ ಅದ್ದೂರಿ! ಇಲ್ಲಿನ ಪುರಾಣ ಇತಿಹಾಸ ಏನು?

ಭವಿಷ್ಯದ ಬ್ಯಾಟಿಂಗ್ ಸೂಪರ್ ಸ್ಟಾರ್: ಕ್ರಿಕೆಟ್ ದೇವರನ್ನೇ ಇಂಪ್ರೆಸ್ ಮಾಡಿರುವ 5 ವರ್ಷದ ಶಾಹಿದ್

Published On - 8:57 am, Sun, 13 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್