ಮೈಸೂರಿನಲ್ಲಿ ಜೂಜು ಅಡ್ಡೆ ಮೇಲೆ ದಾಳಿ; ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ್ದ ವ್ಯಕ್ತಿ ಸಾವು

ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ್ದ ನಂಜುಂಡನಿಗೆ ಈಜು ಬರುತ್ತಿರಲಿಲ್ಲ. ಹೀಗಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಮೈಸೂರಿನಲ್ಲಿ ಜೂಜು ಅಡ್ಡೆ ಮೇಲೆ ದಾಳಿ; ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ್ದ ವ್ಯಕ್ತಿ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on: Oct 11, 2021 | 8:48 AM

ಮೈಸೂರು: ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ ಹಿನ್ನೆಲೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಜಿಲ್ಲೆಯ ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ಕೆರೆಯಲ್ಲಿ ಮುಳುಗಿ ನಂಜುಂಡ (37) ಎಂಬುವವರು ಮೃತಪಟ್ಟಿದ್ದಾರೆ. ನಿನ್ನೆ (ಅ.10) ಸಂಜೆ 6 ಗಂಟೆ ಸಮಯದಲ್ಲಿ 5 ರಿಂದ 6 ಜನ ಜೂಜಾಡುತ್ತಿದ್ದರು. ಈ ವೇಳೆ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸುತ್ತಾರೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ನಂಜುಂಡ ಕೆರೆಗೆ ಹಾರುತ್ತಾರೆ. ಹೀಗೆ ಕೆರೆಗೆ ಹಾಕಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ್ದ ನಂಜುಂಡನಿಗೆ ಈಜು ಬರುತ್ತಿರಲಿಲ್ಲ. ಹೀಗಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಶೋಧ ಕಾರ್ಯದಲ್ಲಿ ನಂಜುಂಡ ಮೃತದೇಹ ಪತ್ತೆಯಾಗಿದೆ. ಈ ಪ್ರಕರಣ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಯುವಕನ ಮೃತದೇಹ ಪತ್ತೆ ತುಮಕೂರು: ಅಣೆಕಟ್ಟು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಅಂಕಸಂದ್ರ ಅಣೆಕಟ್ಟೆಯಲ್ಲಿ ಯುವಕನ ಮೃತದೇಹ ಸಿಕ್ಕಿದೆ. 3 ದಿನದ ಹಿಂದೆ ಈಜುವ ವೇಳೆ ಯುವಕ ನೀರಲ್ಲಿ ಮುಳುಗಿದ್ದ. ಮೂರು ದಿನದಿಂದ ಯುವಕ ದಯಾನಂದ್ಗಾಗಿ ಶೋಧಕಾರ್ಯ ನಡೆಯುತ್ತಿತ್ತು. ಕೊನೆಗೆ ದಯಾನಂದ್ ಮೃತದೇಹ ನೀರಿನಲ್ಲಿ ತೇಲಿದೆ.

ಇದನ್ನೂ ಓದಿ

ವಿಜಯನಗರ: ಕಲುಷಿತ ನೀರು ಸೇವನೆ ಪ್ರಕರಣ; ಮಕರಬ್ಬಿ ಗ್ರಾಮದಲ್ಲಿ ಮುಂದುವರಿದ ಸಾವಿನ ಸರಣಿ

ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ರಿಂದ ಫಲಿತಾಂಶ ಬಿಡುಗಡೆ