ಮೈಸೂರು: ಅಂಗಡಿಗೆ ನುಗ್ಗಿ ತಲೆಯಿಂದ ಡಿಚ್ಚಿ ಹೊಡೆದು ಯುವಕನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ದುಷ್ಕರ್ಮಿಯೊಬ್ಬ ಮೊಬೈಲ್​ ಅಂಗಡಿಗೆ ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಪುಂಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮೈಸೂರು: ಅಂಗಡಿಗೆ ನುಗ್ಗಿ ತಲೆಯಿಂದ ಡಿಚ್ಚಿ ಹೊಡೆದು ಯುವಕನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ
ಅಂಗಡಿಗೆ ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ
Edited By:

Updated on: Nov 18, 2023 | 6:55 AM

ಮೈಸೂರು, ನ.18: ದುಷ್ಕರ್ಮಿಯೊಬ್ಬ ಮೊಬೈಲ್​ ಅಂಗಡಿಗೆ ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. ಪುಂಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ.

ಮೈಸೂರಿನ ಜಗನ್ಮೋಹನ ಪ್ಯಾಲೇಸ್‌ ಬಳಿ ಇರುವ ಮೊಬೈಲ್ ಅಂಗಡಿಗೆ ನುಗ್ಗಿದ ವ್ಯಕ್ತಿಯೊಬ್ಬ ಮೊಬೈಲ್ ಅಂಗಡಿಗೆ ನುಗ್ಗಿ ಪುಂಡಾಟ ಮೆರೆದಿದ್ದಾನೆ. ಅಲ್ಲದೆ, ಯುವಕನಿಗೆ ತಲೆಯಿಂದ ಡಿಚ್ಚಿ ಹೊಡೆದು ಹಲ್ಲೆ ನಡೆಸಿದ್ದಾನೆ. ಮುಷ್ಟಿ ಏಟಿನಿಂದಾಗಿ ಯುವಕನ ಮೂಗಿನಿಂದ ರಕ್ತ ಸುರಿದಿದೆ.

ಇದನ್ನೂ ಓದಿ: ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ ಕೇಸ್​ಗೆ ಬಿಗ್ ಟ್ವಿಸ್ಟ್: ಮಹಿಳೆಯ ಒಪ್ಪಿಗೆ ಮೇರೆಗೆ ಎಲ್ಲವೂ ನಡೆದಿದ್ಯಾ? ವಿಡಿಯೋ ವೈರಲ್

ಯುವಕ ಹಲ್ಲೆ ನಡೆಸುತ್ತಿರುವಾಗ ಮಧ್ಯಪ್ರವೇಶಿಸಿದ ಮತ್ತೊಬ್ಬ ವ್ಯಕ್ತಿ ಆತನನ್ನು ತಡೆಯಲು ಯತ್ನಿಸಿದ್ದಾನೆ. ಆದರೂ ದುಷ್ಕರ್ಮಿ ಹಲ್ಲೆ ನಡೆಸುವುದನ್ನು ಮುಂದುವರಿಸಿದ್ದಾನೆ. ಬಳಿಕ ಮತ್ತೊಬ್ಬ ವ್ಯಕ್ತಿಯೋ ಎಂಟ್ರಿ ಕೊಟ್ಟು ಹಲ್ಲೆ ನಡೆಸುತ್ತಿರುವ ವ್ಯಕ್ತಿಯನ್ನು ಎಳೆದೊಯ್ದರು.

ಘಟನೆಯ ದೃಶ್ಯಗಳು ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ಇದಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:55 am, Sat, 18 November 23