ಮೈಸೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಿಂದ ಹಲ್ಲೆ ಆರೋಪ; ಕುಲಸಚಿವರ ಕಚೇರಿ ಎದುರೇ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
ಮೈಸೂರು ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಹಾಗೂ ಉಪನ್ಯಾಸಕರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಯೋರ್ವ ಕುಲಸಚಿವರ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೂಡಲೇ ಇತರ ವಿದ್ಯಾರ್ಥಿಗಳು ಆಸ್ಪತ್ರೆಗೆ ಸೇರಿಸಿದ್ದಾರೆ.
ಮೈಸೂರು, ಸೆ.09: ಮೈಸೂರು ವಿಶ್ವ ವಿದ್ಯಾಲಯ (Mysore University)ದ ಕುಲಸಚಿವರ ಕಚೇರಿ ಎದುರೇ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ದೈಹಿಕ ಶಿಕ್ಷಣ ವಿಭಾಗದ ಗಗನ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ. ಇತ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ವೆಂಕಟೇಶ್ ಅವರು ನನ್ನ ಮೇಲೆ ಹಲ್ಲೆ ಮಾಡಿದ್ದು ಮತ್ತು ಉಪನ್ಯಾಸಕರ ಕಿರುಕುಳ ನೀಡುತ್ತಿದ್ದಾರೆಂದು ಪೊಲೀಸರಿಗೆ ದೂರು ಕೊಟ್ಟಿದ್ದ. ಆದರೆ, ಪೊಲೀಸ್ ಅಧಿಕಾರಿಗಳು ಮಾತ್ರ ದೂರು ಕೊಟ್ಟರು ಕ್ರಮ ಕೈಗೊಳ್ಳದ ಹಿನ್ನಲೆ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಮಾತ್ರೆ ಸೇವಿಸಿ ಸೆಲ್ಪಿ ವೀಡಿಯೋ ಮಾಡಲು ಮುಂದಾದ ವಿದ್ಯಾರ್ಥಿ
ಇನ್ನು ಗಗನ್ ಮಾತ್ರೆ ಸೇವಿಸಿ ಸೆಲ್ಪಿ ವೀಡಿಯೋ ಮಾಡಲು ಮುಂದಾಗಿದ್ದಾನೆ. ಕೂಡಲೇ ಆತ್ಮಹತ್ಯೆಗೆ ಯತ್ನಿಸಿದ ಗಗನ್ನನ್ನು ವಿದ್ಯಾರ್ಥಿಗಳು ಆಸ್ಪತ್ರೆಗೆ ಸಾಗಿಸಿ, ರಕ್ಷಣೆ ಮಾಡಿದ್ದಾರೆ. ಇದೀಗ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಗಗನ್ ಹೋರಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಕುಡಿದು ಸತ್ತಿದ್ದರೂ ಪರಿಹಾರದ ಆಸೆಗೆ ಆತ್ಮಹತ್ಯೆ ಅಂತಾರೆ: ಅನ್ನದಾತನ ಬಗ್ಗೆ ಶಿವಾನಂದ ಪಾಟೀಲ್ ಅವಹೇಳನ ಹೇಳಿಕೆ
ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು
ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಗೌಡಹಳ್ಳಿ ಗೇಟ್ ಬಳಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ತಮಿಳುನಾಡು ಮೂಲದ ಬಟ್ಟೆ ವ್ಯಾಪಾರಿಯೊಬ್ಬರಿಗೆ ಸೇರಿದ ಕಾರು ಇದಾಗಿದ್ದು, ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಇಂಜಿನ್ನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರು ನಿಲ್ಲಿಸಿದ್ದಾರೆ. ಕೂಡಲೇ ಕಾರಿನಿಂದ ಲಗ್ಗೆಜ್ ಕೆಳಗೆ ತೆಗದುಕೊಳ್ಳುವಷ್ಟರಲ್ಲಿ ಕಾರು ಸುಟ್ಟು ಭಸ್ಮವಾಗಿದ್ದು, ಈ ಕುರಿತು ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ