ಕೆಟ್ಟದಾಗಿ ಕಮೆಂಟ್ ಮಾಡಿದ್ದಾನೆಂದು ಮೈಸೂರು ಯುವಕನ ಕೊಲೆ! ಚಿಕ್ಕಬಳ್ಳಾಪುರದಲ್ಲಿ ಅಂಗನವಾಡಿ ಶಿಕ್ಷಕಿಯ ಬರ್ಬರ ಹತ್ಯೆ

ಬೈಕ್​ನಲ್ಲಿ ಕರೆದೊಯ್ದು ಆರೋಪಿಗಳು ಕೊಲೆ ಮಾಡಿದ್ದು, ಈ ಬಗ್ಗೆ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಟ್ಟದಾಗಿ ಕಮೆಂಟ್ ಮಾಡಿದ್ದಾನೆಂದು ಮೈಸೂರು ಯುವಕನ ಕೊಲೆ! ಚಿಕ್ಕಬಳ್ಳಾಪುರದಲ್ಲಿ ಅಂಗನವಾಡಿ ಶಿಕ್ಷಕಿಯ ಬರ್ಬರ ಹತ್ಯೆ
ಕೊಲೆಯಾದ ಬೀರೇಶ್
Follow us
TV9 Web
| Updated By: sandhya thejappa

Updated on:Jul 13, 2022 | 11:04 AM

ಮೈಸೂರು: ಸೋಶಿಯಲ್ ಮೀಡಿಯಾದಲ್ಲಿ (Social Media) ಕೆಟ್ಟದಾಗಿ ಕಮೆಂಟ್ (Comment) ಮಾಡಿದ್ದಾನೆಂದು ಜಿಲ್ಲೆಯ ಹುಣಸೂರಲ್ಲಿ ಯುವಕನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. 23 ವರ್ಷದ ಬೀರೇಶ್ ಕೊಲೆಯಾದ ಯುವಕ. ಬೀರೇಶ್ ಇನ್​​ಸ್ಟಾಗ್ರಾಮ್​ನಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿದ್ದಾನೆಂದು ಆರೋಪಿಸಿ ನಿತಿನ್ ಮತ್ತು ಮನು ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ. ಬೈಕ್​ನಲ್ಲಿ ಕರೆದೊಯ್ದು ಆರೋಪಿಗಳು ಕೊಲೆ ಮಾಡಿದ್ದು, ಈ ಬಗ್ಗೆ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಕೊಲೆ ಆರೋಪಿ ನಿತಿನ್ ಮದುವೆಯಾಗಿದ್ದ. ಯುವತಿ ಆರ್ಥಿಕವಾಗಿ ಸಬಲಳಾಗಿದ್ದಳು. ಮದುವೆ ಬಗ್ಗೆ ಬೀರೇಶ್ ಕಾಮೆಂಟ್ ಮಾಡಿದ್ದ.ಇದೇ ಕಾರಣಕ್ಕೆ ಬೀರೇಶ್ ಬಗ್ಗೆ ಆಕ್ರೋಶಗೊಂಡಿದ್ದ ನಿತಿನ್, ಸ್ನೇಹಿತ ಮನು ಜೊತೆ ಸೇರಿ ಕೊಲೆ ಮಾಡಿದ್ದಾನೆ. ಕೊಲೆ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಅಂಗನವಾಡಿ ಶಿಕ್ಷಕಿಯ ಬರ್ಬರ ಕೊಲೆ: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಾಯನಹಳ್ಳಿಯಲ್ಲಿ ಮನೆಯಲ್ಲಿದ್ದ ಅಂಗನವಾಡಿ ಶಿಕ್ಷಕಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಖದೀಮರು ಕತ್ತು ಸೀಳಿ ವೆಂಕಟಲಕ್ಷ್ಮಮ್ಮ(52)ನನ್ನು ಹತ್ಯೆ ಮಾಡಿದ್ದಾರೆ. ಶಿಕ್ಷಕಿಯ ಮನೆಯ ಬೀರುವಿನಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ದರೋಡೆ ಮಾಡಿ ಶಿಕ್ಷಕಿಯನ್ನ ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ
Image
Sexual Abuse: ಲೈಂಗಿಕ ದೌರ್ಜನ್ಯಕ್ಕೆ ಹುಡುಗಿಯರ ಫ್ಯಾಷನ್ ಕಾರಣ; ಇದು ಬೆಂಗಳೂರಿನ ಬಹುತೇಕ ಪೋಷಕರ ಅಭಿಪ್ರಾಯ
Image
ಸುಳ್ಳು ಹೇಳಿ ಮುಸ್ಲಿಮರ ಬಗ್ಗೆ ದ್ವೇಷ, ಭಯ ಹುಟ್ಟಿಸಬೇಡಿ; ಬಿಜೆಪಿ ಸರ್ಕಾರದ ವಿರುದ್ಧ ಓವೈಸಿ ಆಕ್ರೋಶ
Image
‘ಸಾರಿ ಕರ್ಮ ರಿಟರ್ನ್ಸ್​’: 11 ವರ್ಷದಲ್ಲಿ ರಾಗಿಣಿ ದ್ವಿವೇದಿ ತೆಗೆದುಕೊಂಡ ರಿಸ್ಕ್​ ಏನು?
Image
ಸಿದ್ದರಾಮೋತ್ಸವಕ್ಕೆ ಡಿ.ಕೆ.ಶಿವಕುಮಾರ್ ಬೆಂಬಲಿಗರಿಂದ ಟಕ್ಕರ್: ಶಿವಕುಮಾರೋತ್ಸವ ಮಾಡುವಂತೆ ಸಿದ್ದರಾಮಯ್ಯಗೆ ಪತ್ರ

ಇದನ್ನೂ ಓದಿ: Manoranjan Ravichandran: ರವಿಚಂದ್ರನ್​ ಪುತ್ರ ಮನೋರಂಜನ್​ಗೆ ಕಂಕಣ ಭಾಗ್ಯ; ಕೈ ಹಿಡಿಯಲಿರುವ ಹುಡುಗಿ ಹಿನ್ನೆಲೆ ಏನು?

ಪತ್ನಿಯನ್ನೇ ಕೊಂದ ಪತಿ: ಖರ್ಚಿಗೆ ಹಣ ಕೊಡದಿದ್ದಕ್ಕೆ ಪತಿ ತನ್ನ ಪತ್ನಿಯನ್ನೇ ಕೊಂದಿದ್ದಾನೆ. ಬೆಂಗಳೂರು ಗ್ರಾ. ಜಿಲ್ಲೆಯ ಹೊಸಕೋಟೆ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಹೊಸಪತಿ ವೆಂಕಟೇಶ್​ ಎಂಬಾತ ಪತ್ನಿ ಮುನಿರತ್ನ(25)ಳನ್ನ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಪತಿ ಹಲವು ದಿನಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದ. ಕೆಲಸಕ್ಕೆ ಹೋಗುವಂತೆ ಪತ್ನಿ ಹಲವು ಬಾರಿ ಬುದ್ಧಿವಾದ ಹೇಳಿದ್ದಾಳೆ. ಬುದ್ಧಿವಾದ ಹೇಳಿದಕ್ಕೆ ಆಕ್ರೋಶಗೊಂಡು ಪತ್ನಿಯನ್ನು ಹತ್ಯೆಗೈದಿದ್ದಾನೆ.

ವಾಹನದಲ್ಲಿದ್ದ 6 ಜನರಿಗೆ ಗಾಯ: ಬಾಗಲಕೋಟೆ: ಟಿಪ್ಪರ್​ ಡಿಕ್ಕಿಯಾಗಿ ಕ್ರೂಸರ್​​ ವಾಹನದಲ್ಲಿದ್ದ 6 ಜನರಿಗೆ ಗಾಯವಾಗಿದೆ. ಬೀಳಗಿ ತಾಲೂಕಿನ ಅನಗವಾಡಿ ಸೇತುವೆ ಬಳಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಕ್ರೂಸರ್​ನಲ್ಲಿ ಸಿಲುಕಿದವರನ್ನ ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದೆ.

ಇದನ್ನೂ ಓದಿ: ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಬಿಟ್ಟಿದ್ದರಿಂದ ಆನೆಗುಂದಿಯ ಶ್ರೀಕೃಷ್ಣದೇವರಾಯ ಮಂಟಪ ಜಲಾವೃತ

Published On - 10:31 am, Wed, 13 July 22

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ