ಕೆಎಸ್​ಆರ್​ಟಿಸಿ ಬಸ್ ಮತ್ತು ಜೀಪ್ ಮಧ್ಯೆ ಅಪಘಾತ: ಮೂವರ ಸಾವು

ಎರಡು ಪ್ರತ್ಯೇಕ ಘಟನೆ: ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್ ಮತ್ತು ಜೀಪ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮತ್ತೊಂದಡೆ ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ದೇವಿಕೆರೆ ಬಳಿ ನಡೆದಿದೆ.

ಕೆಎಸ್​ಆರ್​ಟಿಸಿ ಬಸ್ ಮತ್ತು ಜೀಪ್ ಮಧ್ಯೆ ಅಪಘಾತ: ಮೂವರ ಸಾವು
ನುಜ್ಜುಗುಜ್ಜಾದ ಜೀಪ್​​
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 02, 2024 | 10:14 AM

ಮೈಸೂರು, ಜನವರಿ 02: ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC)ಯ ಬಸ್ ಮತ್ತು ಜೀಪ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಜೀಪ್​ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವೀಗಿಡಾಗಿದ್ದಾರೆ. ಸ್ಥಳಕ್ಕೆ ಹುಣಸೂರು (Hunsur) ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೀಪ್ ಹೆಚ್​ಡಿ ಕೋಟೆಯಿಂದ ಬರುತ್ತಿತ್ತು. ಮೃತಪಟ್ಟವರು ಕೂಲಿ ಕಾರ್ಮಿಕರು ಎಂಬ ಮಾಹಿತಿ ದೊರೆತಿದೆ.

ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

ದಾವಣಗೆರೆ: ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ದೇವಿಕೆರೆ ಬಳಿ ನಡೆದಿದೆ. ಗುರುಮೂರ್ತಿ (35) ಮೃತ ದುರ್ದೈವಿಗಳು. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗೋವಾ ಪ್ರವಾಸಕ್ಕೆ ಹೋಗಿ ವಾಪಸಾಗುವಾಗ ಘಟನೆ ಸಂಭವಿಸಿದೆ. ಜಗಳೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಶಿವಮೊಗ್ಗ: ಬರ್ತ್‌ಡೇ ಆಚರಿಸಿಕೊಳ್ಳಲು ಬೈಕ್​ ಮೇಲೆ ತೆರಳುತ್ತಿದ್ದವರು ಅಪಘಾತಕ್ಕೆ ಬಲಿ

ಐವರು ಡಿಸೆಂಬರ್​ 31 ರಂದು ಜಗಳೂರಿನಿಂದ ಗೋವಾಕ್ಕೆ ಹೋಗಿದ್ದರು. ಗೋವಾದಲ್ಲಿ ಹೊಸ ವರ್ಷಾಚರಣೆ ಮಾಡಿದ್ದಾರ. ಅಲ್ಲಿಂದ ನೇರವಾಗಿ ದಾಂಡೆಲಿಗೆ ಹೋಗಿದ್ದಾರೆ. ಇಂದು (ಜ.02) ನಸುಕಿನ ಜಾವ ದಾಂಡೆಲಿಯಿಂದ ವಾಪಸ್ ಊರಿಗೆ ಬರುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಜಗಳೂರು ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ನಡುರಸ್ತೆಯಲ್ಲೇ ತುಂಡಾದ ಕೆಎಸ್​ಆರ್​ಟಿಸಿ ಬಸ್​ ಚೆಸ್ಸಿ

ಕಾರವಾರ: ನಡುರಸ್ತೆಯಲ್ಲೇ ಕೆಎಸ್​ಆರ್​ಟಿಸಿ ಬಸ್​ ಚೆಸ್ಸಿ ತುಂಡಾಗಿ ಬಿದ್ದರುವ ಘಟನೆ ಕಾರವಾರ ನಗರದ ಹಬ್ಬುವಾಡ ರಸ್ತೆಯಲ್ಲಿ ನಡೆದಿದೆ. ಕೆಎಸ್​ಆರ್​ಟಿಸಿ ಬಸ್​ ಕಾರವಾರ ನಗರದಿಂದ ಕೆರವಡಿ ಗ್ರಾಮಕ್ಕೆ ತೆರಳುತ್ತಿತ್ತು. ಬಸ್ಸಿನಲ್ಲಿ ಸುಮಾರು ಐವತ್ತಕ್ಕೂ ಅಧಿಕ ಪ್ರಯಾಣಿಕರಿದ್ದರು.

ಚಲಿಸುವ ವೇಳೆಯೇ ಬಸ್ಸಿನ ಹಿಂಬಂದಿ ಚಸ್ಸಿ ಒಮ್ಮೆಲೆ ಕಟ್ ಆಗಿದೆ. ಇದರಿಂದ ಬಸ್​ ಬಲಕ್ಕೆ ವಾಲಿದೆ. ಬಸ್ಸಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಕಂಡಿಷನ್ ಇಲ್ಲದ ಬಸ್​​ ಅನ್ನು ಒಡಾಡಲು ಬಿಟ್ಟ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:12 am, Tue, 2 January 24

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು