AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಟ್ಟ ಗಾಯವಾಗಿದ್ದ ಮಗುವಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ಆರೋಪ; ಲೋಕಾಯುಕ್ತ DySP ತೆರಳಿದ ಬಳಿಕ ಚಿಕಿತ್ಸೆ

ಬಿಸಿ ಹಾಲು ಚೆಲ್ಲಿದ ಹಿನ್ನೆಲೆ ಮಗುವಿಗೆ ಸುಟ್ಟ ಗಾಯವಾಗಿತ್ತು. ಈ ಹಿನ್ನಲೆ ತಡಮಾಡದೇ ಕೆಂಪರಾಜು ಅಂಬಿಕಾ ದಂಪತಿ, ಮಗುವನ್ನು ಕೆ ಆರ್ ನಗರ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ, ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಲು ಹಿಂದೇಟು ಹಾಕಿದ ಘಟನೆ ನಡೆದಿದೆ.

ಸುಟ್ಟ ಗಾಯವಾಗಿದ್ದ ಮಗುವಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ಆರೋಪ; ಲೋಕಾಯುಕ್ತ DySP ತೆರಳಿದ ಬಳಿಕ ಚಿಕಿತ್ಸೆ
ಮೈಸೂರಿನ ಆಸ್ಪತ್ರೆಯ ನಿರ್ಲಕ್ಷ್ಯ
ರಾಮ್​, ಮೈಸೂರು
| Edited By: |

Updated on:Nov 04, 2023 | 6:56 PM

Share

ಮೈಸೂರು, ನ.04: ಮೈಸೂ(Mysore)ರಿನ ಬಡವರ ಪಾಲಿನ ಕಾಮಧೇನುವಾಗಿರುವ ಕೆ.ಆರ್ ಆಸ್ಪತ್ರೆ ಹಾಗೂ ಚೆಲುವಾಂಬ ಮಕ್ಕಳ ಆಸ್ಪತ್ರೆ(Hospital)ಯಲ್ಲಿಯೂ ವೈದ್ಯರ ನಿರ್ಲಕ್ಷ್ಯಕ್ಕೆ  12 ವರ್ಷದ ವಿಶೇಷ ಚೇತನ ಮಗು ಕೊನೆಯುಸಿರೆಳೆದಿತ್ತು. ಈ ಘಟನೆ ಮಾಸುವೇ ಮುನ್ನವೇ ಇದೀಗ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಹೌದು, ಬಿಸಿ ಹಾಲು ಚೆಲ್ಲಿದ ಹಿನ್ನೆಲೆ 2 ವರ್ಷದ ಹೇಮಂತ್‌ಗೆ ಎಂಬ ಬಾಲಕನಿಗೆ ಗಾಯವಾಗಿತ್ತು. ಈ ಹಿನ್ನಲೆ ಕೂಡಲೇ ಮಗುವನ್ನು ಕೆ.ಆರ್.ನಗರ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ಎಂದು ಕರೆದುಕೊಂಡು ಬರಲಾಗಿತ್ತು. ಆದರೆ, ವೈದ್ಯರು ಚಿಕಿತ್ಸೆ ನೀಡದೇ ಅಮಾನವಿಯತೆ ತೋರಿದ್ದರು.

ಲೋಕಾಯುಕ್ತ DySP ಮಾಲತೇಶ್ ತೆರಳಿದ ಬಳಿಕ ಚಿಕಿತ್ಸೆ ನೀಡಿದ ಸಿಬ್ಬಂದಿ

ಬಿಸಿ ಹಾಲು ಚೆಲ್ಲಿದ ಹಿನ್ನೆಲೆ ಮಗುವಿಗೆ ಸುಟ್ಟ ಗಾಯವಾಗಿತ್ತು. ಈ ಹಿನ್ನಲೆ ತಡಮಾಡದೇ ಕೆಂಪರಾಜು ಅಂಬಿಕಾ ದಂಪತಿ, ಮಗುವನ್ನು ಕೆ ಆರ್ ನಗರ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ, ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು. ಈ ವೇಳೆ ಲೋಕಾಯುಕ್ತ ಡಿವೈಎಸ್​ಪಿ ಆಸ್ಪತ್ರೆಗೆ ತೆರಳಿದ ನಂತರ, ವೈದ್ಯರು ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಮಗುವಿಗೆ ಚಿಕಿತ್ಸೆ ನೀಡಿದ್ದಾರೆ.

ಇದನ್ನೂ ಓದಿ:ಸಿಬ್ಬಂದಿಗಳ ಕೊರತೆ: ಗದಗ ಜಿಮ್ಸ್ ಆಡಳಿತದ ನಿರ್ಲಕ್ಷ್ಯಕ್ಕೆ ರೋಗಿಗಳು ವಿಲವಿಲ

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದ ವಿಶೇಷಚೇತನ ಮಗು

ಹೌದು, ಕರ್ತವ್ಯನಿರತ ಮಹಿಳಾ ನ್ಯಾಯಾಧೀಶರೊಬ್ಬರು ರಾತ್ರಿ 9 ಗಂಟೆಯಿಂದ ಮಧ್ಯರಾತ್ರಿ 2 ಗಂಟೆಯವರೆಗೂ ಅಂದರೆ ಬರೋಬ್ಬರಿ 5 ಗಂಟೆಗಳ ಕಾಲ ಖುದ್ದು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದರೂ ಅನಾರೋಗ್ಯದಿಂದ ಬಳಲುತ್ತಿದ್ದ ವಿಶೇಷ ಚೇತನ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಪರದಾಡಿದ್ದರು. ಕೊನೆಗೆ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಆ ವಿಶೇಷ ಚೇತನ ಮಗು ಕೊನೆಯುಸಿರಳೆದಿತ್ತು. ವೈದ್ಯರ ವರ್ತನೆ ಹಾಗೂ ಅವರು ನಡೆದುಕೊಂಡ ರೀತಿಯಿಂದ ಜಿಗುಪ್ಸೆಗೊಂಡ ನ್ಯಾಯಾಧೀಶರು, ಆ ವೈದ್ಯರ ವಿರುದ್ದ ಪೊಲೀಸರಿಗೆ ಹಾಗೂ ಲೋಕಾಯುಕ್ತರಿಗೆ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Sat, 4 November 23

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ