ನಾಪತ್ತೆಯಾದ ಬೆಕ್ಕು ಹುಡುಕಿಕೊಡುವಂತೆ ಜಾಹೀರಾತು; ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​

ನಾಪತ್ತೆಯಾದ ಬೆಕ್ಕು ಹುಡುಕಿಕೊಡುವಂತೆ ನೀಡಿರುವ ಜಾಹೀರಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಪತ್ತೆಯಾದ ಬೆಕ್ಕು ಹುಡುಕಿಕೊಡುವಂತೆ ಜಾಹೀರಾತು; ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​
ಜಾಹೀರಾತು
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 05, 2022 | 3:03 PM

ಮೈಸೂರು: ನಾಪತ್ತೆಯಾದ ಬೆಕ್ಕು ಹುಡುಕಿಕೊಡುವಂತೆ ನೀಡಿರುವ ಜಾಹೀರಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮೈಸೂರಿನ ನಾಚಪ್ಪ ಎಂಬುವರು ಸಾಕಿದ್ದ, ಸೃಷ್ಟಿ ಹೆಸರಿನ ಬೆಕ್ಕು ನಿನ್ನೆ (ಆಗಸ್ಟ 4) ರಾತ್ರಿಯಿಂದ ನಾಪತ್ತೆಯಾಗಿದೆ. ಮೈಸೂರಿನ ದೇವರಾಜ ಅರಸು ರಸ್ತೆಯ ಬಾಟ ಶೋರೂಂನಿಂದ ಬೆಕ್ಕು ನಾಪತ್ತೆಯಾಗಿದೆ. ಬೆಕ್ಕನ್ನು ಹುಡುಕಿ ಕೊಟ್ಟವರಿಗೆ 5 ಸಾವಿರ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಜಾಹಿರಾತಿನಲ್ಲಿ ಮೊಬೈಲ್ ನಂಬರ್ ನೀಡಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

ಜಮೀನಿಗೆ ಹೋಗಿ ಭಯಗೊಂಡ ರೈತ

ರೈತರೊಬ್ಬರು ಮುಂಜಾನೆ ಎದ್ದು ಹೊಲಕ್ಕೆ ಹೋದಾಗ ಎದುರಾದ ದೈತ್ಯ ಕಪ್ಪಾದ ವಸ್ತುವನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ಅದಾಗ್ಯೂ ಅದೇನೆಂದು ನೋಡಲು ಗಾಬರಿಯಿಂದಲೇ ಹತ್ತಿರಕ್ಕೆ ಹೋದಾಗ ತುಣುಕು ವಸ್ತು ಎಂದು ಕಂಡುಕೊಂಡರು. ಆದರೆ ಏನು ಅದು ಎಂದು ಅರ್ಥವಾಗದೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ. ಅದರಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಅಧಿಕಾರಿಗಳು, ಅದು  ‘ಸ್ಪೇಸ್‌ಎಕ್ಸ್‘ ಕ್ಯಾಪ್ಸೂಲ್‌ನ ತುಣುಕು ಎಂದು ದೃಢಪಡಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಬಳಿಯ ಗ್ರಾಮೀಣ ಭಾಗದ ರೈತ ಮಿಕ್ ಮೈನರ್ಸ್ ಅವರ ಜಮೀನಿನಲ್ಲಿ ಈ ಸ್ಪೇಸ್‌ಎಕ್ಸ್ ಕ್ಯಾಪ್ಸೂಲ್‌ನ ತುಣುಕು ಪತ್ತೆಯಾಗಿದೆ. ಅಧಿಕಾರಿಗಳ ಪ್ರಕಾರ, ಈ ತುಣುಕು ಜು.9ರಂದು ಬಿದ್ದಿದ್ದು, ರೈತ ಇದನ್ನು ಕೆಲವು ದಿನಗಳ ನಂತರ ಗುರುತಿಸಿದ್ದಾರೆ. ಈ ತುಣುಕು ಸುಮಾರು 3 ಮೀಟರ್ ಉದ್ದ ಮತ್ತು 20 ರಿಂದ 30 ಕೆಜಿ ತೂಕವಿರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆಸ್ಟ್ರೇಲಿಯಾದ ಮೌಂಟ್ ಸ್ಟ್ರೋಮ್ಲೋ ಅಬ್ಸರ್ವೇಟರಿಯ ಖಗೋಳ ಭೌತಶಾಸ್ತ್ರಜ್ಞ ಡಾ.ಬ್ರಾಡ್ ಟಕರ್ ಅವಶೇಷಗಳನ್ನು ಪರೀಕ್ಷಿಸಿ ಇದೊಂದು ಅದ್ಭುತ ಆವಿಷ್ಕಾರ ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಇಂತಹ ಅವಶೇಷಗಳು ಸಮುದ್ರದಲ್ಲಿ ಬೀಳುತ್ತವೆ, ಆದರೆ ಭೂಮಿಗೆ ಬೀಳುವುದು ತುಂಬಾ ವಿರಳವಾಗಿದೆ. ರೈತರ ಹೊಲದ ಬಳಿ ಶೋಧ ಕಾರ್ಯಾಚರಣೆ ನಡೆಸಿದಾಗ ಇನ್ನೂ 2 ಅವಶೇಷಗಳು ಪತ್ತೆಯಾಗಿವೆ. ಆಸ್ಟ್ರೇಲಿಯನ್ ಬಾಹ್ಯಾಕಾಶ ಸಂಸ್ಥೆ ಸಾರ್ವಜನಿಕರಿಗೆ ಅಂತಹ ಯಾವುದೇ ದೃಶ್ಯಗಳು ಕಂಡುಬಂದಲ್ಲಿ ತಕ್ಷಣವೇ ತಿಳಿಸುವಂತೆ ಮನವಿ ಮಾಡಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Fri, 5 August 22

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ