ನಂಜನಗೂಡು ತಾಲೂಕಿನ ಗ್ರಾಮಗಳಲ್ಲಿ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ನಂಜನಗೂಡು ತಾಲೂಕಿನ ಸಿಂಧುವಳ್ಳಿ, ಕಳಲೆ ಗ್ರಾಮದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿದೆ. ಚಿರತೆ ಸಿಂಧುವಳ್ಳಿ ಗ್ರಾಮದಲ್ಲಿ ಮೇಕೆಯನ್ನು ತಿಂದಿದೆ. ಚಿರತೆ ಹಾವಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ನಂಜನಗೂಡು ತಾಲೂಕಿನ ಗ್ರಾಮಗಳಲ್ಲಿ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
ಚಿರತೆ ದಾಳಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 25, 2023 | 11:02 AM

ಮೈಸೂರು, ಡಿಸೆಂಬರ್​ 25: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕಾಡು ಪ್ರಾಣಿಗಳ ಆರ್ಭಟ ಹೆಚ್ಚಾಗಿದೆ. ಆಹಾರ ಅರಸಿಕೊಂಡು ನಾಡಿನತ್ತ ಬರುತ್ತಿರುವ ಆನೆ (Elephants), ಚಿರತೆ (Leopard), ಹುಲಿಗಳು (Tiger) ಜನರನ್ನು ಭಯ ಭೀತರನ್ನಾಗಿಸುತ್ತಿವೆ. ಹುಲಿ (Tiger Attack), ಚಿರತೆ ಕಾಟಕ್ಕೆ ಜನ ರೋಸಿ ಹೋಗಿದ್ದಾರೆ. ಹೌದು ನಂಜನಗೂಡು ತಾಲೂಕಿನ ಸಿಂಧುವಳ್ಳಿ, ಕಳಲೆ ಗ್ರಾಮದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿದೆ.

ಚಿರತೆ ಸಿಂಧುವಳ್ಳಿ ಗ್ರಾಮದಲ್ಲಿ ಮೇಕೆಯನ್ನು ತಿಂದಿದೆ. ಚಿರತೆ ಹಾವಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹೀಗಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಪತ್ತೆಯಾದ ಮೂರು ಚಿರತೆ ಮರಿಗಳನ್ನು ತಾಯಿ ಜೊತೆ ಸೇರಿಸಿದ ಅರಣ್ಯ ಸಿಬ್ಬಂದಿ

ನೆಲಮಂಗಲ ತಾಲೂಕಿನ ಗೊಟ್ಟಿಗೆರೆಯಲ್ಲಿ ನಾಯಿ ಹೊತ್ತೊಯ್ದ ಚಿರತೆ; ಭರತ್​ ಎಂಬುವರ ತೋಟದಲ್ಲಿ ನಾಯಿಯನ್ನು ಹೊತ್ತೊಯ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ; ದಾಬಸ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಸಾಕಿದ ನಾಯಿಯನ್ನು ಹೊತ್ತೋಯ್ಯದ ಚಿರತೆ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಘೊಟ್ಟಿಕೆರೆ ಭರತ್ ತೋಟದಲ್ಲಿ ಸಾಕಿದ ನಾಯಿಯನ್ನು ಚಿರತೆ ಹೊತ್ತೋಯ್ಯದಿದೆ. ನಾಯಿಯನ್ನು ಹೊತ್ತೋಯ್ಯದ ವಿಡಿಯೋ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ದಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯಲ್ಲಿ ಕರಡಿ ಹಾವಳಿ

ಕೊಪ್ಪಳ: ಜಿಲ್ಲೆಯಲ್ಲಿ ಕರಡಿ ಹಾವಳಿ ಹೆಚ್ಚಾಗಿದೆ. ಕೊಪ್ಪಳ ತಾಲೂಕಿನ ಗಂಗನಾಳ ಗ್ರಾಮದ ಜಮೀನಿಗೆ ನುಗ್ಗಿದ್ದ ಕರಡಿಯನ್ನು ಗ್ರಾಮಸ್ಥರು ಓಡಿಸಿದ್ದಾರೆ. ಜನರ ಸದ್ದು ಕೇಳ್ತಿದ್ದಂತೆ ಕರಡಿ ದಿಕ್ಕೆಟ್ಟು ಓಡಿದೆ. ಕರಡಿ ಹಾವಳಿಯಿಂದ ಗ್ರಾಮಸ್ಥರು ರೋಸಿ ಹೋಗಿದ್ದಾರೆ. ಕರಡಿಗಳು ಜಮೀನಿಗೆ ನುಗ್ಗಿ ಬೆಳೆ ಹಾಳು ಮಾಡುತ್ತಿವೆ.ಹೀಗಾಗಿ ಕರಡಿಗಳನ್ನು ಸೆರೆ ಹಿಡಿಯುವಂತೆ ರೈತರು ಹತ್ತಾರು ಬಾರಿ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೂ ಕೂಡ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮಕ್ಕೆ ನುಗ್ಗಿದ್ದ ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ

ನವೆಂಬರ್​ 22 ರಂದು ಮೈಸೂರಿನ ಸಾಲಿಗ್ರಾಮ ತಾಲೂಕಿನ ಮೂಡಲಬೀಡು ಗ್ರಾಮಕ್ಕೆ ನುಗ್ಗಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದರು. ಕಳೆದ ಒಂದು ತಿಂಗಳಿನಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಾ ಈ ಚಿರತೆ ಉಪಟಳ ಕೊಡ್ತಿತ್ತು. ಸಾಕುನಾಯಿ, ದನ, ಕರುಗಳನ್ನು ಕೊಂದು ಹಾಕಿದ್ದ ಚಿರತೆ ಸೆರೆಗೆ ರೈತ ಮಹೇಶ್ ಎಂಬುವವರ ಜಮೀನಿನಲ್ಲಿ ಬೋನು ಇಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:38 am, Mon, 25 December 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ