ದೇಶದಾದ್ಯಂತ ಸರ್ಕಾರಿ ನೌಕರರ ಪ್ರತಿಭಟನೆ; ಮುಷ್ಕರಕ್ಕೆ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದಿಂದ ಬೆಂಬಲ

ಗ್ರಾಮೀಣ ಅಂಚೆ ನೌಕರರನ್ನು ಖಾಯಂಗೊಳಿಸಬೇಕು. ಅಂಚೆ ನೌಕರರಿಗೆ ಪಿಂಚಣಿ ಸೌಲಭ್ಯ, ಗುಂಪು ವಿಮೆ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಿಸಬೇಕು. ಕಾರ್ಮಿಕರಿಗೆ ವೈದ್ಯಕೀಯ ಸವಲತ್ತುಗಳನ್ನು ಕಲ್ಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ದೇಶದಾದ್ಯಂತ ಸರ್ಕಾರಿ ನೌಕರರ ಪ್ರತಿಭಟನೆ; ಮುಷ್ಕರಕ್ಕೆ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದಿಂದ ಬೆಂಬಲ
ಸರ್ಕಾರಿ ನೌಕರರ ಪ್ರತಿಭಟನೆ
Follow us
TV9 Web
| Updated By: preethi shettigar

Updated on:Mar 28, 2022 | 1:32 PM

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಇಂದು ಮತ್ತು ನಾಳೆ (ಮಾರ್ಚ್​ 29) ದೇಶದಾದ್ಯಂತ ಸರ್ಕಾರಿ ನೌಕರರ (Government employees) ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಗೆ (Protest) ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘ ಕೂಡ ಬೆಂಬಲ ನೀಡಿದೆ. ಮೈಸೂರಿನ ಅಂಚೆ ಪ್ರಧಾನ ಕಚೇರಿ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ. ಗ್ರಾಮೀಣ ಅಂಚೆ ನೌಕರರನ್ನು ಖಾಯಂಗೊಳಿಸಬೇಕು. ಅಂಚೆ ನೌಕರರಿಗೆ ಪಿಂಚಣಿ ಸೌಲಭ್ಯ, ಗುಂಪು ವಿಮೆ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಿಸಬೇಕು. ಕಾರ್ಮಿಕರಿಗೆ ವೈದ್ಯಕೀಯ ಸವಲತ್ತುಗಳನ್ನು ಕಲ್ಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ (central government) ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ನಜರಾಬಾದ್ ಕೆನರಾ ಬ್ಯಾಂಕ್ ರೀಜಿನಲ್ ಕಚೇರಿ ಆವರಣದಲ್ಲಿ ಪ್ರತಿಭಟನೆ

ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಬ್ಯಾಂಕ್ ನೌಕರರು ಈ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ನಜರಾಬಾದ್ ಕೆನರಾ ಬ್ಯಾಂಕ್ ರೀಜಿನಲ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಬ್ಯಾಂಕುಗಳ ಖಾಸಗೀಕರಣ ಬೇಡ ಎಂದು ಆಗ್ರಹಿಸಿದ್ದಾರೆ. ಬ್ಯಾಂಕ್ ನೌಕರರಿಗೆ ಮಾರಕವಾದ ಎನ್.ಪಿ.ಎಸ್ ತೆಗೆದು ಹಾಕುವಂತೆ ಒತ್ತಾಯ ಮಾಡಿದ್ದಾರೆ. ಜತೆಗೆ ಹೊರ ಗುತ್ತಿಗೆ ನಿಲ್ಲಿಸಿ ನೇರ ನೇಮಕಾತಿ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಬೆಂಗಳೂರು: ಇಂದಿನಿಂದ ಬ್ಯಾಂಕ್ ಮುಷ್ಕರ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ದೇಶಾದ್ಯಂತ ಇಂದು ಮತ್ತು ನಾಳೆ (ಮಾರ್ಚ್ 28-29) ವಿವಿಧ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರದಲ್ಲಿ ಬ್ಯಾಂಕ್​ ಸಿಬ್ಬಂದಿಯೂ ಪಾಲ್ಗೊಳ್ಳಲಿದ್ದು ದೇಶದ ಅತಿದೊಡ್ಡ ಬ್ಯಾಂಕರ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) ಸೇರಿದಂತೆ ಹಲವು ಬ್ಯಾಂಕ್​ಗಳಲ್ಲಿ ವಹಿವಾಟಿಗೆ ಸಮಸ್ಯೆಯಾಗುವ ಸಾಧ್ಯತೆಯಿದೆ. ಬ್ಯಾಂಕ್‌ಗಳ ಖಾಸಗೀಕರಣ ನಿಲ್ಲಿಸಬೇಕು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಬ್ಯಾಂಕ್​ಗಳ ನೌಕರರು ಒತ್ತಾಯಿಸುತ್ತಿದ್ದಾರೆ. ಇತರ ಸಂಘಟನೆಗಳೂ ಮುಷ್ಕರ ಕರೆಗೆ ಓಗೊಟ್ಟಿದ್ದು, ಸರ್ಕಾರ ಖಾಸಗೀಕರಣವನ್ನು ನಿಲ್ಲಿಸಬೇಕು, ಉದ್ಯೋಗ ಖಾತ್ರಿ ವೇತನ ಹೆಚ್ಚಿಸಬೇಕು ಮತ್ತು ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿವೆ.

ಕಾರ್ಮಿಕರು, ರೈತರು ಮತ್ತು ಜನರ ಮೇಲೆ ಪರಿಣಾಮ ಬೀರುವ ಸರ್ಕಾರದ ನೀತಿಗಳನ್ನು ಪ್ರತಿಭಟಿಸಲು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಎಸ್ಮಾ ಬೆದರಿಕೆಯ ನಡುವೆಯೂ ರಸ್ತೆ ಸಾರಿಗೆ ನೌಕರರು ಮತ್ತು ವಿದ್ಯುತ್ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಬ್ಯಾಂಕಿಂಗ್ ಮತ್ತು ವಿಮೆ ಸೇರಿದಂತೆ ಹಣಕಾಸು ವಲಯಗಳು ಮುಷ್ಕರಕ್ಕೆ ಸೇರುತ್ತಿವೆ ಎಂದು ಅದು ಹೇಳಿದೆ.

ಕಲ್ಲಿದ್ದಲು, ಉಕ್ಕು, ತೈಲ, ಟೆಲಿಕಾಂ, ಅಂಚೆ, ಆದಾಯ ತೆರಿಗೆ, ತಾಮ್ರ, ಬ್ಯಾಂಕ್‌ಗಳು, ವಿಮೆ ಮುಂತಾದ ವಲಯಗಳ ಒಕ್ಕೂಟಗಳು ಮುಷ್ಕರ ನಡೆಸಲು ತಮ್ಮ ಕಾರ್ಮಿಕರಿಗೆ ಸೂಚನೆ ನೀಡಿವೆ. ರೈಲ್ವೆ ಮತ್ತು ರಕ್ಷಣಾ ವಲಯದ ಒಕ್ಕೂಟಗಳು ನೂರಾರು ಸ್ಥಳಗಳಲ್ಲಿ ಮುಷ್ಕರವನ್ನು ಬೆಂಬಲಿಸಲು ಮುಂದಾಗಿವೆ. ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಕ್ರಮ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಮುಷ್ಕರಕ್ಕೆ ಕರೆ ನೀಡಿವೆ.

ಆರ್​ಬಿಎಲ್ ಸೇರಿದಂತೆ ಕೆಲ ಖಾಸಗಿ ಬ್ಯಾಂಕ್​ಗಳ ನೌಕರ ಸಂಘಟನೆಗಳೂ ಈ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಶಾಖೆಗಳ ಕಾರ್ಯನಿರ್ವಹಣೆಗೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಆದರೂ ವಹಿವಾಟು ಸುಸೂತ್ರವಾಗಿ ನಡೆಯುವುದು ಕಷ್ಟವಾಗಬಹುದು ಎಂದು ಎಸ್​ಬಿಐ, ಕೆನರಾ ಬ್ಯಾಂಕ್, ಪಿಎನ್​ಬಿ ಸೇರಿದಂತೆ ಹಲವು ಬ್ಯಾಂಕ್​ಗಳು ತಿಳಿಸಿವೆ.

ಇದನ್ನೂ ಓದಿ: ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಶ್ರೀಗಂಧ ಬೆಳೆಗಾರರಿಂದ ಅರೆಬೆತ್ತಲೆ ಪ್ರತಿಭಟನೆ; 27ನೇ ದಿನಕ್ಕೆ ಕಾಲಿಟ್ಟ ಹೋರಾಟ

ಬ್ಯಾಂಕ್​​ಗೆ 20 ಕೋಟಿ ರೂ.ವಂಚನೆ ಕೇಸ್​​; 10 ವರ್ಷಗಳ ನಂತರ ಗುಜರಾತ್​ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ

Published On - 1:24 pm, Mon, 28 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್