ಹೆಚ್​ಡಿ ಕೋಟೆ: ಭೂ ಕಬಳಿಕೆ ಆರೋಪ, ನಾಲ್ವರು ಅಧಿಕಾರಿಗಳು ಅಮಾನತು

ಮೈಸೂರು ಜಿಲ್ಲೆಯ ಹೆಚ್​.ಡಿ.ಕೋಟೆ ತಾಲೂಕಿನಲ್ಲಿ ನಕಲಿ ದಾಖಲಾತಿ ಸೃಷ್ಟಿಸಿ ಭೂಮಿ ಕಬಳಿಕೆ ಮಾಡಿಕೊಳ್ಳಲು ಮುಂದಾಗಿದ್ದ ಅಧಿಕಾರಿಗಳನ್ನು ಅಮಾನತು ಮಾಡಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಹೆಚ್​ಡಿ ಕೋಟೆ: ಭೂ ಕಬಳಿಕೆ ಆರೋಪ, ನಾಲ್ವರು ಅಧಿಕಾರಿಗಳು ಅಮಾನತು
ಪ್ರಾತಿನಿಧಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on: Oct 27, 2023 | 2:26 PM

ಮೈಸೂರು ಅ.27: ಹೆಚ್​.ಡಿ.ಕೋಟೆ (HD Kote) ತಾಲೂಕಿನಲ್ಲಿ ನಕಲಿ ದಾಖಲಾತಿ ಸೃಷ್ಟಿಸಿ ಭೂಮಿ ಕಬಳಿಕೆ ಮಾಡಿಕೊಳ್ಳಲು ಮುಂದಾಗಿದ್ದ ಅಧಿಕಾರಿಗಳನ್ನು ಅಮಾನತು ಮಾಡಿ ಮೈಸೂರು (Mysore) ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ (KV Rajendra) ಆದೇಶ ಹೊರಡಿಸಿದ್ದಾರೆ. ಕಂದಾಯ ನಿರೀಕ್ಷಕ ಮಹೇಶ್, ಗ್ರಾಮ ಲೆಕ್ಕಿಗ ಅನಿಲ್ ಕುಮಾರ್, ಎಫ್​ಡಿಎ ವಿಷ್ಣು, ಮುಜರಾಯಿ ಇಲಾಖೆಯ ಹರೀಶ್ ಅಮಾನತು ಆದ ಅಧಿಕಾರಿಗಳು. ಅಣ್ಣೂರಿನ ವ್ಯಾಪ್ತಿಯಲ್ಲಿ ಪಡುಕೋಟೆ ಕಾವಲ್ ಸರ್ವೆ ನಂ.53ರಲ್ಲಿ ಜಮೀನು ಕಬಳಿಸಲು ಸಂಚು ರೂಪಿಸಿದ್ದರು. ಸಾಗುವಳಿ ಪತ್ರ ಪಡೆಯಲು ನಕಲಿ ದಾಖಲಾತಿ ಸೃಷ್ಟಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಾಲ್ವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಆನೆ ದಂತ ಸಾಗಿಸುತ್ತಿದ್ದ ಮೂವರ ಬಂಧನ

ಚಾಮರಾಜನಗರ: ಕೊಳ್ಳೇಗಾಲ ಬಳಿ ಆನೆ ದಂತ ಸಾಗಿಸುತ್ತಿದ್ದ ತಮಿಳುನಾಡು ಮೂಲದ ಮೂವರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೂರ್ತಿ, ಶಿವಕುಮಾರ್, ಅಂಥೋಣಿ ಬಂಧಿತ ಆರೋಪಿಗಳು. ಆರೋಪಿಗಳಿಂದ ಎರಡು ಆನೆ ದಂತ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಐಡಿ ಫಾರೆಸ್ಟ್ ಸೆಲ್ ಅಧಿಕಾರಿಗಳು ಪಿಜಿ ಪಾಳ್ಯ ಮಾರ್ಗದಲ್ಲಿ ಕಾರು ಪರಿಶೀಲನೆ ಮಾಡಿದ ವೇಳೆ ಆನೆ ದಂತ ಪತ್ತೆಯಾಗಿದೆ. ಕೊಳ್ಳೆಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳ ವಿರುದ್ದ ವನ್ಯಜೀವಿ ತಿದ್ದುಪಡಿ ಕಾಯ್ದೆ 2022 ಹಾಗೂ 1972, ಸೆಕ್ಷನ್ 39, 48(A) 49 (B) ಅಡಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ