ಅಮಿತ್ ಶಾ ಸ್ವಾಗತಕ್ಕೆ ರೆಡಿಸನ್ ಬ್ಲೂ ಹೋಟೆಲ್​ನಲ್ಲಿ ವಿಶೇಷ ಸಿದ್ದತೆ: ಮೆನು ಕಾರ್ಡ್​​ ಮೇಲೆ ಭಾವಚಿತ್ರ

ವಿಧಾನಸಭೆ ಸೋಲಿನ ಬಳಿಕ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿಲಿದ್ದು, ರಾತ್ರಿ 10.50ಕ್ಕೆ ಮೈಸೂರು ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬಳಿಕ ಅಮಿತ್ ಶಾ ಸ್ವಾಗತಕ್ಕೆ ರೆಡಿಸನ್ ಬ್ಲೂ ಹೋಟೆಲ್‌ನಲ್ಲಿ ವಿಶೇಷ ಸಿದ್ದತೆ ಮಾಡಿಕೊಳ್ಳಲಾಗಿದೆ. ಊಟ, ತಿಂಡಿ ಮೆನು ಕಾರ್ಡ್​ಗಳ ಮೇಲೆ ಅಮಿತ್ ಶಾ ಭಾವಚಿತ್ರವನ್ನು ಪ್ರಿಂಟ್​ ಮಾಡಲಾಗಿದೆ. ಇಂದು ವಾಸ್ತವ್ಯ ಹೂಡಲಿದ್ದಾರೆ.

ಅಮಿತ್ ಶಾ ಸ್ವಾಗತಕ್ಕೆ ರೆಡಿಸನ್ ಬ್ಲೂ ಹೋಟೆಲ್​ನಲ್ಲಿ ವಿಶೇಷ ಸಿದ್ದತೆ: ಮೆನು ಕಾರ್ಡ್​​ ಮೇಲೆ ಭಾವಚಿತ್ರ
ಮೆನು ಕಾರ್ಡ್ ಮೇಲೆ ಅಮಿತ್ ಶಾ ಭಾವಚಿತ್ರ
Follow us
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Feb 10, 2024 | 6:57 PM

ಮೈಸೂರು, ಫೆಬ್ರವರಿ 10: ಲೋಕಸಭೆ ಚುನಾವಣೆ ಗೆಲ್ಲಲು ಮೂರು ಪಕ್ಷಗಳು ಈಗಾಗಲೇ ರಂಗ ತಾಲಿಮೂ ಆರಂಭಿಸಿದ್ದಾರೆ. ಅದರಲ್ಲೂ ವಿಧಾನಸಭೆ ಸೋಲಿನ ಬಳಿಕ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯಕ್ಕೆ ಭೇಟಿ ನೀಡಿಲಿದ್ದು, ಎರಡು ದಿನ ರಾಜ್ಯ ಪ್ರವಾಸ ಮಾಡಲಿದ್ದಾರೆ. ಇಂದು ರಾತ್ರಿ 10.50ಕ್ಕೆ ಮೈಸೂರು ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಅಮಿತ್ ಶಾ, ನೇರವಾಗಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ರೆಡಿಸನ್ ಬ್ಲೂ ಹೋಟೆಲ್​ಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ. ಈಗಾಗಲೇ ಹೋಟೆಲ್‌ನಲ್ಲಿ ವಿಶೇಷ ಸಿದ್ದತೆ ಮಾಡಲಾಗಿದೆ. ಅಮಿತ್ ಶಾ ಭಾವಚಿತ್ರದ ಊಟ, ತಿಂಡಿ ಮೆನು ಕಾರ್ಡ್ ಸಿದ್ಧಪಡಿಸಲಾಗಿದ್ದು, ಗುಡ್ ನೈಟ್, ಗುಡ್ ಮಾರ್ನಿಂಗ್ ಶುಭಾಶಯ ಹೊಂದಿರಲಿದೆ. ಅಮಿತ್ ಶಾ ಅವರ ಭಾವಚಿತ್ರವಿರುವ ಕರವಸ್ತ್ರ ಮತ್ತು ಟವೆಲ್‌ಗಳನ್ನು ಸಿದ್ದಪಡಿಸಲಾಗಿದೆ.

ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಪೊಲೀಸ್ ಬಂದೋಬಸ್ತ್​​

ಅಮಿತ್ ಶಾ ಅವರು ಸಂಚರಿಸುವ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​​ ಒದಗಿಸಲಾಗಿದೆ. ಅಮಿತ್ ಶಾ ಉಳಿದುಕೊಳ್ಳಲಿರುವ ಹೋಟೆಲ್ ಕೊಠಡಿಗಳು ಸೇರಿದಂತೆ ಸಂಪೂರ್ಣವಾಗಿ ಪೊಲೀಸರು ತಪಾಸಣೆ ಮಾಡಿದ್ದಾರೆ. ಖಾಸಗಿ ಹೋಟೆಲ್ ಸುತ್ತಮುತ್ತ ಪೊಲೀಸ್ ಕಣ್ಗಾವಲು ವಹಿಸಲಾಗಿದೆ.

ಇದನ್ನೂ ಓದಿ: ಇಂದು ಮೈಸೂರಿಗೆ ಅಮಿತ್ ಶಾ, ಮಂಡ್ಯ, ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ತೀರ್ಮಾನ?

ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಪೊಲೀಸ್ ಇಲಾಖೆಯಿಂದ ಕಾನ್ವೇ ರಿಹರ್ಸಲ್​ ಮಾಡಲಾಗಿದ್ದು, ಹೋಟೆಲ್ ಮುಂಭಾಗದ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಬಿಜೆಪಿ ಮತ್ತು ಜೆಡಿಎಸ್​ ಕಾರ್ಯಕರ್ತರಿಗೆ ಅಮಿತ್ ಶಾ ಹೊಸ ಸಂದೇಶ

ಅಮಿತ್ ಶಾ, ರಾಜ್ಯದಲ್ಲಿ ಚುನಾವಣಾ ತಂತ್ರಗಾರಿಕೆ ರೂಪಿಸಲಿದ್ದಾರೆ ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೆ ವಿಧಾನಸಭೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಬಳಿಕ ಮೊದಲ ಭಾರಿಗೆ ರಾಜ್ಯ ಪ್ರವಾಸ ಮಾಡುತ್ತಿರುವ ಅಮಿತ್ ಶಾ ಬಿಜೆಪಿ-ಜೆಡಿಎಸ್ ನಾಯಕರಿಗೆ ಚುನಾವಣೆ ಗೆಲ್ಲಲು ಹೊಸ ಟಾಸ್ಕ್ ನೀಡುವ ಸಾಧ್ಯತೆ ಇದೆ. ಈ ಮೂಲಕ ಬಿಜೆಪಿ ಮತ್ತು ಜೆಡಿಎಸ್​ ಕಾರ್ಯಕರ್ತರಿಗೆ ಶಾ ಹೊಸ ಸಂದೇಶ ರವಾನೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೇಂದ್ರ ಸಚಿವ ಅಮಿತ್ ಶಾ ಇಂದು ಮೈಸೂರಿಗೆ: ಇಲ್ಲಿದೆ ಪ್ರವಾಸದ ವೇಳಾಪಟ್ಟಿ

ಅಮಿತ್ ಶಾ ರಾಜ್ಯ ಪ್ರವಾಸದ ವೇಳೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿಂದೆ ಅಮಿತ್ ಶಾ ಜೊತೆ ಜೆಡಿಎಸ್ ನಾಯಕರ ಮೈತ್ರಿ ಮಾತುಕತೆ ವೇಳೆ ರಾಜ್ಯಕ್ಕೆ ಬಂದಾಗ ತಮ್ಮ ನಿವಾಸಕ್ಕೆ ಬರುವಂತೆ ಆಹ್ವಾನ ನೀಡಿದ್ದರಂತೆ. ಹೀಗಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಅಮಿತ್ ಶಾ, ಕುಮಾರಸ್ವಾಮಿ ನಿವಾಸದ ಭೇಟಿ ಹಿಂದೆ ಸಾಕಷ್ಟು ಲೆಕ್ಕಾಚಾರ ಕೂಡ ಅಡಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು