ಚರ್ಚೆಗೆ ಕಾರಣವಾದ ಸಿಎಂ ಪದಕ ಘೋಷಣೆ; ಅಮಾನತುಗೊಂಡ ಹೆಡ್​​ ಕಾನ್ಸ್​ಟೇಬಲ್​ಗೆ ಮುಖ್ಯಮಂತ್ರಿ ಪದಕ

ಕಳುವು ಹಾಗೂ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಬಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪ ಸಾಭೀತಾದ ಹಿನ್ನೆಲೆ ಕಳೆದ ತಿಂಗಳಷ್ಟೇ ಹೆಡ್​​ ಕಾನ್ಸ್​ಟೇಬಲ್ ಸಲೀಂ ಪಾಷಾ ಎಂಬುವವರನ್ನು ಅಮಾನತುಗೊಳಿಸಲಾಗಿತ್ತು. ಇದೀಗ 2024ರಲ್ಲಿ ಅಮಾನತುಗೊಳಿಸಿ, 2023ರ ಕರ್ತವ್ಯ ನಿರ್ವಹಣೆಗೆ ಪದಕ ನೀಡಲಾಗಿದ್ದು, ಸಿಎಂ ಪದಕ ಘೋಷಣೆ ಚರ್ಚೆಗೆ ಗ್ರಾಸವಾಗಿದೆ.

ಚರ್ಚೆಗೆ ಕಾರಣವಾದ ಸಿಎಂ ಪದಕ ಘೋಷಣೆ; ಅಮಾನತುಗೊಂಡ ಹೆಡ್​​ ಕಾನ್ಸ್​ಟೇಬಲ್​ಗೆ ಮುಖ್ಯಮಂತ್ರಿ ಪದಕ
ಅಮಾನತುಗೊಂಡ ಹೆಡ್​​ ಕಾನ್ಸ್​ಟೇಬಲ್​ಗೆ ಮುಖ್ಯಮಂತ್ರಿ ಪದಕ
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 15, 2024 | 3:53 PM

ಮೈಸೂರು, ಆ.15: ಇಂದು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದೆಲ್ಲೆಡೆ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಅದರಂತೆ ಉತ್ತಮ ಕರ್ತವ್ಯ ನಿರ್ವಹಣೆ ಮಾಡಿದ ರಾಜ್ಯದ 126 ಪೊಲೀಸ್​ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ 2023ನೇ ಸಾಲಿನ ಮುಖ್ಯಮಂತ್ರಿ ಪದಕ (chief minister medal) ನೀಡಲಾಗಿದೆ. ಆದರೆ, ಇದರಲ್ಲಿ ಅಮಾನತುಗೊಂಡಿರುವ ಮೈಸೂರು ಸಿಸಿಬಿ ಘಟಕದ ಹೆಡ್ ಕಾನ್ಸಟೇಬಲ್ ಸಲೀಂ ಪಾಷಾಗೆ ಸಿಎಂ ಪದಕ ನೀಡಿದ್ದು, ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜೊತೆ ಸಂಪರ್ಕ ಆರೋಪ

ಒಂದು ತಿಂಗಳ ಹಿಂದೆ ಅಮಾನತು ಆಗಿದ್ದ ಸಲೀಂ‌ ಪಾಷಾ, ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜೊತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳುವಿಗೆ ಪರೋಕ್ಷ ಸಹಾಯದ ಜೊತೆಗೆ ದಾಖಲೆಗಳ ಸೋರಿಕೆ ಮಾಡಿರುವ ಶಂಕೆಯ ಆರೋಪಗಳ ಹಿನ್ನೆಲೆ ಅಮಾನತುಗೊಳಿಸಲಾಗಿತ್ತು. ಹೀಗಿರುವಾಗ 2024ನೇ ಸಾಲಿನ ಸಿಎಂ ಪದಕ ಪಟ್ಟಿಯಲ್ಲಿ ಸಲೀಂ ಪಾಷಾ ಅವರ ಹೆಸರು ಬಂದಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ:ವಿವಿಧ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ

2024ರಲ್ಲಿ ಅಮಾನತು, 2023ರ ಕರ್ತವ್ಯ ನಿರ್ವಹಣೆಗೆ ಪದಕ

ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳುವು ಹಾಗೂ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಬಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪ ಕೇಳಿಬಂದಿತ್ತು. ಜೊತೆಗೆ ಮೊಬೈಲ್ ಕಾಲ್ ಡಿಟೈಲ್ಸ್​ ಸಂಗ್ರಹ ವೇಳೆ ಮೇಲ್ನೋಟಕ್ಕೆ ಆರೋಪ ಸಾಬೀತು ಕೂಡ ಆಗಿತ್ತು. ಆರೋಪ ಸಾಭೀತಾದ ಹಿನ್ನೆಲೆ ಕಳೆದ ತಿಂಗಳಷ್ಟೇ ಅಮಾನತುಗೊಳಿಸಲಾಗಿತ್ತು. ಇದೀಗ 2024ರಲ್ಲಿ ಅಮಾನತುಗೊಳಿಸಿ, 2023ರ ಕರ್ತವ್ಯ ನಿರ್ವಹಣೆಗೆ ಪದಕ ನೀಡಲಾಗಿದೆ. ಈ ಮೂಲಕ ಸಿಎಂ ಪದಕ ಘೋಷಣೆ ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ