AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಸ್ಯಾಂಟ್ರೊ ರವಿ ವಿರುದ್ದ ಮತ್ತೊಂದು ದೂರು ದಾಖಲು: ಚೆಕ್​​ಬುಕ್​ ಕಳುವು ಆರೋಪ

ಸ್ಯಾಂಟ್ರೊ ರವಿ ಪತ್ನಿ ಎನ್ನಲಾದ ಮಹಿಳೆ ಮೈಸೂರಿನ ದೇವರಾಜ ಠಾಣೆಯಲ್ಲಿ ತನ್ನ (ಮಹಿಳೆಯ) ಚೆಕ್​ ಬುಕ್​​ನ್ನು ಸ್ಯಾಂಟ್ರೋ ರವಿ​ ದುರುಪಯೋಗ ಮಾಡಿಕೊಂಡಿದ್ದಾನೆ ಎಂದು ದೂರು ದಾಖಲಿಸಿದ್ದಾರೆ.

ಮೈಸೂರಿನಲ್ಲಿ ಸ್ಯಾಂಟ್ರೊ ರವಿ ವಿರುದ್ದ ಮತ್ತೊಂದು ದೂರು ದಾಖಲು: ಚೆಕ್​​ಬುಕ್​ ಕಳುವು ಆರೋಪ
ಎಫ್​ಐಆರ್​​, ಸ್ಯಾಂಟ್ರೋ ರವಿ
TV9 Web
| Edited By: |

Updated on: Jan 17, 2023 | 1:34 PM

Share

ಮೈಸೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ (Santro Ravi) ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸ್ಯಾಂಟ್ರೊ ರವಿ ಪತ್ನಿ ಎನ್ನಲಾದ ಮಹಿಳೆ ಮೈಸೂರಿನ ದೇವರಾಜ ಠಾಣೆಯಲ್ಲಿ ತನ್ನ (ಮಹಿಳೆಯ) ಚೆಕ್​ ಬುಕ್​​ನ್ನು ಸ್ಯಾಂಟ್ರೋ ರವಿ​ ದುರುಪಯೋಗ ಮಾಡಿಕೊಂಡಿದ್ದಾನೆ ಎಂದು ದೂರು ದಾಖಲಿಸಿದ್ದಾರೆ.

ಆಗಸ್ಟ 24 2022 ರಂದು ಮಹಿಳೆ ಮೈಸೂರಿನ ದೇವರಾಜ ಮಾರ್ಕೆಟ್​ಗೆ ಹೋಗಿದ್ದರು. ಮಹಿಳೆ ಸ್ಕೂಟರ್ ಡಿಕ್ಕಿಯಲ್ಲಿ ಸಹಿ ಇರುವ ಎರಡು ಚೆಕ್ ಬುಕ್ ಇಟ್ಟಿದ್ದರು. ಸ್ಯಾಂಟ್ರೊ ರವಿ ಮತ್ತು ಪ್ರಕಾಶ್ ಸ್ಕೂಟರ್ ಡಿಕ್ಕಿ ಓಪನ್​ ಮಾಡಿ ಚೆಕ್​ಬುಕ್​​ಗಳನ್ನು ಕಳವು ಮಾಡಿದ್ದಾರೆ. ನಂತರ 2 ಚೆಕ್​​ಗಳನ್ನ ಬ್ಯಾಂಕ್​ಗೆ ನೀಡಿದ್ದಾರೆ. ಇನ್ನೂ ಅವರ ಬಳಿ 2 ಚೆಕ್​ಗಳು ಇವೆ. ಈ ಸಂಬಂಧ ಆ.24ರಂದು ದೇವರಾಜ ಠಾಣೆಗೆ ನಾನು (ಮಹಿಳೆ) ದೂರು ನೀಡಿದ್ದೇನೆ ಎಂದು ವಂಚನೆಗೊಳಾದ ಮಹಿಳೆ ಮಾಹಿತಿ ನೀಡಿದ್ದಾಳೆ. ಸದ್ಯ ಸ್ಯಾಂಟ್ರೊ ರವಿ ವಿರುದ್ಧ ಐಪಿಸಿ ಸೆಕ್ಷನ್ 465, 468, 506, 420 ಹಾಗೂ ಸೆಕ್ಷನ್ 34ರ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಾಲ ತೀರಿಸಲಾಗದೆ ಸುಳ್ಳು ದೂರು ದಾಖಲಿಸಿದ್ದಾರೆ, ಸ್ಯಾಂಟ್ರೋ ರವಿ ತಪ್ಪು ಮಾಡಿಲ್ಲ: ವಕೀಲ ಹರೀಶ್

ತನಿಖಾಧಿಕಾರಿ ಬದಲಾಗಿದ್ದರಿಂದ ನಮ್ಮ ಪಾತ್ರ ಇರುವುದಿಲ್ಲ

ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಸಿಐಡಿ ಅಧಿಕಾರಿಗಳಿಗೆ ದಾಖಲೆ ಪತ್ರಗಳನ್ನು ವರ್ಗಾಯಿಸಿದ್ದೇವೆ. ಸರ್ಕಾರದ ಆದೇಶದಂತೆ ಸಿಐಡಿ ಅಧಿಕಾರಿಗಳು ಮೈಸೂರಿಗೆ ಬಂದಿದ್ದಾರೆ. ಸಿಐಡಿ ಅಧಿಕಾರಿಗಳಿಗೆ ನಾವು ದಾಖಲೆ ಹಸ್ತಾಂತರಿಸಿದ್ದೇವೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ.

ತನಿಖಾಧಿಕಾರಿ ಬದಲಾಗಿದ್ದರಿಂದ ನಮ್ಮ ಪಾತ್ರ ಇರುವುದಿಲ್ಲ. ಸ್ಥಳೀಯವಾಗಿ ಸಿಐಡಿ ಅಧಿಕಾರಿಗಳಿಗೆ ಸಹಕಾರ ಬೇಕಿದ್ದರೇ ನೀಡುತ್ತೇವೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಕೇಳಿ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಪ್ರಕರಣ ಸಿಐಡಿಗೆ ವಹಿಸಬಹುದು. ಅಂತಹ ಕೇಸ್ ಕೊಡಬಹುದು, ಇಂತಹ ಕೇಸ್ ಕೊಡಬಾರದು ಅಂತೇನೂ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ: ಗುಜರಾತ್​ನಲ್ಲಿ ಸ್ಯಾಂಟ್ರೋ ರವಿ ಬಂಧನ: ಖಾಕಿ ಸ್ಪೆಷಲ್​ ಟೀಂ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ಸ್ಯಾಂಟ್ರೋ ರವಿ ಪ್ರಕರಣ; ಅಖಾಡಕ್ಕಿಳಿದ ಸಿಐಡಿ, ಮೈಸೂರಿನಲ್ಲಿ ಮಾಹಿತಿ ಸಂಗ್ರಹ

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಹೊಣೆಯನ್ನುಸಿಐಡಿ  ಕೈಗೆತ್ತಿಕೊಂಡಿದೆ. ತನಿಖೆಗಾಗಿ ಸಿಐಡಿ ತಂಡ ಮೈಸೂರಿಗೆ ಬಂದಿದ್ದು, ಪ್ರಾಥಮಿಕ ಮಾಹಿತಿ ಕಲೆ ಹಾಕಿದೆ. ಸಿಐಡಿ ಡಿವೈಎಸ್​ಪಿ ನರಸಿಂಹಮೂರ್ತಿ ನೇತೃತ್ವದ ತಂಡ ಸೋಮವಾರ ಸಂಜೆ ನಗರಕ್ಕೆ ಆಗಮಿಸಿ ಮೈಸೂರಿನ ವಿಜಯನಗರ ಉಪವಿಭಾಗದ ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಸಂಗ್ರಹಿಸಿದೆ. ಸಿಐಡಿ ತಂಡದಲ್ಲಿ ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳಿದ್ದು, ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಪಡೆದರು. ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವಹಿಸುವ ಬಗ್ಗೆ ಸೋಮವಾರ ಬೆಳಿಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಟಿವಿ9 ಗೆ ಮಾಹಿತಿ ನೀಡಿದ್ದರು.

ಏನಿದು ಸ್ಯಾಂಟ್ರೋ ರವಿ ಪ್ರಕರಣ?

ಪ್ರಸ್ತುತ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಅನೇಕ ಆರೋಪಗಳಿವೆ. ಇವುಗಳಲ್ಲಿ ಮಾಂಸದಂಧೆ, ದಶಕಗಳ ಕಾಲ ವೇಶ್ಯಾವಾಟಿಕೆ ನಡೆಸುತ್ತಿದ್ದುದು ಮತ್ತು ಇದ್ದಕ್ಕಿದ್ದಂತೆ ಪೊಲೀಸ್ ಇಲಾಖೆಯ ವರ್ಗಾವಣೆ ದಂಧೆಯಲ್ಲಿ ಶಾಮೀಲಾಗಿರುವುದೂ ಸೇರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?