ಮೈಸೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ (Santro Ravi) ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸ್ಯಾಂಟ್ರೊ ರವಿ ಪತ್ನಿ ಎನ್ನಲಾದ ಮಹಿಳೆ ಮೈಸೂರಿನ ದೇವರಾಜ ಠಾಣೆಯಲ್ಲಿ ತನ್ನ (ಮಹಿಳೆಯ) ಚೆಕ್ ಬುಕ್ನ್ನು ಸ್ಯಾಂಟ್ರೋ ರವಿ ದುರುಪಯೋಗ ಮಾಡಿಕೊಂಡಿದ್ದಾನೆ ಎಂದು ದೂರು ದಾಖಲಿಸಿದ್ದಾರೆ.
ಆಗಸ್ಟ 24 2022 ರಂದು ಮಹಿಳೆ ಮೈಸೂರಿನ ದೇವರಾಜ ಮಾರ್ಕೆಟ್ಗೆ ಹೋಗಿದ್ದರು. ಮಹಿಳೆ ಸ್ಕೂಟರ್ ಡಿಕ್ಕಿಯಲ್ಲಿ ಸಹಿ ಇರುವ ಎರಡು ಚೆಕ್ ಬುಕ್ ಇಟ್ಟಿದ್ದರು. ಸ್ಯಾಂಟ್ರೊ ರವಿ ಮತ್ತು ಪ್ರಕಾಶ್ ಸ್ಕೂಟರ್ ಡಿಕ್ಕಿ ಓಪನ್ ಮಾಡಿ ಚೆಕ್ಬುಕ್ಗಳನ್ನು ಕಳವು ಮಾಡಿದ್ದಾರೆ. ನಂತರ 2 ಚೆಕ್ಗಳನ್ನ ಬ್ಯಾಂಕ್ಗೆ ನೀಡಿದ್ದಾರೆ. ಇನ್ನೂ ಅವರ ಬಳಿ 2 ಚೆಕ್ಗಳು ಇವೆ. ಈ ಸಂಬಂಧ ಆ.24ರಂದು ದೇವರಾಜ ಠಾಣೆಗೆ ನಾನು (ಮಹಿಳೆ) ದೂರು ನೀಡಿದ್ದೇನೆ ಎಂದು ವಂಚನೆಗೊಳಾದ ಮಹಿಳೆ ಮಾಹಿತಿ ನೀಡಿದ್ದಾಳೆ. ಸದ್ಯ ಸ್ಯಾಂಟ್ರೊ ರವಿ ವಿರುದ್ಧ ಐಪಿಸಿ ಸೆಕ್ಷನ್ 465, 468, 506, 420 ಹಾಗೂ ಸೆಕ್ಷನ್ 34ರ ಅಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸಾಲ ತೀರಿಸಲಾಗದೆ ಸುಳ್ಳು ದೂರು ದಾಖಲಿಸಿದ್ದಾರೆ, ಸ್ಯಾಂಟ್ರೋ ರವಿ ತಪ್ಪು ಮಾಡಿಲ್ಲ: ವಕೀಲ ಹರೀಶ್
ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಸಿಐಡಿ ಅಧಿಕಾರಿಗಳಿಗೆ ದಾಖಲೆ ಪತ್ರಗಳನ್ನು ವರ್ಗಾಯಿಸಿದ್ದೇವೆ. ಸರ್ಕಾರದ ಆದೇಶದಂತೆ ಸಿಐಡಿ ಅಧಿಕಾರಿಗಳು ಮೈಸೂರಿಗೆ ಬಂದಿದ್ದಾರೆ. ಸಿಐಡಿ ಅಧಿಕಾರಿಗಳಿಗೆ ನಾವು ದಾಖಲೆ ಹಸ್ತಾಂತರಿಸಿದ್ದೇವೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ.
ತನಿಖಾಧಿಕಾರಿ ಬದಲಾಗಿದ್ದರಿಂದ ನಮ್ಮ ಪಾತ್ರ ಇರುವುದಿಲ್ಲ. ಸ್ಥಳೀಯವಾಗಿ ಸಿಐಡಿ ಅಧಿಕಾರಿಗಳಿಗೆ ಸಹಕಾರ ಬೇಕಿದ್ದರೇ ನೀಡುತ್ತೇವೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಕೇಳಿ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಪ್ರಕರಣ ಸಿಐಡಿಗೆ ವಹಿಸಬಹುದು. ಅಂತಹ ಕೇಸ್ ಕೊಡಬಹುದು, ಇಂತಹ ಕೇಸ್ ಕೊಡಬಾರದು ಅಂತೇನೂ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ: ಗುಜರಾತ್ನಲ್ಲಿ ಸ್ಯಾಂಟ್ರೋ ರವಿ ಬಂಧನ: ಖಾಕಿ ಸ್ಪೆಷಲ್ ಟೀಂ ಕಾರ್ಯಾಚರಣೆ ಹೇಗಿತ್ತು ಗೊತ್ತಾ?
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಹೊಣೆಯನ್ನುಸಿಐಡಿ ಕೈಗೆತ್ತಿಕೊಂಡಿದೆ. ತನಿಖೆಗಾಗಿ ಸಿಐಡಿ ತಂಡ ಮೈಸೂರಿಗೆ ಬಂದಿದ್ದು, ಪ್ರಾಥಮಿಕ ಮಾಹಿತಿ ಕಲೆ ಹಾಕಿದೆ. ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ನೇತೃತ್ವದ ತಂಡ ಸೋಮವಾರ ಸಂಜೆ ನಗರಕ್ಕೆ ಆಗಮಿಸಿ ಮೈಸೂರಿನ ವಿಜಯನಗರ ಉಪವಿಭಾಗದ ಎಸಿಪಿ ಶಿವಶಂಕರ್ರಿಂದ ಮಾಹಿತಿ ಸಂಗ್ರಹಿಸಿದೆ. ಸಿಐಡಿ ತಂಡದಲ್ಲಿ ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳಿದ್ದು, ಎಸಿಪಿ ಶಿವಶಂಕರ್ರಿಂದ ಮಾಹಿತಿ ಪಡೆದರು. ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವಹಿಸುವ ಬಗ್ಗೆ ಸೋಮವಾರ ಬೆಳಿಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಟಿವಿ9 ಗೆ ಮಾಹಿತಿ ನೀಡಿದ್ದರು.
ಪ್ರಸ್ತುತ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಅನೇಕ ಆರೋಪಗಳಿವೆ. ಇವುಗಳಲ್ಲಿ ಮಾಂಸದಂಧೆ, ದಶಕಗಳ ಕಾಲ ವೇಶ್ಯಾವಾಟಿಕೆ ನಡೆಸುತ್ತಿದ್ದುದು ಮತ್ತು ಇದ್ದಕ್ಕಿದ್ದಂತೆ ಪೊಲೀಸ್ ಇಲಾಖೆಯ ವರ್ಗಾವಣೆ ದಂಧೆಯಲ್ಲಿ ಶಾಮೀಲಾಗಿರುವುದೂ ಸೇರಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ