ಮುಡಾ ನಡುವೆ ಮತ್ತೊಂದು ಬಹುಕೋಟಿ ಭೂ ಹಗರಣ; ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ಆಸ್ತಿ ಕಬಳಿಕೆ ಆರೋಪ

ಮಂಡ್ಯ ಜಿಲ್ಲೆಯ ಪಾಂಡವಪುರದ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ಆಸ್ತಿ ಭೂಗಳ್ಳರ ಪಾಲಾಗ್ತಿದೆ. ಮೈಸೂರು ಉಪ ವಿಭಾಗಾಧಿಕಾರಿ ರಕ್ಷಿತ್ ಅವರು ಕೋಟ್ಯಾಂತರ ರೂ ಮೌಲ್ಯದ ಆಸ್ತಿ ಭೂಗಳ್ಳರಿಗೆ ಅಕ್ರಮ ಪರಭಾರೆ ಮಾಡುತ್ತಿದ್ದಾರೆ ಎಂದು ಚೆಲುವನಾರಾಯಣ ಸ್ವಾಮಿಯ ಭಕ್ತರಾಗಿರುವ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಮುಡಾ ನಡುವೆ ಮತ್ತೊಂದು ಬಹುಕೋಟಿ ಭೂ ಹಗರಣ; ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ಆಸ್ತಿ ಕಬಳಿಕೆ ಆರೋಪ
ಮೇಲುಕೋಟೆ
Follow us
| Updated By: ಆಯೇಷಾ ಬಾನು

Updated on:Jul 25, 2024 | 9:10 AM

ಮೈಸೂರು, ಜುಲೈ.25: ಮುಡಾ ಹಗರಣದ (Muda Scam) ನಡುವೆ ಮತ್ತೊಂದು ಬಹುಕೋಟಿ ಭೂ ಹಗರಣ ಆರೋಪ ಕೇಳಿ ಬಂದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ (Melukote Cheluvanarayana Swamy) ಆಸ್ತಿ ಭೂಗಳ್ಳರ ಪಾಲಾಗ್ತಿದೆ ಎನ್ನಲಾಗುತ್ತಿದೆ. ನೂರಾರು ಕೋಟಿ ಆಸ್ತಿ ಕಬಳಿಸಲು ಸಂಚು ಹಾಕಲಾಗಿದ್ದು ಮೈಸೂರು ಉಪ ವಿಭಾಗಾಧಿಕಾರಿ ರಕ್ಷಿತ್ ಅವರು ಕೋಟ್ಯಾಂತರ ರೂ ಮೌಲ್ಯದ ಆಸ್ತಿ ಭೂಗಳ್ಳರಿಗೆ ಅಕ್ರಮ ಪರಭಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಚೆಲುವನಾರಾಯಣ ಸ್ವಾಮಿಯ ಭಕ್ತರಾಗಿರುವ ರವಿಕುಮಾರ್ ಎಂಬುವವರು ಗಂಭೀರ ಆರೋಪ ಮಾಡಿದ್ದಾರೆ.

ತಮ್ಮ ಸ್ನೇಹಿತರಾದ ಕಂಟ್ರ್ಯಾಕ್ಟರ್ ಸತೀಶ್‌ಬಾಬು ರೆಡ್ಡಿಗೆ ಭೂಮಿ ಕೊಡಿಸಲು ಯತ್ನ ನಡೆದಿದೆ ಎಂದು ರವಿಕುಮಾರ್ ಅವರು ಆರೋಪ ಮಾಡಿದ್ದಾರೆ. ಮೈಸೂರಿನ ಕೆಸರೆ ಗ್ರಾಮ ವ್ಯಾಪ್ತಿಯಲ್ಲಿ 21.5 ಎಕರೆ ಭೂಮಿಯಲ್ಲಿ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. ಕೆಸರೆ ಗ್ರಾಮದ ಸರ್ವೆ ನಂಬರ್ 396, 397, 398 ಹಾಗೂ 399ಕ್ಕೆ ಸೇರಿದ ಭೂಮಿಯನ್ನು ಮಂಡ್ಯ ಜಿಲ್ಲೆ ನಗುವಿನಹಳ್ಳಿ ಗ್ರಾಮದ ಗೋಸೇಗೌಡ ಕುಟುಂಬ ದೇಗುಲಕ್ಕೆ ದೇಣಿಗೆಯಾಗಿ ನೀಡಿತ್ತು. ಆದರೆ ದೇವಾಲಯಕ್ಕೆ ಸೇರಿದ ಈ ಜಮೀನನ್ನು ಅನ್ಯರಿಗೆ ಪರಭಾರೆ ಮಾಡುವಲ್ಲಿ ಕಂದಾಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಜಮೀನನ್ನ ಮತ್ತೆ ದೇವಾಲಯದ ಹೆಸರಿಗೆ ವರ್ಗಾಯಿಸುವಂತೆ ದೂರುದಾರ ರವಿಕುಮಾರ್ ಆಗ್ರಹಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿರುವ ರವಿಕುಮಾರ್, ಮೇಲುಕೋಟೆ ದೇವಸ್ಥಾನದ ಆಸ್ತಿಯನ್ನು ಪುನರ್ ಸ್ಥಾಪಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ದೂರಿನ ಆಧಾರದ ಮೇಲೆ ಮಂಡ್ಯ ಜಿಲ್ಲಾಡಳಿತ ದಾಖಲೆ ಪರಿಶೀಲನೆ ನಡೆಸಿದೆ. ದೇವಾಲಯದ ಆಸ್ತಿಯನ್ನ ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿಕೊಟ್ಟಿರುವುದು ಕಾನೂನು ಪ್ರಕಾರ ಸರಿಯಲ್ಲ. ಪ್ರಕರಣ ಎಸಿ ಕೋರ್ಟ್‌ನಲ್ಲಿ ಇರುವಾಗಲೇ ಖಾಸಗಿಯವರಿಗೆ ಮಾಡಿಕೊಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಇದನ್ನು ಓದಿ: ನಮ್ಮ ಮೆಟ್ರೋ ಎರಡನೇ ಹಂತ ಕಾಮಗಾರಿ ವಿಳಂಬದಿಂದ ಹೆಚ್ಚಾದ ವೆಚ್ಚ, 40 ಸಾವಿರ ಕೋಟಿ ರೂ.ಗೆ ಏರಿಕೆ

ಮುಡಾ ಗದ್ದಲ.. ಮೈತ್ರಿ ನಾಯಕರಿಂದ ಅಹೋರಾತ್ರಿ ಧರಣಿ

ಸದನದಲ್ಲಿ ಮುಡಾ ಪ್ರಕರಣದ ಬಗ್ಗೆ ಚರ್ಚೆಗೆ ಅವಕಾಶ ನೀಡದಿದಕ್ಕೆ ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ವಿಧಾನಸಭೆ ಕಾರಿಡಾರ್​​ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಶಾಸಕರು ಭಜನೆ ಮೂಲಕ ಪ್ರತಿಭಟನೆ ನಡೆಸಿದ್ರು. ಮುಡಾ ಸೈಟ್ ನುಂಗಿದ ಸಿಎಂ ಸಿದ್ದರಾಮಯ್ಯಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:06 am, Thu, 25 July 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ