ಮುಡಾದಲ್ಲಿ ಮತ್ತೊಂದು ಹಗರಣ: ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಮಧ್ಯೆ, ಮುಡಾ ಮಾಜಿ ಅಧ್ಯಕ್ಷ ಹೆಚ್​.ವಿ.ರಾಜೀವ್ ಅವರು ನಡೆಸಿದ್ದಾರೆ ಎನ್ನಲಾಗಿರುವ​ ಅಕ್ರಮ ಬಯಲಾಗಿದೆ.

ಮುಡಾದಲ್ಲಿ ಮತ್ತೊಂದು ಹಗರಣ: ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ
ಮುಡಾ
Follow us
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ

Updated on: Sep 08, 2024 | 9:58 AM

ಮೈಸೂರು, ಸೆಪ್ಟೆಂಬರ್​ 08: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭಾಗಿಯಾಗಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಈ ಮಧ್ಯೆ, ಮುಡಾ ಮಾಜಿ ಅಧ್ಯಕ್ಷ ಹೆಚ್​.ವಿ.ರಾಜೀವ್ ಅವರು ನಡೆಸಿದ್ದಾರೆ ಎನ್ನಲಾಗಿರುವ​ ಅಕ್ರಮ ಬಯಲಾಗಿದೆ. ಆಯುಕ್ತರ ಅನುಮತಿ ಇಲ್ಲದೇ ಹೆಚ್​.ವಿ.ರಾಜೀವ್ ಒಂದೇ ದಿನದಲ್ಲಿ 848 ನಿವೇಶನಗಳ ಖಾತೆ ಮಾಡಿಸಿಕೊಂಡಿದ್ದಾರೆ.

ಮೈಸೂರು ಜ್ಞಾನ ಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ ಕೇರ್ಗಳ್ಳಿ, ನಗರ್ತಳ್ಳಿ ಮತ್ತು ಬಲ್ಲಹಳ್ಳಿ ಗ್ರಾಮದ ಒಟ್ಟು 252 ಎಕರೆ 10 ಗುಂಟೆ ಪ್ರದೇಶದಲ್ಲಿ ಬಡವಾಣೆ ನಿರ್ಮಾಣ ಮಾಡಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ 2018ರ ಆದೇಶದ ವಿರುದ್ಧವಾಗಿ ಬಡಾವಣೆ ನಿರ್ಮಾಣ ಮಾಡಲಾಗಿದೆ. ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಎಚ್.ವಿ ರಾಜೀವ್ ಅವರೇ ಅಧ್ಯಕ್ಷರಾಗಿದ್ದಾರೆ.

252 ಎಕರೆ ಜಾಗದ ಕೆಲವು ಸರ್ವೆ ನಂಬರ್​ಗಳು ವ್ಯಾಜ್ಯ ನ್ಯಾಯಾಲಯದಲ್ಲಿರುತ್ತೆ. ಹೀಗಾಗಿ ಸದರಿ ಬಡವಾಣೆಗಳ ನಿವೇಶನ ಹಕ್ಕುಗಳನ್ನ ಮುಡಾ ವರ್ಗಾವಣೆ ಮಾಡಬಾರದೆಂದು‌ ಆದೇಶವಿದೆ. ಹೀಗಿದ್ದರೂ ಹೆಚ್.ವಿ ರಾಜೀವ್ 848 ನಿವೇಶನಗಳನ್ನ ಒಂದೇ ದಿನದಲ್ಲಿ‌ ಮುಡಾದಿಂದ ಬಿಡುಗಡೆಗೊಳಿಸಿ ಖಾತೆ ಮಾಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ ಟೆನ್ಷನ್​ ನಡುವೆಯೂ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ ಸ್ಫೋಟ!

ಅದಷ್ಟೇ ಅಲ್ಲದೆ ಆಯುಕ್ತರ ಅನುಮೊದನೆ ಇಲ್ಲದಿದ್ದರೂ ತಾಂತ್ರಿಕ ಶಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೇರಿ ನಿವೇಶನಗಳನ್ನ ಬಿಡುಗಡೆಗೊಳಿಸಿಕೊಂಡಿದ್ದಾರೆ. ಈ ಬಗ್ಗೆ ವಿವರಣೆ ನೀಡುವಂತೆ ಸರ್ಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗೆ ಹಿಂದಿನ ಮುಡಾ ಆಯುಕ್ತ ನಟೇಶ್​​ ಪತ್ರ ಬರೆದಿರುವುದು ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ.

ಮುಡಾ ಹಗರಣ: ಆಯುಕ್ತ ಅಮಾನತು

ಸೈಟ್​ ಹಂಚಿಕೆ ಹಗರಣ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕವಾಗಿದ್ದ ಜಿ.ಟಿ ದಿನೇಶ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿತ್ತು. ಮುಡಾ ಹಗರಣದ ಆರೋಪ ಹೊತ್ತಿರುವ ಮಧ್ಯ ಆಯುಕ್ತರಾಗಿದ್ದ ದಿನೇಶ್​ ಕುಮಾರ್​ ಅವರನ್ನು ರಾಜ್ಯ ಸರ್ಕಾರ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ವರ್ಗಾಯಿಸಿತ್ತು. ಆದರೆ, ಇದೀಗ ರಾಜ್ಯಪಾಲರ ಆದೇಶಾನುಸಾರವಾಗಿ ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿತ್ತು. ಸಸ್ಪೆಂಡ್ ಮಾಡಿ ಕಾರ್ಯದರ್ಶಿ ಉಮಾದೇವಿ ಅವರು ಇಂದು (ಸೆಪ್ಟೆಂಬರ್ 02) ಆದೇಶ ಹೊರಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ