ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ AI ಕ್ಯಾಮೆರಾ: ಮಿತಿಗಿಂತ ಜಾಸ್ತಿ ವೇಗವಾಗಿ ವಾಹನ ಓಡಿಸಿದ್ರೆ ಬೀಳುತ್ತೆ ಫೈನ್..!

ಬೆಂಗಳೂರು-ಮೈಸೂರು ಎಕ್ಸಪ್ರೆಸ್ ​​ವೇಯಲ್ಲಿ ಅಪಘಾತ ಹೆಚ್ಚದಾ ಹಿನ್ನೆಲೆ ಇತ್ತೀಚಿಗೆ ಎಡಿಜಿಪಿ ಅಲೋಕ್​ ಕುಮಾರ್​ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಪಘಾತ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ಇದೀಗ ಎಕ್ಸಪ್ರೆಸ್​​ ವೇನಲ್ಲಿ ಎಎನ್​​ಪಿಆರ್ ಕ್ಯಾಮೆರಾ ಅಳವಡಿಸಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ AI ಕ್ಯಾಮೆರಾ: ಮಿತಿಗಿಂತ ಜಾಸ್ತಿ ವೇಗವಾಗಿ ವಾಹನ ಓಡಿಸಿದ್ರೆ ಬೀಳುತ್ತೆ ಫೈನ್..!
AL ಕ್ಯಾಮೆರಾ
Follow us
Shivaprasad
| Updated By: ವಿವೇಕ ಬಿರಾದಾರ

Updated on: Jul 29, 2023 | 8:58 AM

ಮೈಸೂರು: ಬೆಂಗಳೂರು-ಮೈಸೂರು ಎಕ್ಸಪ್ರೆಸ್ ​​ವೇಯಲ್ಲಿ (Bengaluru-Mysuru Expressway) ಅಪಘಾತ ಹೆಚ್ಚದಾ ಹಿನ್ನೆಲೆ ಇತ್ತೀಚಿಗೆ ಎಡಿಜಿಪಿ ಅಲೋಕ್​ ಕುಮಾರ್ (Alok Kumar)​ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಪಘಾತ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ಇದೀಗ ಎಕ್ಸಪ್ರೆಸ್​​ ವೇನಲ್ಲಿ ಎಎನ್​​ಪಿಆರ್ ಕ್ಯಾಮೆರಾ ಅಳವಡಿಸಲಾಗಿದೆ. ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ (Automatic Number Plate Recognition-ANPR) ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.

ಈ ಮೂಲಕ ಮಿತಿಗಿಂತ ಅತಿವೇಗದ ಚಾಲನೆ ಮತ್ತು ಒನ್​ವೇನಲ್ಲಿ ವಾಹನ ಚಾಲಯಿಸಿದರೇ ಬೆಂಗಳೂರು ಸಂಚಾರ ಪೊಲೀಸರು ದಂಡ ಹಾಕುತ್ತಾರೆ.  ಇನ್ನು ರಾಮನಗರ ಪೊಲೀಸರು ವಾಹನದ ವೇಗ ಕಂಡು ಹಿಡಿಯುವ ಇಂಟರ್ ಸೆಪ್ಟರ್ ಬಳಕೆಗೆ ಸಿದ್ದವಾಗಿದ್ದಾರೆ. ಇಂದಿ‌ನಿಂದ‌ ಹೈವೇ ಮೇಲೆ ಇಂಟರ್ ಸೆಪ್ಟರ್ (ಸ್ಪೀಡ್​ ರಾಡರ್ ಗನ್) ಬಳಸಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇಯಲ್ಲಿ ಎಸ್​ಒಎಸ್ ಬಾಕ್ಸ್; ಏನಿದು, ಬಳಸುವುದು ಹೇಗೆ?

ಎಕ್ಸಪ್ರೆಸ್​ವೇನಲ್ಲಿ ಸಂಭವಿಸಿದ ಅಪಘಾತಗಳು

ರಾಮನಗರ ಜಿಲ್ಲೆಯಲ್ಲಿ 55 ಕಿಮೀ, ಮಂಡ್ಯದಲ್ಲಿ 58 ಕಿಮೀ ಹಾಗೂ ಮೈಸೂರಿನಲ್ಲಿ 5 ಕಿಮೀ ಸೇರಿ ಒಟ್ಟು 118 ಕಿಮೀ ದೂರದ ಧಶಪಥ ಇದಾಗಿದೆ. ಈ ಮೂರೂ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಳೆದ 9 ತಿಂಗಳಲ್ಲಿ (2022 ರ ಸೆಪ್ಟೆಂಬರ್ ನಿಂದ 2023 ರ ಜೂನ್ ವರೆಗೆ) 595 ಅಪಘಾತಗಳು ಸಂಭವಿಸಿವೆ. 158 ಜನ ಜೀವ ಕಳೆದುಕೊಂಡಿದ್ದಾರೆ.

ಕೇವಲ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ‌ ಜನವರಿಯಿಂದ ಇಲ್ಲಿಯವರೆಗೆ 55 ಮಂದಿ‌ ಪ್ರಾಣ ಕಳೆದುಕೊಂಡಿದ್ದಾರೆ.‌ 52 ಮಂದಿ ತೀವ್ರ ಗಾಯಗೊಂಡಿದ್ದಾರೆ. ಇದೇ ಅವಧಿಯಲ್ಲಿ ‌ಹೊಸ ಬೈಪಾಸ್ ನಲ್ಲಿ 269 ಅಪಘಾತಗಳು ಸಂಭವಿಸಿ 92 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂಬುದು ಆಘಾತಕಾರಿ ಸಂಗತಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್