ಫಲಿತಾಂಶ ಬಳಿಕ ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗಬಹುದು: ಹೆಚ್ಡಿಡಿ
ಮೈಸೂರು: ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಏನು ಬೇಕಾದರೂ ಆಗಬಹುದು. ದೇಶದ ರಾಜಕಾರಣ ಕರ್ನಾಟಕಕ್ಕೂ ಅನ್ವಯಿಸುತ್ತೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಭವಿಷ್ಯ ನುಡಿದಿದ್ದಾರೆ. ಸೋನಿಯಾ ಗಾಂಧಿ ಏನು ನಿರ್ಧಾರ ತಗೋತಾರೋ ನೋಡೋಣ: ಡಿಸೆಂಬರ್ 9ರಂದು ಉಪಚುನಾವಣೆ ಬಂದ ಬಳಿಕ ಕರ್ನಾಟಕದಲ್ಲೂ ಬದಲಾವಣೆ ಆಗಬಹುದು. ಸೋನಿಯಾ ಗಾಂಧಿ ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡೋಣ ಎಂದು ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಹೆಚ್.ಡಿ.ದೇವೇಗೌಡರು ಹೀಗೆ ಹೇಳಿದ್ದಾರೆ. 2018ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬಂದಿರಲಿಲ್ಲ. […]
ಮೈಸೂರು: ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಏನು ಬೇಕಾದರೂ ಆಗಬಹುದು. ದೇಶದ ರಾಜಕಾರಣ ಕರ್ನಾಟಕಕ್ಕೂ ಅನ್ವಯಿಸುತ್ತೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಭವಿಷ್ಯ ನುಡಿದಿದ್ದಾರೆ.
ಸೋನಿಯಾ ಗಾಂಧಿ ಏನು ನಿರ್ಧಾರ ತಗೋತಾರೋ ನೋಡೋಣ: ಡಿಸೆಂಬರ್ 9ರಂದು ಉಪಚುನಾವಣೆ ಬಂದ ಬಳಿಕ ಕರ್ನಾಟಕದಲ್ಲೂ ಬದಲಾವಣೆ ಆಗಬಹುದು. ಸೋನಿಯಾ ಗಾಂಧಿ ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡೋಣ ಎಂದು ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಹೆಚ್.ಡಿ.ದೇವೇಗೌಡರು ಹೀಗೆ ಹೇಳಿದ್ದಾರೆ.
2018ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬಂದಿರಲಿಲ್ಲ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸಿದ್ದರು. ಆದ್ರೆ ಸಮ್ಮಿಶ್ರ ಸರ್ಕಾರದಿಂದ ಬೇಸತ್ತು 17 ಜೆಡಿಎಸ್-ಕಾಂಗ್ರೆಸ್ನ 17 ಶಾಸಕರು ರಾಜೀನಾಮೆ ನೀಡಿದ್ದರು. ಇದರಿಂದ ಬಹುಮತವಿಲ್ಲದೆ ಮೈತ್ರಿ ಸರ್ಕಾರ ಪತನವಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂತು.
ಈಗ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ ಕನಿಷ್ಠ 8 ಸ್ಥಾನಗಳಲ್ಲಿ ಗೆಲ್ಲಲೇಬೇಕಾದ ಅನಿವಾರ್ಯವಿದೆ. ಈಗ ದೇವೇಗೌಡರು ನೀಡಿದ ಹೇಳಿಕೆ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.